ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಅರ್ಹರಿಂದ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ.

ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಅರ್ಹರಿಂದ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ.

Sat, 03 Sep 2022 03:43:24  Office Staff   SO News

ಕಾರವಾರ  : ಕರ್ನಾಟಕ ಸರ್ಕಾರದ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ವ್ಯಕ್ತಿಗಳಿಂದ ಹಾಗೂ ಸಂಸ್ಥೆಗಳಿಂದ ರಾಜ್ಯ ಪ್ರಶಸ್ತಿಗೆ ಅರ್ಜಿ ಅಹ್ವಾನಿಸಲಾಗಿದೆ. 

ಅರ್ಹ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ  5 ವರ್ಷ ಸೇವೆ ಸಲ್ಲಿಸಿದ  ಅಭ್ಯರ್ಥಿಗಳು ಮತ್ತು ಸಂಸ್ಥೆಗಳು ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ, ಕಾರವಾರ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಅಥವಾ ಕಾರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಲ್ಲಿ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಸೆ. 30 ರೊಳಗೆ ಕಾರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ಅವಧಿ ಮಿರಿದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. 
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ, ಕಾರವಾರ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಅಥವಾ ಕಾರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರ ಕಚೇರಿಗಳಿಗೆ ಸಂಪರ್ಕಿಸಿ ಎಂದು ಕಾರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ


Share: