ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಭೀಕರ ಅಪಘಾತಕ್ಕೆ ಸ್ಥಳದಲ್ಲೇ ಪಾದಚಾರಿ ಸಾವು!

ಭೀಕರ ಅಪಘಾತಕ್ಕೆ ಸ್ಥಳದಲ್ಲೇ ಪಾದಚಾರಿ ಸಾವು!

Fri, 30 Dec 2022 06:42:31  Office Staff   so news

ಭಟ್ಕಳ: ಹೆದ್ದಾರಿ ದಾಟುತ್ತಿದ್ದ ಪಾದಚಾರಿಯೋರ್ವನಿಗೆ ಖಾಸಗಿ ಬಸ್ಸೊಂದ್ದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಾವಿನಕಟ್ಟಾ ಕೋಕ್ತಿ ಕ್ರಾಸ್ ನಲ್ಲಿ ನಡೆದಿದೆ. 

ಮೃತ ಪಾದಚಾರಿಯನ್ನು ಹೊನ್ನಪ್ಪ ತಿಮ್ಮಯ್ಯ ನಾಯ್ಕ 66 ಎಂದು ತಿಳಿದು ಬಂದಿದೆ. ಈತ ಕೋಕ್ತಿ ಕ್ರಾಸ್ ನಿಂದ ಮಾವಿನಕಟ್ಟಾ ಮೀನು ಮಾರುಕಟ್ಟೆ ಕಡೆ ಹೋಗಲು ನಡೆದುಕೊಂಡು ರಸ್ತೆ ದಾಟುತ್ತಿದ್ದ ವೇಳೆ ಮುರುಡೇಶ್ವರ ಕಡೆಯಿಂದ ಭಟ್ಕಳ ಕಡೆಗೆ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಮಾನವೀಯ ಪ್ರಾಣಕ್ಕೆ ಅಪಾಯವಾಗುವಂತೆ ಚಲಾಯಿಸಿಕೊಂಡು ಬಂದು ಹೆದ್ದಾರಿ ದಾಟುತ್ತಿದ್ದ ಹೊನ್ನಪ್ಪ ತಿಮ್ಮಯ್ಯ ನಾಯ್ಕ ಈತನಿಗೆ ಢಿಕ್ಕಿ ಹೊಡೆದು ಪರಿಣಾಮ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದು ಅಪಘಾತದಲ್ಲಿ ದೇಹ ಭಾಗವನ್ನು ಸಂಪೂರ್ಣ ಚಿದ್ರ ಚಿದ್ರವಾಗಿತ್ತು.

ಈ ಕುರಿತು ಮುರುಡೇಶ್ವರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share: