ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಭಟ್ಕಳ: ಖಾಸಗಿ ಅಂಬುಲೆನ್ಸ್‌ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಭಟ್ಕಳ: ಖಾಸಗಿ ಅಂಬುಲೆನ್ಸ್‌ ಡಿಕ್ಕಿ ಹೊಡೆದು ವ್ಯಕ್ತಿ ಸಾವು

Sun, 16 Jul 2023 21:04:24  Office Staff   S O News

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66 ರ ಮಣ್ಕುಳಿ ಕ್ರಾಸ್ ಸಮೀಪ ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವನಿಗೆ ಖಾಸಗಿ ಆಂಬ್ಯುಲೆನ್ಸ್  ಢಿಕ್ಕಿ ಹೊಡೆದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವನು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪಿರುವ ಘಟನೆ ನಡೆದಿದೆ. 

ಮೃತ ವ್ಯಕ್ತಿಯನ್ನು ಜಯಂತ ಹೊನ್ನಪ್ಪ ನಾಯ್ಕ ಎಂದು ತಿಳಿದು ಬಂದಿದೆ. ಈತ ರೈಲ್ವೆ ಸ್ಟೇಶನ್ ಕಡೆಯಿಂದ ರಘುನಾಥ ಕಡೆಗೆ ಹೋಗಲು ರಸ್ತೆ ದಾಟುತ್ತಿದ್ದ ವೇಳೆ ಕುಂದಾಪುರ ಕಡೆಯಿಂದ ಹೊನ್ನಾವರದ ಕಡೆಗೆ ಅತಿ ವೇಗ ಹಾಗೂ ಅಜಾಗರುಕತೆಯಿಂದ ಚಲಾಯಿಸಿಕೊಂಡು ಬಂದ  ಆಂಬ್ಯುಲೆನ್ ಢಿಕ್ಕಿ ಹೊಡೆದ ಪರಿಣಾಮ ತಕ್ಷಣ ಈತನನ್ನು ಭಟ್ಕಳ  ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಪಿ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ  ಈ ಕುರಿತು ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ


Share: