ಕಲಬುರಗಿ : ಕಲಬುರಗಿ ನಗರದ ಪೊಲೀಸ್ ಪರೇಡ್ ಮೈದಾನದ ರಸ್ತೆಯಲ್ಲಿ 18.50 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದ ಕಟ್ಟಡವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.
ನಂತರ ನೂತನ ಕಟ್ಟಡವನ್ನು ಸಚಿವ-ಶಾಸಕರೊಂದಿಗೆ ವೀಕ್ಷಿಸಿದರು. ಮುಖ್ಯಮಂತ್ರಿಗಳು ವಿಸಿಟರ್ ವಹಿಯಲ್ಲಿ ಹಸ್ತಾಕ್ಷರ ಮಾಡಿ, ನೂತನ ಕಚೇರಿಗೆ ಕೂಡಲೆ ಕಚೇರಿ ವರ್ಗಾಸಯಿಸಿ ಕೆಲಸ ಅರಂಭಿಸುವಂತೆ ನಗರ ಪೊಲೀಸ್ ಆಯುಕ್ತ ಡಾ.ವೈ.ಎಸ್.ರವಿಕುಮಾರ ಅವರಿಗೆ ಸೂಚಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಪೊಲೀಸ್ ಆಯುಕ್ತ ಡಾ.ವೈ.ಎಸ್.ರವಿಕುಮಾರ ಅವರು ನೆನಪಿನ ಕಾಣಿಕೆ ನೀಡಿ ಸತ್ಕರಿಸಿದರು. ಇದಕ್ಕೂ ಮೊದಲು ಪೊಲೀಸ್ ತುಕಡಿಯಿಂದ ಮುಖ್ಯಮಂತ್ರಿಗಳಿಗೆ ಗೌರವ ವಂದನೆ ಸಲ್ಲಿಸಲಾಯಿತು.
ಕೇಂದ್ರ ರಸಾಯನಿಕ, ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ಇಲಾಖೆಯ ರಾಜ್ಯ ಸಚಿವ ಭಗವಂತ ಖೂಬಾ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಮುರುಗೇಶ ಆರ್. ನಿರಾಣಿ, ತೋಟಗಾರಿಕೆ ಮತ್ತು ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಸಚಿವ ಮುನಿರತ್ನ ಅವರು ಮುಖ್ಯಮಂತ್ರಿಗಳಿಗೆ ಸಾಥ್ ನೀಡಿದರು.
ಕಲಬುರಗಿ ದಕ್ಷಿಣ ಶಾಸಕ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಸಿ. ಪಾಟೀಲ ರೇವೂರ, ಕೆ.ಕೆ.ಆರ್.ಟಿ.ಟಿ ಮತ್ತು ಕಲಬುರಗಿ-ಯಾದಗಿರಿ ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷರು ಹಾಗೂ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ವಿಧಾನ ಪರಿಷತ್ ಶಾಸಕ ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ, ಸಂಸದ ಡಾ. ಉಮೇಶ ಜಾಧವ, ವಿಧಾನಸಭೆ ಶಾಸಕ ಬಸವರಾಜ ಮತ್ತಿಮಡು, ಡಾ. ವಿಧಾನ ಪರಿಷತ್ ಶಾಸಕರುಗಳಾದ ಶಶೀಲ ಜಿ. ನಮೋಶಿ, ಡಾ. ಬಿ.ಜಿ.ಪಾಟೀಲ, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ಅಧ್ಯಕ್ಷ ಚಂದ್ರಕಾಂತ ಜಿ. ಪಾಟೀಲ (ಚಂದು ಪಾಟೀಲ), ಎ.ಡಿ.ಜಿ.ಪಿ. (ಗೃಹ ಮಂಡಳಿ) ಅರುಣ ಚಕ್ರವರ್ತಿ, ಐ.ಜಿ.ಪಿ. ಮನಿಷ್ ಖರ್ಬಿಕರ್, ಡಿ.ಸಿ.ಯಶವಂತ ವಿ. ಗುರುಕರ್, ಡಿ.ಸಿ.ಪಿ. ಅಡ್ಡೂರು ಶ್ರೀನಿವಾಸಲು, ಎಸ್.ಪಿ.ಇಶಾ ಪಂತ್, ಹೆಚ್ಚುವರಿ ಎಸ್.ಪಿ. ಪ್ರಸನ್ನ ದೇಸಾಯಿ ಸೇರಿದಂತೆ ಇನ್ನಿತರ ಜನಪ್ರತಿನಿಧಿಗಳು, ಅಧಿಕಾರಿಗಳು ಇದ್ದರು.