ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಮೇ.28ರಂದು ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ

ಮೇ.28ರಂದು ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ

Thu, 12 May 2022 15:32:23  Office Staff   SO News

ಧಾರವಾಡ  : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 21 ನೇ ಅವಧಿಯ ಮಹಾಪೌರ ಹಾಗೂ ಉಪಮಹಾಪೌರ ಸ್ಥಾನಗಳಿಗೆ ಮೇ.28 ರಂದು ಚುನಾವಣೆ ನಡೆಸಲಾಗುವುದು ಎಂದು ಚುನಾವಣಾಧಿಕಾರಿಗಳೂ ಆಗಿರುವ ಬೆಳಗಾವಿ ವಿಭಾಗ ಪ್ರಾದೇಶಿಕ ಆಯುಕ್ತ ಆಮ್ಲನ್ ಆದಿತ್ಯ ಬಿಸ್ವಾಸ್ ತಿಳಿಸಿದ್ದಾರೆ.

 ಈ ಕುರಿತು ಪ್ರಕಟಣೆ ನೀಡಿರುವ ಅವರು, ಮಹಾಪೌರ ಸ್ಥಾನವು ಸಾಮಾನ್ಯ ವರ್ಗ, ಉಪಮಹಾಪೌರ ಸ್ಥಾನವು ಸಾಮಾನ್ಯ ಮಹಿಳಾ ವರ್ಗಕ್ಕೆ ಮೀಸಲಿಡಲಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಮೇ.28 ರಂದು ಚುನಾವಣೆ ನಡೆಯಲಿದೆ. ಅಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಾಮಪತ್ರಗಳನ್ನು ಸ್ವೀಕರಿಸಲಾಗುವುದು. ಮಧ್ಯಾಹ್ನ 3 ಗಂಟೆಗೆ ಸಭೆ ಪ್ರಾರಂಭವಾಗುವುದು. ನಾಮಪತ್ರಗಳ ಪರಿಶೀಲನೆ ನಂತರ ಉಮೇದುವಾರರ ಘೋಷಣೆ ನಾಮಪತ್ರ ಹಿಂಪಡೆಯಲು ಅವಕಾಶ ಕಲ್ಪಿಸಲಾಗುವುದು. ಅಗತ್ಯವಿದ್ದರೆ ಕೈ ಎತ್ತುವ ಮೂಲಕ ಮತದಾನ ನಡೆಸಿ ಮಹಾಪೌರ ಹಾಗೂ ಉಪಮಹಾಪೌರರನ್ನು ಚುನಾಯಿಸಲಾಗುವುದು ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.


Share: