ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಅಕ್ಟೋಬರ್ 1 ರಂದು "ಬೃಹತ್ ಸ್ವಚ್ಛತಾ ಅಭಿಯಾನ

ಅಕ್ಟೋಬರ್ 1 ರಂದು "ಬೃಹತ್ ಸ್ವಚ್ಛತಾ ಅಭಿಯಾನ

Sat, 30 Sep 2023 04:50:17  Office Staff   SO News

ಕಾರವಾರ :  ಮಹಾತ್ಮ ಗಾಂಧಿಜಿಯವರ ಜನ್ಮ ದಿನದ ಅಂಗವಗಿ ಭಾರತ ಸರ್ಕಾರವು ‘ಸ್ವಚ್ಛತಾ ಹಿ ಸೇವಾ/ಸ್ವಚ್ಛತೆಯೇ ಸೇವೆ' ಎಂಬ "ಬೃಹತ್ ಸ್ವಚ್ಛತಾ ಅಭಿಯಾನ' ವನ್ನು ಅಕ್ಟೋಬರ್ 1 ರಂದು ಬೆಳಗ್ಗೆ, 10 ಗಂಟೆಗೆ ಎಲ್ಲಾ ಗ್ರಾಮ ಪಂಚಾಯತಿಯಲ್ಲಿನ ಒಂದು ಸ್ಥಳವನ್ನು ಆಯ್ಕೆ ಮಾಡಿಕೊಂಡು ಸ್ವಚ್ಚತಾ ಶ್ರಮದಾನವನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.

ಈ ಆಂದೋಲನದಲ್ಲಿ ರಾಷ್ಟ್ರಮಟ್ಟದಲ್ಲಿ ಪ್ರಧಾನ ಮಂತ್ರಿಗಳು ಮತ್ತು ಇತರ ಗಣ್ಯರು ಸಹ ಭಾಗವಹಿಸಲಿದ್ದಾರೆ.
ಜಿಲ್ಲೆಯಲ್ಲಿನ ಗ್ರಾಮ ಪಂಚಾಯತಿಯ 247 ಆಯ್ದ ಸ್ಥಳಗಳನ್ನು ಆಯ್ಕೆ ಮಾಡಿ swachhatahiseva.com ನಲ್ಲಿ ಅಳವಡಿಸಲಾಗಿದೆ. ಬೃಹತ್ ಸ್ವಚ್ಛತಾ ಶ್ರಮದಾನವನ್ನು ಜಿಲ್ಲೆಯಲ್ಲಿನ ಎಲ್ಲಾ ಗ್ರಾಮ ಪಂಚಾಯತಿಯಲ್ಲಿ ಹಮ್ಮಿಕೊಂಡಿದ್ದು, ಕಾರ್ಯಕ್ರಮದಲ್ಲಿ ಚುನಾಯಿತ ಪ್ರತಿನಿಧಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು swachhatahiseva.com ನಲ್ಲಿ ಹೆಸರು ನೊಂದಾಯಿಸಿಕೊAಡು, ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share: