ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಸರಕಾರಿ ಪಿ.ಯು ಕಾಲೇಜಿನ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಶಿಬಿರ

ಸರಕಾರಿ ಪಿ.ಯು ಕಾಲೇಜಿನ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಶಿಬಿರ

Fri, 20 Jan 2023 02:23:25  Office Staff   SOnews

ಭಟ್ಕಳ:  ವಿದ್ಯಾರ್ಥಿಗಳಿಗೆ ಪಿ.ಯು.ಸಿ. ಅಧ್ಯಯನ ಜೀವನದ ಬಹುಮುಖ್ಯ ಘಟ್ಟವಾಗಿದ್ದು ಈ ಹಂತದಲ್ಲಿ ವಿದ್ಯಾರ್ಥಿಗಳು  ಕಷ್ಟಪಟ್ಟು ವಿದ್ಯಾಭ್ಯಾಸವನ್ನು ಮಾಡಿದರೆ ಮುಂದೆ  ಉತ್ತಮ ಮಟ್ಟದ ಜೀವನವನ್ನು ರೂಪಿಸಿಕೊಳ್ಳಬಹುದು ಎಂದು  ಶ್ರೀ ಗುರು ಸುದೀಂದ್ರ ಕಾಲೇಜಿನ ಬಿ.ಸಿ.ಎ. ವಿಭಾಗದ ಪ್ರಾಂಶುಪಾಲ  ಶ್ರೀನಾಥ ಪೈ ಹೇಳಿದರು.

ಅವರು   ಶ್ರೀ ವೆಂಕಟೇಶ್ವರ ವಿದ್ಯಾವರ್ಧಕ ಸಂಸ್ಥೆ, ಭಟ್ಕಳ ಇದರ ದಶಮಾನೋತ್ಸವದ ಪ್ರಯುಕ್ತ ಸ್ಪಂದನ ಚಾರಿಟೇಬಲ್ ಟ್ರಸ್ಟ ಇವರ ಸಹಯೋಗದೊಂದಿಗೆ ಭಟ್ಕಳದ ಸರ್ಪನಕಟ್ಟೆಯಲ್ಲಿರುವ ಸರಕಾರಿ ಕಾಲೇಜಿನ  ಪಿ.ಯು, ವಿದ್ಯಾರ್ಥಿಗಳಿಗೆ  ಹಮ್ಮಿಕೊಂಡ ಮಾರ್ಗದರ್ಶನ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದರು. ಕಾರ್ಯಕ್ರಮದಲ್ಲಿದ್ದ  ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ  ಗಂಗಾಧರ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಶ್ರೀ  ವೆಂಕಟೇಶ್ವರ ವಿದ್ಯಾವರ್ಧಕ ಸಂಘದವರು ಸರಕಾರಿ ಕಾಲೇಜಿನ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಮುಂದೆ ಬರಬೇಕೆಂಬ ಹಂಬಲದೊಂದಿಗೆ ಈ ಮಾರ್ಗದರ್ಶಿ ಶಿಬಿರವನ್ನು ಹಮ್ಮಿಕೊಂಡಿದ್ದು ಸರಕಾರಿ ಕಾಲೇಜಿನ  ವಿದ್ಯಾರ್ಥಿಗಳು ನನ್ನಿಂದ ಏನನ್ನೂ ಸಾಧಿಸಲು ಸಾಧ್ಯವಿಲ್ಲ ಎಂಬ  ಕೀಳರಿಮೆಯನ್ನು   ಮೊದಲು ತೆಗೆದು ಹಾಕಿ ಗುರಿ ಸಾಧಿಸಲು ಪ್ರಯತ್ನಿಸಬೇಕು ಎಂದರು.

ವೇದಿಕೆಯಲ್ಲಿ ಸ್ಪಂದನ ಸಂಸ್ಥೆಯ ಅಧ್ಯಕ್ಷ ರಾಘವೇಂದ್ರ ನಾಯ್ಕ, ಕ್ರಿಯಾಶೀಲ ಗೆಳೆಯರ ಸಂಘದ ಅದ್ಯಕ್ಷ  ದೀಪಕ್ ನಾಯ್ಕ, ನಾಮಧಾರಿ ಗುರುಮಠದ ಉಪಾಧ್ಯಕ್ಷ ಭವಾನಿಶಂಕರ ನಾಯ್ಕ, ಹಡೀನ್ ಸರಕಾರಿ ಕಾಲೇಜಿನ ಪ್ರಾಂಶುಪಾಲ ಗಜಾನನ ನಾಯ್ಕ,  ಮಾಜಿ ಸೈನಿಕ ಶ್ರೀಕಾಂತ ನಾಯ್ಕ  ಉಪಸ್ಥಿತರಿದ್ದರು.

ಪ್ರಾರಂಭದಲ್ಲಿ ಸರಕಾರಿ ಕಾಲೇಜಿನ ಉಪನ್ಯಾಸಕ ಮಂಜುನಾಥ ನಾಯಕ ಸ್ವಾಗತಿಸಿದರು. ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಗೆ  ಪ್ರಾಂಶುಪಾಲರಾದ ಶ್ರೀನಾಥ ಪೈ ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ವಿದ್ಯಾವರ್ಧಕ ಸಂಸ್ಥೆಯ ಪರವಾಗಿ ಸಂಪನ್ಮೂಲ  ವ್ಯಕ್ತಿಯಾಗಿ ಭಾಗವಹಿಸಿದ್ದ  ಶ್ರೀನಾಥ ಪೈ  ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.  
 


Share: