ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ವಿದ್ಯುಕ್ತವಾಗಿ ಚಾಲನೆಗೊಂಡ ಭಟ್ಕಳ ಮಾರಿ ಜಾತ್ರೆ

ವಿದ್ಯುಕ್ತವಾಗಿ ಚಾಲನೆಗೊಂಡ ಭಟ್ಕಳ ಮಾರಿ ಜಾತ್ರೆ

Thu, 28 Jul 2022 06:01:21  Office Staff   SO NEWS

 

ಭಟ್ಕಳ: ತಾಲೂಕಿನ ಸುಪ್ರಸಿದ್ದ ಮಾರಿ ಜಾತ್ರೆಯೂ ಬುಧವಾರದಂದು ಬೆಳಿಗ್ಗೆ 5.30ಕ್ಕೆ ಇಲ್ಲಿನ ಮಾರಿಕಾಂಬಾ ದೇವಸ್ಥಾನದ ಗದ್ದುಗೆ ಏರುವುದರ ಮೂಲಕ ವಿದ್ಯುಕ್ತವಾಗಿ ಚಾಲನೆಗೊಂಡಿತು.
ಮಂಗಳವಾರದಂದು ರಾತ್ರಿ ಮಾರಿ ದೇವಿ ಮೂರ್ತಿಯ ತಯಾರಕ ವಿಶ್ವಕರ್ಮ ಸಮಾಜದವರಿಂದ ವಿಶೇಷ ಪೂಜೆಯ ಬಳಿಕ ನಂತರ ಮಾರಿ ದೇವಿಯ ಮೂರ್ತಿಯನ್ನು ಮುಂಜಾನೆ ಮೆರವಣಿಗೆಯ ಮೂಲಕ ಕರೆತಂದು ಸಂಪ್ರದಾಯದಂತೆ ಜೈನ ಸಮುದಾಯದವರಿಂದ ಮಾರಿ ದೇವಿಗೆ ಮೊದಲ ಪೂಜೆ ಸಲ್ಲಿಸಲಾಯಿತು 

ಜಿಲ್ಲೆಯಲ್ಲಿಯೇ ಅತ್ಯಂತ ವಿಜೃಂಬಣೆಯಿಂದ ಅದ್ದೂರಿಯಾಗಿ ನಡೆಯುವ ಮಾರಿ ಜಾತ್ರೆಗಳಲ್ಲಿ ಭಟ್ಕಳ ತಾಲೂಕಿನ ಮಾರಿ ಜಾತ್ರೆಯು ಸಹ ಒಂದು. ಸುಮಾರು 25 ವರ್ಷಗಳ ಹಿಂದೆ ಮಾರಿಜಾತ್ರೆ ಸಂಪೂರ್ಣವಾಗಿ ಗ್ರಾಮದೇವತೆಯ ಉತ್ಸವವಾಗಿದ್ದು, ಹಿಂದುಳಿದವರ ಹಾಗೂ ಪರಿಶಿಷ್ಠ ಜಾತಿ ಪಂಗಡದವರ ಮುಂದಾಳತ್ವದಲ್ಲಿ ನಡೆಯುತಿದ್ದ ವಿಶಿಷ್ಠ ಜಾತ್ರೆಯಾಗಿತ್ತು. 

ಬುಧವಾರದಂದು ಮುಂಜಾನೆ ಕರೆತರಲಾದ ಮಾರಿದೇವಿಯ ಮೂರ್ತಿಯನ್ನು ಮಾರಿಕಾಂಬಾ ದೇವಿಯ ಎದುರಿನ ಪ್ರಾಂಗಣದ ಗರ್ಭಗುಡಿಯ ಹೊರಗಡೆ ಮಾರಿದೇವಿಯನ್ನು ಪ್ರತಿಷ್ಠಾಪನೆ ಮಾಡಲಾಯಿತು. 

ಕೋವಿಡ್ ಹಿನ್ನೆಲೆ ಕಳೆದ ಎರಡು  ವರ್ಷಗಳ ಕಾಲ ದೇವಸ್ಥಾನದ ಆಡಳಿತ ಮಂಡಳಿ ವಿಧಿ ವಿಧಾನಗಳ ಮೂಲಕ ಮಾರಿ ಜಾತ್ರೆ ಆಚರಿಸಿದ್ದು  ಈ ಭಾರಿ ವಿಜೃಂಬಣೆಯಿಂದ ಆಚರಿಸಲಾಗುತ್ತಿದೆ 

ಎರಡು ದಿವಸ ನಡೆಯುವ ಈ ಜಾತ್ರೆಯಲ್ಲಿ ಬುಧವಾರದಂದು ಮೊದಲನೇ ದಿವಸ ಪರ ಊರಿನವರು ಮನೆಯಲ್ಲಿ ಹಬ್ಬ ಆಚರಿಸಿದ್ದಾರ. ಎರಡನೇ ದಿನವಾದ ಗುರುವಾರದಂದು ಸ್ಥಳೀಯರು ಹಬ್ಬ ಆಚರಿಸುತ್ತಾರೆ. ಈ ಹಬ್ಬದ ಹೆಸರಿನಲ್ಲಿ ಭಕ್ತರು ಕೋಳಿಯನ್ನು ತಮ್ಮ ಮನೆಯಲ್ಲಿಯೇ ಕತ್ತರಿಸಿ ದೇವಿಗೆ ರಕ್ತ ಸಮರ್ಪಿಸುವ ಆಚರಣೆಯೂ ಉಂಟು. ಸಂಭ್ರಮದಿಂದ ಜರುಗುವ ಈ ಜಾತ್ರೆಯಲ್ಲಿ ಅಕ್ಕ ಪಕ್ಕದ ತಾಲೂಕಿನಿಂದಲು ಭಕ್ತರು ಬಂದು ದೇವಿಯ ಆಶೀರ್ವಾದ ಪಡಿದುಕೊಳ್ಳುತ್ತಾರೆ. ಮೊದಲ ದಿನವಾದ ಇಂದು ಸಾವಿರಾರು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ದೇವರ ದರ್ಶನ ಪಡೆದುಕೊಂಡರು 

ಮಾರಿರೂಪದಲ್ಲಿ ಕುಳಿತಿರುವ ಈ ದೇವಿಗೆ ಭಕ್ತರು ಊರಿಗೆ ಬರಬಹುದಾದ ಕಣ್ಣು ಬೇನೆ, ಸಿಡುಬು ಹಾಗು ಇನ್ನಿತರ ಸಾಂಕ್ರಾಮಿಕ ರೋಗಗಳು ಬಾರದೇ ತಡೆಗಟ್ಟುವಂತೆ ಭಕ್ತಿಯಿಂದ ಹೂವಿನ ಟೋಪಿ, ಎಲೆಯಿಂದ ಮಾಡಿದ ಹೂ ಕಟ್ಟು, ಬೆಳ್ಳಿಯ ಕಣ್ಣುಗಳನ್ನು ಅರ್ಪಿಸಿ ಕಾಪಾಡುವಂತೆ ಮೊರೆ ಇಡುವುದು ಈ ಜಾತ್ರೆಯ ವಿಶೇಷತೆಗಳಲ್ಲಿ ಒಂದಾಗಿದ್ದು, ಈ ಬಾರಿಯೂ ಸಹ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಹರಕೆ ತಿರಿಸುವಲ್ಲಿ ಪಾಲ್ಗೊಂಡಿದ್ದಾರೆ. ಪ್ರತಿ ವರ್ಷವೂ ಕೂಡಾ ತಮಗೆ ಬಂದ ಕಷ್ಟ ಕಾರ್ಪಣ್ಯಗಳು ದೂರಾಗಲಿ ಎಂದು ಹರಿಕೆ ಹೊತ್ತ ಭಕ್ತರು, ವಾರ್ಷಿಕ ಜಾತ್ರೆಯಲ್ಲಿ ಹರಿಕೆ ತೀರಿಸುವುದು ವಾಡಿಕೆಯಾಗಿದೆ. 

ಬೆಳ್ಳಿಗೆ ಸಹಾಯಕ ಆಯುಕ್ತೆ ಮಮತಾ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಮಾರಿಯಮ್ಮನ ದರ್ಶನ ಪಡೆದುಕೊಂಡರು 

ಇಂದು ಸಂಜೆ 4.30ಕ್ಕೆ ಮಾರಿ ಮೂರ್ತಿಯನ್ನು ವಾಹನದಲ್ಲಿ ಕೊಂಡೊಯ್ದು ಸಮುದ್ರದಲ್ಲಿ ವಿಸರ್ಜಿಸುವ ಮೂಲಕ ಜಾತ್ರಾ ಮಹೋತ್ಸವಕ್ಕೆ ತೆರೆ ಎಳೆಯಲಾಗುತ್ತದೆ. 

ಜಾತ್ರೆ ಹಿನ್ನೆಲೆ 2 ದಿನಗಳ ಕಾಲ ಪೊಲೀಸ ಬಿಗಿ ಬಂದೋಬಸ್ತ್ ಇರ್ಪಡಿಸಾಲಾಗಿದ್ದು ಮಾರಿ ಮೂರ್ತಿ ದೇವಸ್ಥಾನದಲ್ಲಿ ಪ್ರತಿಷ್ಠಾನೆಗೊಳ್ಳುವ ಮೊದಲು ಬಾಂಬ್ ನಿಷ್ಕ್ರಿಯದಲದಿಂದ ದೇವಸ್ಥಾನವನ್ನು ತಪಾಸಣೆ ಮಾಡಿದ ಬಳಿಕ ಮಾರಿ ಮೂರ್ತಿಯನ್ನು ತಂದು ಪ್ರತಿಷ್ಠಾಪನೆ  ಮಾಡಲಾಯಿತು 

ಭಟ್ಕಳ ಸೂಕ್ಷ್ಮ ಪ್ರದೇಶವಾಗಿರುವ ಕಾರಣ, ಸುರಕ್ಷತಾ ದೃಷ್ಟಿಯಿಂದ ಎಲ್ಲೆಡೆ ಪೊಲೀಸರನ್ನು ನಿಯೋಜಿಸಲಾಗಿದ್ದು, ದೇಗುಲದ‌ ಪ್ರವೇಶ ದ್ವಾರದಲ್ಲಿ ಮೆಟಲ್ ಡಿಟೆಕ್ಟರ್ ಅಳವಡಿಸಲಾಗಿದೆ. ಒಟ್ಟಾರೆ  ಜಾತ್ರಾ ಮಹೋತ್ಸವ ನಿರ್ವಿಘ್ನವಾಗಿ ನೆರವೇರಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ


Share: