ಭಟ್ಕಳ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ರಾಜಕೀಯ ಚಟುವಟಿಕೆ ತುರುಸು ಪಡೆದುಕೊಂಡಿದ್ದು, ಭಟ್ಕಳ ಜೆಡಿಎಸ್ ಘಟಕದ ನೂತನ ಅಧ್ಯಕ್ಷರನ್ನಾಗಿ ನ್ಯಾಯವಾದಿ ರಾಜವರ್ಧನ ಎನ್. ನಾಯ್ಕ ಮತ್ತು ಪ್ರಧಾನ ಕಾರ್ಯದರ್ಶಿಯನ್ನಾಗಿ ನಾರಾಯಣ ಎನ್. ನಾಯ್ಕ ಅವರನ್ನು ನೇಮಕ ಮಾಡಿ ಜೆಡಿಎಸ್ ಉತ್ತರಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಗಣಪಯ್ಯ ಗೌಡ ಪ್ರಕಟಣೆ ಹೊರಡಿಸಿದ್ದಾರೆ. ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ. ದೇವೇಗೌಡ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನಿರ್ದೇಶನದಂತೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಗಣಪಯ್ಯ ಗೌಡ, ಆದೇಶ ಪತ್ರದಲ್ಲಿ ತಿಳಿಸಿದ್ದಾರೆ. ಇನ್ನುಳಿದಂತೆ ಜೆಡಿಎಸ್ ಭಟ್ಕಳ ಘಟಕದ ಸಹ ಕಾರ್ಯದರ್ಶಿಯಾಗಿ ಮಂಜುನಾಥ ಎಮ್. ನಾಯ್ಕ, ಸಂಘಟನಾ ಕಾರ್ಯದರ್ಶಿಯಾಗಿ ಶ್ರೀಧರ ಎನ್. ನಾಯ್ಕ, ಸಹ ಸಂಘಟನಾ ಕಾರ್ಯದರ್ಶಿಯಾಗಿ ಮಂಜುನಾಥ ಎಮ್, ಬಾಕಡ, ಖಜಾಂಚಿಯಾಗಿ ಸಣ್ಣು ಸುಕ್ರ ಗೊಂಡ ಅವರನ್ನು ನೇಮಕ ಮಾಡಲಾಗಿದೆ. ಇದರೊಂದಿಗೆ ಜೆಡಿಎಸ್ ಭಟ್ಕಳ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಇನಾಯಿತುಲ್ಲಾ ಶಾಬಂದ್ರಿ ಅಧಿಕಾರಾವಧಿ ಕೊನೆಗೊಂಡಂತಾಗಿದೆ