ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಸಿದ್ದರಾಮಯ್ಯ ಸಂಪುಟದ ಸಚಿವರ ಖಾತೆಗಳ ಅಧಿಕೃತ ಪಟ್ಟಿ ಪ್ರಕಟ

ಸಿದ್ದರಾಮಯ್ಯ ಸಂಪುಟದ ಸಚಿವರ ಖಾತೆಗಳ ಅಧಿಕೃತ ಪಟ್ಟಿ ಪ್ರಕಟ

Tue, 30 May 2023 17:09:58  Office Staff   Vb

ಬೆಂಗಳೂರು: ರಾಜ್ಯ ಸರಕಾರದ ನೂತನ ಮುಖ್ಯಮಂತ್ರಿ ಉಪ ಮುಖ್ಯಮಂತ್ರಿ ಹಾಗೂ ಸಂಪುಟ ದರ್ಜೆ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿ ಸೋಮವಾರ ಆದೇಶ ಹೊರಡಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಣಕಾಸು, ಸಂಪುಟ ವ್ಯವಹಾರಗಳು, ಗುಪ್ತಚರ, ಐಟಿ ಮತ್ತು ಬಿಟಿ, ಮೂಲಸೌಕರ್ಯ ಅಭಿವೃದ್ಧಿ ಯಂತಹ ಪ್ರಮುಖ ಖಾತೆಗಳನ್ನು ತನ್ನಲ್ಲೇ ಉಳಿಸಿಕೊಂಡಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜಲಸಂಪನ್ಮೂಲ ಹಾಗೂ ಬೆಂಗಳೂರು ನಗರ ಅಭಿವೃದ್ಧಿ ಇಲಾಖೆಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಡಾ.ಜಿ. ಪರಮೇಶ್ವರ್ ಅವರಿಗೆ ಮಹತ್ವದ ಗೃಹ ಖಾತೆಯನ್ನು ನೀಡಲಾಗಿದೆ.


Share: