ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಭಟ್ಕಳ: ಶ್ರೀ ಗುರು ಸುಧೀಂದ್ರ ಕಾಲೇಜಿನ ಬಿಬಿಎ ಅಂತಿಮ ವರ್ಷದ ಪರೀಕ್ಷೆಯಲ್ಲಿ ಶೇ.100 ಸಾಧನೆ

ಭಟ್ಕಳ: ಶ್ರೀ ಗುರು ಸುಧೀಂದ್ರ ಕಾಲೇಜಿನ ಬಿಬಿಎ ಅಂತಿಮ ವರ್ಷದ ಪರೀಕ್ಷೆಯಲ್ಲಿ ಶೇ.100 ಸಾಧನೆ

Fri, 28 Oct 2022 04:59:16  Office Staff   Press release

ಭಟ್ಕಳ: ಕವಿವಿ ಧಾರವಾಡ ಇವರು ನಡೆಸಿದ ಬಿಬಿಎ ಅಂತಿಮ ವರ್ಷದ ಪರೀಕ್ಷೆಯಲ್ಲಿ ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನ ವಿದ್ಯಾರ್ಥಿಗಳೆಲ್ಲರೂ ಉತ್ತೀರ್ಣರಾಗುವುದರೊಂದಿಗೆ 100% ಫಲಿತಾಂಶ ದಾಖಲಾಗಿದೆ.

ಸೀಮಾ ನಾಯ್ಕ ಶೇ.91.2, ರಾಹುಲ ಶಿರೂರಕರ ಶೇ.90.50, ಅನಿತಾ ನಾಯ್ಕ ಹಾಗೂ ಸಿಂಧು ಮೊಗೇರ ಶೇ.85.7 ಅಂಕ ಪಡೆದು ಕಾಲೇಜಿಗೆ ಹಾಗೂ ತಾಲೂಕಿಗೆ ಕೀರ್ತಿ ತಂದಿದ್ದಾರೆ.

ಈ ಸಾಧನೆಗೆ ಎಲ್ಲ ವಿದ್ಯಾರ್ಥಿಗಳನ್ನು ಭಟ್ಕಳ ಎಜುಕೇಶನ್ ಟ್ರಸ್ಟ'ನ  ಆಡಳಿತ ಮಂಡಳಿಯವರು, ಕಾಲೇಜಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ. 


Share: