ಧಾರವಾಡ : ಜೂನ್ 25ರಂದು ಜರಗುವ ಮೆಗಾ ಲೋಕ್ ಅದಾಲತ್ ಕುರಿತು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಉಮೇಶ ಅಡಿಗ ಅವರು ಇಂದು ತಮ್ಮ ಕಚೇರಿಯಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಧೀಶರೊಂದಿಗೆ ಪೂರ್ವಭಾವಿ ಸಭೆ ನಡೆಸಿದರು.
ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಹಾಗೂ ರಾಜಿ ಆಗಬಹುದಾದಂತ ವ್ಯಾಜ್ಯಗಳನ್ನು ಲೋಕ್ ಅದಾಲತ್ ನಲ್ಲಿ ಇತ್ಯರ್ಥ ಪಡಿಸಲು ಸಲಹೆ ನೀಡಿದರು.