ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಮುಂದಿನ ಶೈಕ್ಷಣಿಕ ವರ್ಷದಿಂದ ಎನ್‌ಇಪಿ ರದ್ದು: ಸಿಎಂ

ಮುಂದಿನ ಶೈಕ್ಷಣಿಕ ವರ್ಷದಿಂದ ಎನ್‌ಇಪಿ ರದ್ದು: ಸಿಎಂ

Wed, 16 Aug 2023 05:43:04  Office Staff   Vb

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ನೂತನ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ ಇಪಿ) ರದ್ದು ಗೋಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕರ್ನಾಟಕ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಹಿಂದಿನ ಬಿಜೆಪಿ ಸರಕಾರ ಜಾರಿಗೆ ತಂದಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ) ಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಸಂಪೂರ್ಣ ರದ್ದುಗೊಳಿಸಲಾಗುವುದು ಎಂದರು. ಅಗತ್ಯವಾದ ಕೆಲವೊಂದು ಸಿದ್ಧತೆಗಳನ್ನು ಮಾಡಿಕೊಂಡು ಎನ್ ಇಸಿ ರದ್ದು ಗೊಳಿಸಬೇಕಿದೆ. ಈ ವರ್ಷ ಅದಕ್ಕೆ ಸಮಯ ಇರಲಿಲ್ಲ. ಚುನಾವಣೆ ಫಲಿತಾಂಶ ಬಂದು ಸರಕಾರ ರಚನೆ ಆಗುವ ವೇಳೆಗೆ ಶೈಕ್ಷಣಿಕ ವರ್ಷ ಆರಂಭವಾಗಿತ್ತು. ಮಧ್ಯದಲ್ಲಿ ಸಮಸ್ಯೆ ಆಗಬಾರದು ಎನ್ನುವ ಕಾರಣದಿಂದ ಈ ವರ್ಷ ಹಾಗೆಯೇ ಮುಂದುವರಿದಿದೆ ಎಂದು ಅವರು ಹೇಳಿದರು.

ಎನ್‌ಇಪಿಗೆ ಏಕ ಕಾಲದಲ್ಲಿ ವಿದ್ಯಾರ್ಥಿಗಳು, ಪೋಷಕರು ಮತ್ತು ಉಪನ್ಯಾಸಕರು ಹಾಗೂ ಶಿಕ್ಷಕರ ವಿರೋಧವಿದೆ. ಬಿಜೆಪಿ ದೇಶದಲ್ಲಿ ಎಲ್ಲಿಯೂನ್‌ ಇಪಿ ಜಾರಿಗೊಳಿಸದೆ, ಕರ್ನಾಟಕ ರಾಜ್ಯದಲ್ಲಿ ಮಾತ್ರ ಮೊದಲ ಬಾರಿಗೆ ಜಾರಿಗೊಳಿಸಿ ನಾಡಿನ ವಿದ್ಯಾರ್ಥಿ ಸಮೂಹದ ಹಿತಾಸಕ್ತಿಯನ್ನು ಬಲಿಕೊಟ್ಟಿದೆ ಎಂದು ಅವರು ಟೀಕಿಸಿದರು.


Share: