ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಮಂಗಳೂರು ಕೋಳಿ ಫಾರಂ ಸಿಬ್ಬಂದಿಗಳ ಮೇಲೆ ಹಲ್ಲೆ ಪ್ರಕರಣ. ಆರೋಪಿಗಳ ವಿರುದ್ದ ಗೂಂಡಾ ಕಾಯ್ದೆ ದಾಖಲು

ಮಂಗಳೂರು ಕೋಳಿ ಫಾರಂ ಸಿಬ್ಬಂದಿಗಳ ಮೇಲೆ ಹಲ್ಲೆ ಪ್ರಕರಣ. ಆರೋಪಿಗಳ ವಿರುದ್ದ ಗೂಂಡಾ ಕಾಯ್ದೆ ದಾಖಲು

Fri, 22 Jul 2022 03:42:01  Office Staff   SO News

ಮಂಗಳೂರು: ಇತ್ತಿಚೇಗೆ ವೆಲೆನ್ಸಿಯಾ ಜಂಕ್ಷನ್‌ನಲ್ಲಿರುವ ಕೋಳಿ ಅಂಗಡಿಯೊಂದರ ಸಿಬ್ಬಂದಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ವಿರುದ್ಧ ಪೊಲೀಸರು ಗೂಂಡಾ ಕಾಯ್ದೆಯನ್ನು ದಾಖಲಿಸಿದ್ದಾರೆ.

ಆರೋಪಿಗಳಾದ ಜಲ್ಲಿಗುಡ್ಡೆ ಬಜಾಲ್‌ನ ನಿವಾಸಿ ಪ್ರೀತಂ ಪೂಜಾರಿ (26) ಮತ್ತು ಯೆಕ್ಕೂರಿನ ನಿವಾಸಿ ಧೀರು ಯಾನೆ ಧೀರಜ್ ಕುಮಾರ್ (27) ಕೊಲೆ ಯತ್ನ, ಅಪಹರಣ, ಕ್ರಿಮಿನಲ್ ಸಂಚು ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿಗಳಾಗಿದ್ದಾರೆ.

ಆರೋಪಿಗಳಿಬ್ಬರೂ ಸಮಾಜಕ್ಕೆ ಅಪಾಯಕಾರಿ ಎಂದು ಪರಿಗಣಿಸಲಾಗಿರುವುದರಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಅವರ ಮೇಲೆ ಗೂಂಡಾ ಕಾಯಿದೆಯನ್ನು ಹೊರಿಸಲಾಗಿದೆ ಎಂದು ಕಂಕನಾಡಿ ಪೊಲೀಸರು ತಿಳಿಸಿದ್ದಾರೆ.


Share: