ಕಾರವಾರ : ಪಿ.ಎಂ.ಕಿಸಾನ ಇ-ಕೆವೈಸಿ ಮಾಡಿಕೊಳ್ಳಲು ಸೆಪ್ಟೆಂಬರ್ 7 ವರೆಗೆ ಅವಧಿ ವಿಸ್ತರಿಸಲಾಗಿದೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ನಿಧಿ ಯೋಜನೆಯಡಿ ಅರ್ಹ ರೈತ ಫಲಾನುಭವಿಗಳು ಇ ಕೆವೈಸಿಯನ್ನು ತಮ್ಮ ತಾಲ್ಲೂಕಿನ ಹತ್ತಿರದ ನಾಗರೀಕ ಸೇವಾ ಕೇಂದ್ರ, ಹತ್ತಿರದ ಪೋಸ್ಟ್ ಆಫೀಸ್, ಗ್ರಾಮ್ ಒನ್ ಸೇವಾ ಕೇಂದ್ರಗಳಲ್ಲೂ ಬಯೋಮೆಟ್ರಿಕ್ ಆಧಾರಿತ ಇ-ಕೆವೈಸಿ ಹಾಗೂ hಣಣಠಿ://ಠಿmಞisಚಿಟಿ.gov.iಟಿ ಪೆÇೀರ್ಟಲ್ನಲ್ಲಿ ಔಖಿP ಆಧಾರಿತ ಇ-ಕೆವೈಸಿ ಅಥವಾ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಔಖಿP ಆಧಾರಿತ ಇ-ಕೆವೈಸಿ ಮಾಡಿಕೊಳ್ಳಲು ಅವಕಾಶ
ನೀಡಲಾಗಿದೆ. ಇ-ಕೆವೈಸಿ ಮಾಡಿಸಿಕೊಂಡ ರೈತರಿಗೆ ಮಾತ್ರ 12 ನೇ ಕಂತಿನ ಆರ್ಥಿಕ ನೆರವನ್ನು ಬಿಡುಗಡೆ ಮಾಡಲಾಗುವುದು.
ಜಿಲ್ಲೆಯ ಎಲ್ಲಾ ಅರ್ಹ ರೈತ ಫಲಾನುಭವಿಗಳು ಆರ್ಥಿಕ ನೆರವು ಪಡೆಯಲು ಕಡ್ಡಾಯವಾಗಿ ಇ-ಕೆವೈಸಿ ಮಾಡಬೇಕು ಎಂದು ಕಾರವಾರ ಜಂಟಿ ಕೃಷಿ ನಿದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.