ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಭಟ್ಕಳ:ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಭಟ್ಕಳ:ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Mon, 03 Oct 2022 05:37:05  Office Staff   so news

ಭಟ್ಕಳ: ತಾಲೂಕು ಆಡಳಿತ, ಪುರಸಭೆ, ಜಾಲಿ ಪಟ್ಟಣ ಪಂಚಾಯತ್ ಹಾಗೂ ವಿವಿಧ ಇಲಾಖೆಗಳು ಮತ್ತು ಸಂಘ ಸಂಸ್ಥೆಗಳ ಸಹಯೋಗದಲ್ಲಿ ಮಹಾತ್ಮಾ ಗಾಂಧಿ ಹಾಗೂ ಲಾಲ್ ಬಹದ್ಧೂರ್ ಶಾಸ್ತಿ ಜಯಂತಿ ಪ್ರಯುಕ್ತ ಏರ್ಪಡಿಸಲಾಗಿದ್ದ ಕಾರ್ಯಕ್ರಮವನ್ನು ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್. ಉದ್ಘಾಟಿಸಿದರು. 
ಗಾಂಧಿ ಜಯಂತಿಯ ಪ್ರಯುಕ್ತ ಏರ್ಪಡಿಸಲಾದ ಸ್ವಚ್ಛತಾ ಜಾಗೃತಿ ಜಾಥಾದಲ್ಲಿ ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್., ತಹಸೀಲ್ದಾರ ಡಾ. ಸುಮಂತ ಬಿ.ಇ.,  ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಶಂಶುದ್ಧೀನ್  ವೃತ್ತದಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು. ನಂತರ ಸಹಾಯಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಸ್ವಚ್ಛತಾ ಅಭಿಯಾನದ ಭಿತ್ತಿಪತ್ರ ಪ್ರದರ್ಶಿಸಲಾಯಿತು. ಸಹಾಯಕ ಆಯುಕ್ತೆ ಮಮತಾದೇವಿ ಮಾತನಾಡಿ, ಪ್ರತಿಯೊಬ್ಬರೂ ತಮ್ಮ ಮನೆ, ಸುತ್ತಮುತ್ತಲ ಪರಿಸರದ ಸ್ವಚ್ಛತೆಗೆ ಗಮನಹರಿಸಬೇಕು ಎಂದರು. ಕಾರ್ಯಕ್ರಮದಲ್ಲಿ ತಹಸೀಲ್ದಾರ ಡಾ. ಸುಮಂತ ಬಿ.ಇ., ಪುರಸಭೆ ಅಧ್ಯಕ್ಷ ಪರ್ವೇಜ ಕಾಶೀಮಜಿ, ರೋಟರಿ ಕ್ಲಬ್‌ನ ರಾಜೇಶ ನಾಯಕ, ಶ್ರೀನಿವಾಸ ಪಡಿಯಾರ, ಕ್ರಿಯಾಶೀಲ ಗೆಳೆಯರ ಬಳಗದ ಶ್ರೀಕಾಂತ ನಾಯ್ಕ, ನ್ಯೂ ಇಂಗ್ಲೀಷ್ ಪಿಯು ಕಾಲೇಜಿನ ಪ್ರಾಂಶುಪಾಲ ವೀರೇಂದ್ರ ಶಾನಭಾಗ, ಜೆಸಿಐ ಅಧ್ಯಕ್ಷ ಪಾಂಡುರAಗ ನಾಯ್ಕ, ವಿದ್ಯಾಭಾರತಿ ಶಾಲೆಯ ಮುಖ್ಯಶಿಕ್ಷಕಿ ರೂಪಾ ಖಾರ್ವಿ, ಜಾಲಿ ಪ.ಪಂ. ಸದಸ್ಯೆ ಶಾಹಿನಾ ಶೇಖ ಮುಂತಾದವರಿದ್ದರು.  


Share: