ಭಟ್ಕಳ: ರಸ್ತೆ ದಾಟುತ್ತಿದ್ದ ಪಾದಚಾರಿಯೊಬ್ಬರಿಗೆ ವೇಗವಾಗಿ ಚಲಿಸುತ್ತಿದ್ದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆ ಸಾಗಿಸುವಾಗ ಮಾರ್ಗ ಮದ್ಯದಲ್ಲೇ ಸಾವನಪ್ಪಿರುವ ಘಟನೆ ಮಂಗಳವಾರ ವರದಿಯಾಗಿದೆ.
ತೆರ್ನಮಕ್ಕಿ ಪಂಚಾಯತ್ ವ್ಯಾಪ್ತಿಯ ರಾ.ಹೆ.೬೬ರಲ್ಲಿ ಈ ಘಟನೆ ನಡೆದಿದ್ದು ಹೆದ್ದಾರಿ ಬದಿಯಿಂದ ಸಭಾತಿ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ಶಿಕ್ಷಕ ಪ್ರಾನ್ಸಿಸ್ ಅಂತೋನಿ ಗೋಮ್ಸ್(೫೫) ರಿಗೆ ಭಟ್ಕಳ ಕಡೆಯಿಂದ ಹೊನ್ನಾವರಕ್ಕೆ ಪ್ರಯಾಣಿಸುತ್ತಿದ್ದ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.
ಅಪಘಾತಕ್ಕೆ ಕಾರಣನಾದ ಕಾರು ಚಾಲಕನನ್ನು ಬೈಂದೂರು ತಾಲೂಕಿ ಗಂಗನಾಡಿ ನಿವಾಸಿ ಸತೀಶ್ ಆಚಾರಿ ಎಂದು ಗುರುತಿಸಲಾಗಿದ್ದು ಕಾರು ಚಾಲಕ ಸೇರಿದಂತೆ ಓರ್ವ ಪ್ರಯಾಣಿಕ ಕೂಡ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಈ ಕುರಿತಂತೆ ಮುರುಢೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.