ಉಡುಪಿ, ಏಪ್ರಿಲ್ ೧೫: ನಗರ ಕೇಂದ್ರ ಗ್ರಂಥಾಲಯ ಪ್ರಾಧಿಕಾರ ಹಾಗೂ ಕರ್ನಾಟಕ ಗೃಹಮಂಡಳಿ ನಿವಾಸಿಗರ ಸಂಘ (ರಿ) ದೊಡ್ಡಣಗುಡ್ಡ, ಉಡುಪಿ. ಇವರ ಸಹಭಾಗಿತ್ವದಲ್ಲಿ ದಿನಾಂಕ: ೧೮-೦೪-೨೦೧೦ ರಂದು ಸಂಜೆ ೫-೦೦ ಗಂಟೆಗೆ ದೊಡ್ಡಣಗುಡ್ಡೆ ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಬಳಿಯ ಉದ್ಯಾನವನದಲ್ಲಿ ದೊಡ್ಡಣಗುಡ್ಡೆ ಶಾಖೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವನ್ನು ಏರ್ಪಡಿಸಲಾಗಿದೆ.
ಈ ಸಭೆಯ ಉದ್ಘಾಟನೆಯನ್ನು ಗೃಹ ಸಚಿವರು ಹಾಗೂ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ವಿ.ಎಸ್. ಅಚಾರ್ಯ ರವರು ನೆರವೇರಿಸುವರು. ನಾಮಫಲಕದ ಉದ್ಘಾಟನೆಯನ್ನು ಉಡುಪಿ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ನೆರವೇರಿಸುವರು. ಪುಸ್ತಕ ವಿಭಾಗದ ಉದ್ಘಾಟನೆಯನ್ನು ಮಾಜಿ ಕೇಂದ್ರ ಸಚಿವರು ಹಾಗೂ ರಾಜ್ಯ ಸಭಾ ಸದಸ್ಯರಾದ ಶ್ರೀ ಆಸ್ಕರ್ ಫೆರ್ನಾಂಡಿಸ್ ರವರು ನೆರವೇರಿಸುವರು. ಈ ಸಭೆಯ ಅಧ್ಯಕ್ಷತೆಯನ್ನು ಉಡುಪಿ ನಗರ ಸಭೆಯ ಅಧ್ಯಕ್ಷರಾದ ಶ್ರೀ ದಿನಕರ ಶೆಟ್ಟಿ ರವರು ವಹಿಸುವರು.
ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಶ್ರೀ ಅಂಬಾತನಯ ಮುದ್ರಾಡಿ, ಉಡುಪಿ ನಗರಾಭಿವೃದ್ಧಿ ಅಧ್ಯಕ್ಷರಾದ ಶ್ರೀ ಸುಧಾಕರ ಶೆಟ್ಟಿ, ಉಡುಪಿ ನಗರಸಭೆಯ ಪೌರಾಯುಕ್ತರಾದ ಶ್ರೀ ಗೋಕುಲದಾಸ್ ನಾಯಕ್, ಉಡುಪಿ ಅಂಬಲಪಾಡಿ ಶ್ರೀ ಜನಾರ್ಧನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿಗಳಾದ ಡಾ. ನಿ.ಬಿ. ವಿಜಯ ಬಲ್ಲಾಳ, ಉಡುಪಿ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಶ್ರೀ ಸುರೇಶ್ ಶೆಟ್ಟಿ, ಉಡುಪಿ ಖ್ಯಾತ ವಿಮರ್ಶಕರಾದ ಶ್ರೀ ಮುರಳೀಧರ ಉಪಾಧ್ಯ ಹಿರಿಯಡ್ಕ, ಮಲ್ಪೆ ಉದ್ಯಮಿರಾದ ಶ್ರೀ ಪ್ರಮೋದ್ ಮಧ್ವರಾಜ್ ರವರು ಭಾಗವಹಿಸುವರೆಂದು ಮುಖ್ಯ ಗ್ರಂಥಾಲಯಾಧಿಕಾರಿಗಳು ತಿಳಿಸಿರುತ್ತಾರೆ.