ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಭಟ್ಕಳ. ಅಪರಿಚಿತ ಮಹಿಳೆಯ ಶವ ಪತ್ತೆ, ಅತ್ಯಾಚಾರ ಮಾಡಿ ಕೊಲೆಗೈದಿರುವ ಶಂಕೆ

ಭಟ್ಕಳ. ಅಪರಿಚಿತ ಮಹಿಳೆಯ ಶವ ಪತ್ತೆ, ಅತ್ಯಾಚಾರ ಮಾಡಿ ಕೊಲೆಗೈದಿರುವ ಶಂಕೆ

Tue, 24 May 2022 23:53:22  Office Staff   S O News

ಭಟ್ಕಳ:  ತಾಲೂಕಿನ ಗುಳ್ಮಿ ಸಮೀಪದ ತಲಾಂದ ಗ್ರಾಮದ  ಮಾಲ್ಕಿ ಜಮೀನಿನ ಗುಡ್ಡವೊಂದರಲ್ಲಿ ಅಪರಿಚಿತ ಮಹಿಳೆಯ ಕೊಳೆತ ಮೃತದೇಹ  ಪತ್ತೆಯಾಗಿದ್ದು, ಅತ್ಯಾಚಾರಗೈದು ಹತ್ಯೆಗೈದಿರಬಹುದು ಎಂದು ಶಂಕಿಸಲಾಗಿದೆ.

ಮಂಗಳವಾರ ಬೆಳಗ್ಗೆ ಮಹಿಳೆಯೊಬ್ಬರು ಈ ಸ್ಥಳದಿಂದ ಹಾದು ಹೋಗುತ್ತಿದ್ದಾಗ  ದುರ್ವಾಸನೆ ಕಂಡು ಬಂದಿದ್ದು, ದುರ್ವಾಸನೆ ಬರಲು ಕಾರಣ ತಿಳಿಯಲು ಯತ್ನಿಸಿದಾಗ ಪಕ್ಕದಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಬಿದ್ದಿರುವುದು ಕಂಡು ಬಂದಿದೆ. ಕೂಡಲೇ ಅವರು ಸಮೀಪದ ಪಂಚಾಯತ್ ಅಧಿಕಾರಿಗಳಿಗೆ ಘಟನೆ ಬಗ್ಗೆ ಮಾಹಿತಿ ನೀಡಿದ್ದು, ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಬೆಳಗ್ಗೆ 9:30ರ ಸುಮಾರಿಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಶವವನ್ನು ಪರಿಶೀಲನೆ ನಡೆಸಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರು.

ಶವವನ್ನು ನೋಡಿದಾಗ ಮೊದಲು ಅತ್ಯಾಚಾರ ಮಾಡಿ ನಂತರ ಕೊಲೆ ಮಾಡಿರಬಹುದು ಎಂಬುದು ಸ್ಪಷ್ಟವಾಗಿದೆ. ಮಹಿಳೆಗೆ ಸುಮಾರು 35 ರಿಂದ 40 ವರ್ಷ ಇರಬಹುದು,  ಸಾಗರ ರಸ್ತೆಯಲ್ಲಿರುವ ಅಥವಾ ಸಮೀಪದ ಗ್ರಾಮದ ಮಹಿಳೆ ಆಗಿರಬಹುದು ಎಂದು ಶಂಕಿಸಲಾಗಿದೆ.

ಶನಿವಾರ ಸಂಜೆ 6 ಗಂಟೆ ಸುಮಾರಿಗೆ ಗುಳ್ಮಿ ಕ್ರಾಸನಲ್ಲಿರುವ ಅಂಗಡಿ ಸಮೀಪ ಈ ಮಹಿಳೆಯನ್ನು 45/50 ವರ್ಷದ ವ್ಯಕ್ತಿಯೋರ್ವ ಬೈಕ್ ನಲ್ಲಿ ಕರೆದುಕೊಂಡು ಬಂದು ಅಲ್ಲಿಂದ ತಲಾಂದ ಗ್ರಾಮದ ನಿರ್ಜನ ಪ್ರದೇಶಕ್ಕೆ ಆಟೋ ಒಂದರಲ್ಲಿ ಕರೆದುಕೊಂಡು ಹೋಗಿ ಬಿಟ್ಟಿರುವ ಬಗ್ಗೆ ಗುಲ್ಮಿ ಜನರು ಪೊಲೀಸರಿಗೆ ತಿಳಿಸಿದ್ದಾರೆ.

ದೇಹದ ಗುರುತು ಇನ್ನೂ ಪತ್ತೆಯಾಗಿಲ್ಲ.  ಸ್ಥಳಕ್ಕೆ ಡಿವೈಎಸ್ಪಿ ಕೆ.ಯು ಬೆಳ್ಳಿಯಪ್ಪ, ಸಿ.ಪಿ.ಐ ಮಾಹಾಬಲೇಶ್ವರ ನಾಯ್ಕ, ಪಿ.ಎಸ್.ಐ ಗಳಾದ ರತ್ನ ಕೆ ಹಾಗೂ ಸುಮಾ ಆಚಾರ್ಯ ಭೇಟಿ ನೀಡಿ ಪರಿಶೀಲಿಸಿ ಮೃತ ಮಹಿಳೆಯ ಮೃತ ದೇಹವವನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದು ಪೊಲೀಸ ತನಿಖೆ  ಚುರುಕುಗೊಂಡಿದೆ.

 


Share: