ಕಾರವಾರ: ಆದುನಿಕ ಕಾಲದಿಂದಲೂ ಪುರುಷರಿಗಿಂತ ಮಹಿಳೆಯರು ಎಲ್ಲಾ ಕ್ಷೆತ್ರದಲ್ಲಿ ಒಂದು ಹೆಜ್ಜೆ ಮುಂದಿದ್ದಾರೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯದೀಶ ಡಿ. ಎಸ್ ವಿಜಯಕುಮಾರ ಹೇಳಿದರು.
ನಗರದ ಜಿಲ್ಲಾ ರಂಗ ಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಆಯೋಗ ಬೆಂಗಳೂರು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿಲಾದ ಜಿಲ್ಲಾ ಮಟ್ಟದ ಅಂತರಾಷ್ಟ್ರೀಯ ಮಹಿಳೆಯರ ದಿನಾಚರಣೆಯನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ ಕಾನೂನು ಮಹಿಳೆಯರಿಗೆ ವಿಶಿಷ್ಟ ಗೌರವ ಸ್ಥಾನಮಾನ ಮತ್ತು ಸಮಾನ ಹಕ್ಕನ್ನು ನೀಡಿದೆ. ಮಹಿಳೆಯರು ಇಂದು ತಂತ್ರಜ್ಞಾನದ ಬೆಳವಣಿಗೆ ಹಾಗೂ ಇನ್ನಿತರ ಯಾವುದೇ ಕ್ಷೆತ್ರದಲ್ಲಾದರೂ ಕಾರ್ಯ ನಿರ್ವಹಿಸುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಹೇಳಿದರು.
ಕಾನೂನು ಪಾಲನೆ ಮಾಡದೇ ಇರುವುದರಿಂದ ಅನೇಕ ಮಹಿಳೆಯರು ದೌರ್ಜನ್ಯ ಕಿರುಕುಳಕ್ಕೆ ಒಳಗಾಗಿದ್ದಾರೆ. ಅಂತವರನ್ನು ಭೇಟಿ ಮಾಡಿ ನ್ಯಾಯ ಒದಗಿಸುವ ಕಾರ್ಯವನ್ನು ಕಾನೂನು ಸೇವಾ ಪ್ರಾಧಿಕಾರ ಮಾಡುತ್ತಿದೆ. ಹೀಗಾಗಿ ಪೋಷಕರು ತಮ್ಮ ಮಕ್ಕಳಿಗೆ ಲೈಂಗಿಕ ದೌರ್ಜನಗಳ ಬಗ್ಗೆ ಅರಿವನ್ನು ಮೂಡಿಸಲು ಸೂಚಿಸಿದರು.
ಹಿರಿಯ ಸಿವಿಲ್ ನ್ಯಾಯದಿಶೆ ಹಗೂ ಸದಸ್ಯ ಕಾರ್ಯದರ್ಶಿ ರೇಣುಕಾ ಡಿ. ರಾಯ್ಕರ್ ಮಾತನಾಡಿ, ಯಾವುದೇ ಸ್ಥಳದಲ್ಲಾದರೂ ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದರೆ ಅವರಿಗೆ ಶಿಕ್ಷಿಸಲು ಕಾನೂನು ಹಲವಾರು ನಿಯಮವನ್ನು ಜಾರಿಗೆ ತಂದಿದೆ ಎಂದು ಹೇಳಿದರು. ಶಾಲಾ, ಕಾಲೇಜು ಇನ್ನಿತರ ಕ್ಷೇತ್ರಗಳಲ್ಲಿ ಹೆಣ್ಣು ಮಕ್ಕಳಿಗೆ ಯಾವುದೇ ರೀತಿ ಪುರುಷರು ದೌರ್ಜನ್ಯ ಕಿರುಕುಳ ಎಸೆಗಿದರೆ ಅವರನ್ನು ತಡೆದು ಸೂಕ್ತ ಕ್ರಮ ಕೈಗೊಳ್ಳಬೇಕು. ದೌರ್ಜನ್ಯಕ್ಕೆ ಒಳಗದವರಿಗೆ ಮತ್ತು ಕಾನೂನಿನ ಬಗ್ಗೆ ಮಾಹಿತಿ ಇಲ್ಲದವರಿಗೆ ಕಾನೂನು ಸೇವಾ ಪ್ರಾಧಿಕಾರವು ನ್ಯಾಯ ಒದಗಿಸಿ ಕೊಡುತ್ತದೆ ಎಂದು ಹೇಳಿದರು.
ಬಳಿಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಶ್ಯಾಮಲಾ ಸಿ. ಕೆ ಮಾತನಾಡಿ, ಮಹಿಳೆ ನ್ಯಾಯಾಲಯದಲ್ಲಿ ಕೂಡ ಸೇವೆ ಸಲ್ಲಿಸುತ್ತಾ ಹಾಗೂ ಸಮಾಜದಲ್ಲಿ ಅನ್ಯಾಯಕ್ಕೆ ಒಳಗಾದವರಿಗೆ ನ್ಯಾಯ ನೀಡುತ್ತಾ ಕತ್ತಲೆನಿಂದ ಬೆಳಕಿನ ದೀಪ ಹಚ್ಚುತ್ತಿದ್ದಾರೆ. ಸಂವಿಧಾನ ಎಲ್ಲರಿಗೂ ಸಮಬಾಳು ಎಲ್ಲರಿಗೂ ಪ್ರಾಮುಖ್ಯತೆ ನೀಡಿದೆ. ಅದರಂತೆ ಮಹಿಳೆಯರಿಗೆ ತರಬೇತಿ ಮತ್ತು ಅವಕಾಶಗಳನ್ನು ನೀಡಿದ್ದರಿಂದ ಯಾವುದೇ ಕ್ಷೇತ್ರದಲ್ಲಿ ಆದರೂ ಕೂಡ ಸಾದನೆ ಮಾಡಬಲ್ಲರು ಎಂದು ತೋರಿಸಿದ್ದಾರೆ. ಮತ್ತು ದೇಶದಲ್ಲಿ ಉತ್ತಮ ನಾಗರಿಕ ಸಮಾಜವನ್ನು ಕಟ್ಟಲು ಅಪಾರ ಕೊಡುಗೆಯನ್ನು ನೀಡಿದ್ದಾರೆ ಎಂದು ಹೇಳಿದರು.
ವೇದಿಕೆಯಲ್ಲಿ 2022-23ನೇ ಸಾಲಿನಲ್ಲಿ ತಾಲೂಕು ಮಟ್ಟದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಶರದ ನಾಯಕ ಅವರಿಗೆ ಸನ್ಮಾನ ಮಾಡಲಾಯಿತು ಹಾಗೂ ಮಹಿಳಾ ದಿನಾಚರಣೆಯ ಪ್ರಯುಕ್ತ ಸಿಹಿ ತಿನಿಸು ತಯಾರಿಸುವ ಕಾರ್ಯಕ್ರಮವನ್ನು ಏರ್ಪಡಿಸಿದ್ದು ಅದರಲ್ಲಿ ಪ್ರಶಸ್ತಿ ಪಡೆದ ಮಹಿಳೆಯರಿಗೆ ಬಹುಮಾನ ವಿತರಿಸಲಾಯಿತು. ಹಾಗೆಯೇ ಕಾರ್ಯಕ್ರಮದಲ್ಲಿ ಗರ್ಭಿಣಿ ಪಲಾನುಭವಿಗಳಿಗೆ ಸೀಮಂತ ಕಾರ್ಯಕ್ರಮವನ್ನು ಮಾಡಲಾಯಿತು.
ಸಂಪನ್ಮೂಲ ವ್ಯಕ್ತಿಗಳಾದ ಪ್ರಧಾನ ಹಿರಿಯ ಸಿವಿಲ್ ನ್ಯಾಯದಿಶೆ ರೇಷ್ಮಾ ರೋದ್ರಿಗೀಸ್, ಜಿಲ್ಲಾ ಆಂತರಿಕ ದೂರು ಸಮಿತಿ ಅಧ್ಯಕ್ಷರಾದ ಹೇಮಲತಾ, ಕ್ರಿಮ್ಸ್ ಅಸೋಸಿಯೇಟ್ ಪ್ರೊಪೆಸರ್ ಮಹಾಲಕ್ಷ್ಮಿ ಕಾರ್ಲವಾಡ, ಸಿ.ಜೆ. ಎಮ್. ವಕೀಲ ರಾಜೇಶ್ವರಿ ವಿ ನಾಯ್ಕ, ಇವರು ಕಾನೂನು ಜಾಗೃತೆ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ , ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಧೀಶ ಮಂಹಾತೇಶ ಎಸ್. ದರಗದ, ಪ್ರಗತಿ ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟ ಅಧ್ಯಕ್ಷಿ ಶೋಭಾ ನಾಯ್ಕ, ಜೆ. ಎಂ.ಎಪ್. ಸಿ. ಸಿವಿಲ್ ನ್ಯಾಯಧೀಶಿ ಅಕ್ಷತಾ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.