ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಉಡುಪಿ: ದೇವೇಗೌಡರಿಗೆ ಬುದ್ದಿ ಹೇಳುವಂತೆ ಕೋರಿ ರಾಷ್ಟ್ರಪತಿಗೆ ಬಿಜೆಪಿ ಮನವಿ

ಉಡುಪಿ: ದೇವೇಗೌಡರಿಗೆ ಬುದ್ದಿ ಹೇಳುವಂತೆ ಕೋರಿ ರಾಷ್ಟ್ರಪತಿಗೆ ಬಿಜೆಪಿ ಮನವಿ

Tue, 12 Jan 2010 02:38:00  Office Staff   S.O. News Service
ಉಡುಪಿ, ಜ.೧೧: ಮುಖ್ಯಮಂತ್ರಿ ಯಡಿಯೂರಪ್ಪರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಬುದ್ದಿವಾದ ಹೇಳುವಂತೆ ಕೋರಿ ಉಡುಪಿ ಜಿಲ್ಲಾ ಬಿಜೆಪಿ ಇಂದು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿತು.

ಎಚ್.ಡಿ.ದೇವೇಗೌಡರು ಮುಖ್ಯಮಂತ್ರಿಗಳನ್ನು ಉದ್ದೇಶಿಸಿ ಮಾನಹಾನಿಕರ, ಪ್ರಧಾನಿ ಪದದ ಘನತೆಗೆ ಧಕ್ಕೆ ತರುವ ರೀತಿಯಲ್ಲಿ ಅವಾಚ್ಯ ಶಬ್ದಗಳನ್ನು ಉಪಯೋಗಿಸಿ ಮಾತನಾಡಿರುವುದು ಖಂಡನೀಯವಾಗಿದೆ ಎಂದು ಬಿಜೆಪಿ ಮನವಿಯಲ್ಲಿ ತಿಳಿಸಿದೆ.

ಆದುದರಿಂದ ದೇವೇಗೌಡರಿಗೆ ಪ್ರಧಾನಿ ಹುದ್ದೆಯ ಘನತೆಗೆ  ಚ್ಯುತಿಯಾಗದಂತೆ ವ್ಯವಹರಿಸಬೇಕಾಗಿ ಬುದ್ದಿವಾದ ಹೇಳುವಂತೆ ಬಿಜೆಪಿ ರಾಷ್ಟ್ರಪತಿಯನ್ನು ಒತ್ತಾಯಿಸಿದೆ. ಮನವಿಯನ್ನು ಅಪರ ಜಿಲ್ಲಾಧಿಕಾರಿ ಟಿ.ಎಂ.ಪ್ರಭಾಕರ್ ಸ್ವೀಕರಿಸಿದರು. 

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಕಾಪು ಶಾಸಕ ಲಾಲಾಜಿ ಆರ್.ಮೆಂಡನ್, ಬಿಜೆಪಿ ಮುಖಂಡರಾದ ಉದಯ ಕುಮಾರ್ ಶೆಟ್ಟಿ, ಸುಧಾಕರ ಶೆಟ್ಟಿ, ದಿನಕರ ಶೆಟ್ಟಿ, ಭಾರತಿ ಚಂದ್ರಶೇಖರ್, ಇಂದಿರಾ ಶೇಖರ್, ಮಟ್ಟಾರ್ ರತ್ನಾಕರ ಹೆಗ್ಡೆ, ಸೋಮಶೇಖರ್ ಭಟ್, ಕಟಪಾಡಿ ಶಂಕರ ಪೂಜಾರಿ, ಸುರೇಶ್ ನಾಯಕ್, ಮಹೇಶ್ ಠಾಕೂರ್ ಮೊದಲಾದವರು ಉಪಸ್ಥಿತರಿದ್ದರು.

Share: