ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಹಿರಿಯ ಸಾಹಿತಿ, ಕಾದಂಬರಿಗಾರ್ತಿ, ಸಾರಾ ಅಬೂಬಕ್ಕರ್ ನಿಧನ‌.

ಹಿರಿಯ ಸಾಹಿತಿ, ಕಾದಂಬರಿಗಾರ್ತಿ, ಸಾರಾ ಅಬೂಬಕ್ಕರ್ ನಿಧನ‌.

Wed, 11 Jan 2023 03:28:25  Office Staff   SO News

ಮಂಗಳೂರು :  ನಾಡಿನ ಹಿರಿಯ ಸಾಹಿತಿ, ಕಾದಂಬರಿಗಾರ್ತಿ ಸಾರಾ ಅಬುಬಕರ್ ನಿಧನರಾಗಿದ್ದಾರೆ‌

ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಗೆ ತುತ್ತಾಗಿದ್ದ ಅವರನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ  ಮಧ್ಯಾಹ್ನ ಸಾರಾ ಕೊನೆಯುಸಿರೆಳೆದರು.

ಜೂನ್ 30,1936 ರಂದು ಕಾಸರಗೋಡಿನ ಚಂದ್ರಗಿರಿಯಲ್ಲಿ ಅವರು ಜನಿಸಿದರು. ಕುಗ್ರಾಮದಲ್ಲಿ ಹುಟ್ಟಿ ಸಾಹಿತ್ಯ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾರಾ ಅಬುಬಕರ್,  10 ಕ್ಕೂ ಹೆಚ್ಚು ಕಾದಂಬರಿ, 6 ಕಥಾ ಸಂಕಲನ, 5 ಬಾನುಲಿ ನಾಟಕ, 4 ಲೇಖನ, ಒಂದು ಪ್ರವಾಸ ಕಥನ ಬರೆದಿದ್ದರು. ಹಲವಾರು   ಪ್ರಶಸ್ತಿಗೆ ಬಾಜನರಾಗಿದ್ದರು.

ಮುಸ್ಲಿಂ ಹೆಣ್ಣುಮಕ್ಕಳಿಗೆ ಶಿಕ್ಷಣ ವಿಚಾರದಲ್ಲಿ ಸೌದಿಯ 'ವಹಾಬಿಸಂ' ಬಗ್ಗೆ ಮಾತನಾಡಿ ಗಮನ ಸೆಳೆದಿದ್ದರು. 


Share: