ಕಾರವಾರ: ಜಿಲ್ಲಾಡಳಿತದಿಂದ ನಗರದ ಜಿಲ್ಲಾ ಪೊಲೀಸ್ ಕ್ರಿಡಾಂಗಣದಲ್ಲಿ ಜರುಗಿದ 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಮಹಾತ್ಮ ಗಾಂದಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ಅಭಿವೃದ್ಧಿಪಡಿಸಲಾದ ನಾಲ್ಕು ಅಮೃತ ಸರೋವರಗಳಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಅಮೃತ ಸರೋವರ ಅಭಿನಂದನಾ ಪ್ರಶಸ್ತಿ ವಿತರಿಸಿ ಗೌರವಿಸಿದರು.
ಅಜಾದಿಕಾ ಅಮೃತ ಮಹೋತ್ಸವ ನಿಮಿತ್ತ ಮಿಷನ್ ಅಮೃತ ಸರೋವರ ಅಭಿಯಾನದಲ್ಲಿ ಮಹಾತ್ಮಗಾಂಧಿ ನರೇಗಾದಡಿ ನಿರ್ಮಿತ ಕಾರವಾರ ತಾಲ್ಲೂಕಿನ ಹಣಕೋಣ ಗ್ರಾಮ ಪಂಚಾಯತಿ ವ್ಯಾಪ್ತಿಯ ಭೀಮಕೋಲ್ ಕೆರೆ(ಪ್ರಥಮ), ಜೋಯಿಡಾ ತಾಲ್ಲೂಕಿನ ಉಳವಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಶ್ರೀ ವೀರಭದ್ರೇಶ್ವರ ಕೆರೆ(ದ್ವಿತೀಯ), ಅಂಕೋಲಾ ತಾಲ್ಲೂಕಿನ ಹಾರವಾಡ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೊಂಡದ ಕೆರೆ ಹಾಗೂ ಹಳಿಯಾಳ ತಾಲ್ಲೂಕಿನ ಭಾಗವತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಭಾಗವತಿ ದೊಡ್ಡ ಕೆರೆ(ತೃತೀಯ) ಸ್ಥಾನ ಪಡೆದು ಅಭಿನಂದನೆ ಪಾತ್ರವಾಗಿವೆ. ಸಚಿವರು ಸಂಬಂಧಪಟ್ಟ ಗ್ರಾಮ ಪಂಚಾಯತಿಗಳ ಅಧ್ಯಕ್ಷರು ಹಾಗೂ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ಅಭಿನಂದನಾ ಪ್ರಶಸ್ತಿ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಶಾಸಕರು, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.