ಶಿರಸಿ: ನ.1 ರಿಂದ ಮೇ ಕೊನೆಯ ವರೆಗೆ ಕುಮಟಾ -ಶಿರಸಿ ರಾಷ್ಟ್ರೀಯ ಹೆದ್ದಾರಿ ಎಲ್ಲ ರೀತಿಯ ವಾಹನಗಳಿಗೆ ನಿರ್ಬಂಧಿಸಲಾಗುವುದು ಎಂದು ಬುಧವಾರ ಶಿರಸಿ, ಉಪವಿಭಾಗಾಧಿಕಾರಿ ದೇವರಾಜ್ ರ ಅಧ್ಯಕ್ಷತೆಯಲ್ಲಿ ಗುತ್ತಿಗೆದಾರ ಕಂಪನಿ ಆರ್. ಎನ್. ಎಸ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
ಸೇತುವೆ ಕಾಮಗಾರಿ ಹಾಗೂ ದೇವಿಮನೆ ಘಟ್ಟದಲ್ಲಿ ರಸ್ತೆ ಕಾಮಗಾರಿ ಹಿನ್ನೆಲೆಯಲ್ಲಿ ಈ ಮಹತ್ದ ನಿರ್ಣಯ ಕೈಗೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ
ನಂತರ ಮಾತನಾಡಿದ ಉಪವಿಭಾಗಾಧಿಕಾರಿ ದೇವರಾಜ್, ಆರ್ ಎನ್ಎಸ್ ಕಂಪನಿ ಹಾಗೂ ಹೆದ್ದಾರಿ ಪ್ರಾಧಿಕಾರ ರಸ್ತೆ ಕಾಮಗಾರಿ ಗೋಸ್ಕರ ಹೆದ್ದಾರಿ ಬಂದ್ ಮಾಡುವಂತೆ ಕೋರಿದ್ದರು. ಆ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಶಿರಸಿ ಉಪ ವಿಭಾಗ ವ್ಯಾಪ್ತಿಗೆ ಬರುವ ಶಿರಸಿ ಕುಮಟಾ ಹೆದ್ದಾರಿಯಲ್ಲಿ 33 ಕಿ.ಮಿ.ನಲ್ಲಿ 27ಕಿ.ಮಿ ರಸ್ತೆ ಕಾಮಗಾರಿ ಮುಗಿದಿದೆ. ಆದರೆ ಸಣ್ಣ ಹಾಗೂ ದೊಡ್ಡ ಸೇತುವೆಗಳು ಸೇರಿ ಒಟ್ಟು 9 ಸೇತುವೆಗಳ ಕಾಮಗಾರಿ ನಡೆಯಬೇಕಿದೆ. ಜೊತೆಗೆ ದೇವಿಮನೆ ಘಾಟ್ನಲ್ಲಿ ಕಾಮಗಾರಿ ನಡೆಯಬೇಕಿದೆ. ಸೇತುವೆ ಕಾಮಗಾರಿ ನಡೆಯುವ ಸಮಯದಲ್ಲಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸುವುದು ಕಷ್ಟಸಾಧ್ಯವಾದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.
ಬಂದ್ ಆಗಲಿರುವ ಶಿರಸಿ ಕುಮಟಾ ಹೆದ್ದಾರಿ ಸಂಪರ್ಕಿಸುವ ರಸ್ತೆಗಳಲ್ಲಿ ಈ ಬಗ್ಗೆ ಮಾಹಿತಿ ಇರುವ ಬೋರ್ಡ್ ಗಳನ್ನು ಹಾಕಿ ಜನರಿಗೆ ಮಾಹಿತಿ ನೀಡುವಂತೆ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ.