ಮಂಗಳೂರು, ಜ.೨೨: ರಾಜ್ಯ ಸರಕಾರ ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ನಿರ್ಲಕ್ಷ ಮಾಡುತ್ತಿದೆ ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕಿ ಮೋಟಮ್ಮ ಪತ್ರಿಕಾಗೋಷ್ಠಿಯಲ್ಲಿಂದು ಟೀಕಿಸಿದ್ದಾರೆ.
ರಾಜ್ಯದಲ್ಲಿ ಬಿಜೆಪಿಯ ಆಡಳಿತದ ಕಾರ್ಯವೈಖರಿಯಿಂದ ಜನರು ಭ್ರಮನಿರಸನಗೊಂಡಿದ್ದಾರೆ. ರಾಜ್ಯದಲ್ಲಿ ನೆರೆ ಬಂದ ಸಂದರ್ಭದಲ್ಲಿ ರೆಸಾರ್ಟ್‌ಗಳಿಗೆ ತೆರಳಿ ವಿಶ್ರಮಿಸುವ ಸಚಿವರು, ಕೇಂದ್ರ ಸರಕಾರದ ಜನಪರ ಯೋಜನೆಗಳಾದ ಉದ್ಯೋಗ ಖಾತ್ರಿ ಯೋಜನೆಯ ಬಗ್ಗೆ ಆಸಕ್ತಿ ವಹಿಸಿಲ್ಲ. ಆ ಕಾರಣದಿಂದ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಂಡಿಲ್ಲ. ಕೇರಳದಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಫಲಾನುಭವಿಗಳಿಗೆ ೧೨೫ ರೂ. ದಿನಗೂಲಿ ನೀಡಿ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದ್ದಾರೆ. ಆದರೆ ರಾಜ್ಯದಲ್ಲಿ ದಿನಗೂಲಿಯನ್ನು ಹೆಚ್ಚು ಮಾಡುವ ಬಗ್ಗೆ ಇನ್ನೂ ರಾಜ್ಯ ಸರಕಾರ ತೀರ್ಮಾನ ಕೈಗೊಳ್ಳದೆ ಯೋಜನೆ ಯಶಸ್ವಿಯಾಗಿ ಅನುಷ್ಠಾನಗೊಳ್ಳಲು ಸಾಧ್ಯವಾಗಿಲ್ಲ. ರೈತರ ಪರವಾಗಿರುತ್ತೇವೆ ಎಂದು ಹೇಳಿದ ಸರಕಾರ ರೈತರ ಮೇಲೆ ಗೋಲಿಬಾರು ಮಾಡಿದೆ. ಪಡಿತರ ಚೀಟಿ, ಕುಡಿಯುವ ನೀರು ಮೊದಲಾದ ಜನಸಾಮಾನ್ಯರ ಸಮಸ್ಯೆ ಪರಿಹರಿಸಲು ಸರಕಾರ ಮುಂದಾಗಿಲ್ಲ. ಸರಕಾರ ಹಗರಣಗಳಲ್ಲಿ ಮುಳುಗಿದೆ. ಬೆಂಗಳೂರು ಸುತ್ತ ಮುತ್ತ ರೈತರ ಜಮೀನನ್ನು ಬಲವಂತವಾಗಿ ಸ್ವಾಧೀನ ಮಾಡಲಾಗುತ್ತಿದೆ ಎಂದು ಸಚಿವೆ ಮೋಟಮ್ಮ ಆರೋಪಿಸಿದರು.
ಮಹಿಳಾ ಪರ ಯೋಜನೆಗಳಿಗೆ ವಿರೋಧ
ಕಾಂಗ್ರೆಸ್ ಪಕ್ಷ ಜಾರಿಗೆ ತಂದ ಸ್ತ್ರೀಶಕ್ತಿ ಗುಂಪುಗಳನ್ನು ಹೆಚ್ಚು ಮಾಡುವ ಬಗ್ಗೆ, ಬಲಪಡಿಸುವ ಬಗ್ಗೆ ರಾಜ್ಯ ಸರಕಾರ ಆಸಕ್ತಿ ವಹಿಸಿಲ್ಲ. ಕಾಂಗ್ರೆಸ್ ಸರಕಾರ ಜಾರಿಗೆ ತಂದಿದ್ದ ‘ನಮ್ಮ ಮಗಳು ನಮ್ಮ ಶಕ್ತಿ’ ಯೋಜನೆಯನ್ನು ‘ಮಡಿಲು’ ಹೆಸರಿನಲ್ಲಿ ಸ್ವಲ್ಪ ಬದಲಾವಣೆ ಮಾಡಿ ಜಾರಿಗೆ ತರಲಾಗುತ್ತಿದೆ. ಅಕ್ರಮ- ಸಕ್ರಮ ಯೋಜನೆಗೆ ಸಂಬಂಧಿಸಿದಂತೆ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆಯ ಲಾಭ ಪಡೆಯಲು ಜಾರಿಗೆ ತರಲೆತ್ನಿಸಿದ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ಹಿಂದಕ್ಕೆ ಕಳುಹಿಸಿರುವು ದರಿಂದ ಸರಕಾರಕ್ಕೆ ಮುಖ ಭಂಗವಾಗಿದೆ ಎಂದು ಮೋಟಮ್ಮ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ. ರಮಾನಾಥ ರೈ, ಮಾಜಿ ಸಂಸದ ವಿನಯ ಕುಮಾರ್ ಸೊರಕೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬದ್ರುದ್ದೀನ್, ಶಾಸಕರಾದ ಅಭಯಚಂದ್ರ ಜೈನ್, ಯು.ಟಿ.ಖಾದರ್, ಜಿಲ್ಲಾ ಪಂಚಾಯತ್ ಸದಸ್ಯರಾದ ಮಮತಾಗಟ್ಟಿ, ಎ.ಸಿ. ಭಂಡಾರಿ, ಇತರರು ಉಪಸ್ಥಿತರಿದ್ದರು