ನವದೆಹಲಿ: ಮಹಾರಾಷ್ಟ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ರಾಜ್ಯಸಭೆಯಲ್ಲಿನ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿನ ರಾಜಕೀಯ ಬೆಳವಣಿಗೆ ಕುರಿತಂತೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಈ ಹಿಂದೆ ಕರ್ನಾಟಕ, ಮಧ್ಯಪ್ರದೇಶ ಮತ್ತು ಗೋವಾದಲ್ಲಿ ಮಾಡಿದಂತೆ ಮಹಾರಾಷ್ಟ್ರದಲ್ಲೂ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಪಕ್ಷ ಮಹಾ ವಿಕಾಸ್ ಆಘಾದಿ ಸರ್ಕಾರದೊಂದಿಗೆ ನಿಲ್ಲಲಿದೆ. ಒಟ್ಟಿಗೆ ಕೆಲಸ ಮಾಡಲು ನಾವು ಬಯಸುತ್ತೇವೆ. ಪ್ರಸ್ತುತದಲ್ಲಿನ ಮಹಾರಾಷ್ಟ್ರ ಸರ್ಕಾರ ಜನಪರ ಅಭಿವೃದ್ಧಿ ಕಾರ್ಯಗಳನ್ನು ಮಾಡಿರುವುದಾಗಿ ಖರ್ಗೆ ತಿಳಿಸಿದರು.