ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ವಿಜಯಪುರ: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ರಾಷ್ಟ್ರಪತಿಗೆ ದೂರು

ವಿಜಯಪುರ: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ರಾಷ್ಟ್ರಪತಿಗೆ ದೂರು

Sat, 20 May 2023 15:34:48  Office Staff   Vb

ವಿಜಯಪುರ: ವಿಧಾನಸಭಾ ಚುನಾವಣೆಯಲ್ಲಿ ನಕಲಿ ಮತದಾನ ಮಾಡಿಸಿದ್ದಾರೆ. ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ವಿರುದ್ಧ ರಾಷ್ಟ್ರಪತಿಗೆ ದೂರು ಸಲ್ಲಿಸಲಾಗಿದೆ.

ಗುರುವಾರ ವಿಜಯಪುರ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಕಂಡಿದ್ದ ಅಬ್ದುಲ್ ಹಮೀದ್‌ ಮುಶ್ರಫ್, ಜಿಲ್ಲಾಧಿಕಾರಿಯ ಮೂಲಕ ರಾಷ್ಟ್ರಪತಿಗೆ ದೂರು ಸಲ್ಲಿಸಿದ್ದಾರೆ. ಯತ್ನಾಳ್ ಅಧ್ಯಕ್ಷರಾಗಿರುವ ಸಿದ್ಧಸಿರಿ ಸಂಸ್ಥೆಯ ಬ್ಯಾಂಕ್ ಸಿಬ್ಬಂದಿ, ಸಕ್ಕರೆ ಕಾರ್ಖಾನೆ ಸಿಬ್ಬಂದಿ ಹೆಸರಲ್ಲಿ ನಕಲಿ ಮತದಾನ ಮಾಡಿಸಿದ್ದಾರೆ. ನಕಲಿ ಮತದಾನದ ಬಗ್ಗೆ ಸಾಕ್ಷಿ ನೀಡಿದರೂ ಚುನಾವಣಾ ಆಯೋಗ ಕ್ರಮ ಕೈಗೊಂಡಿಲ್ಲ. ಇದರಲ್ಲಿ ಕೆಲ ಅಧಿಕಾರಿಗಳು ಶಾಮೀಲಾಗಿದ್ದಾರೆ. ಅಂತಹವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ.

ಚುನಾವಣೆಯಲ್ಲಿ ಧರ್ಮಾಧಾರಿತ ರಾಜಕಾರಣದ ಕಾರಣಕ್ಕೆ ವಿಜಯಪುರ ನಗರ ಕ್ಷೇತ್ರ ಗಮನ ಸೆಳೆದಿದ್ದು, ಇದೀಗ ಯತ್ನಾಳ್ ವಿರುದ್ಧ ಪರಾಜಿತ ಅಭ್ಯರ್ಥಿ ದೂರು ನೀಡಿದ್ದು ಗಮನ ಸೆಳೆದಿದೆ.


Share: