ಕಾರ್ಕಳ, ನವೆಂಬರ್ 30: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು, ಅವರು ನೀಡುತ್ತಿರುವ ೨೦೦೮-೦೯ನೇ ಸಾಲಿನ ಜಿಲ್ಲಾ ಯುವ ಪ್ರಶಸ್ತಿಯನ್ನು ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದ ಯತೀಶ್. ಎನ್ ಅವರಿಗೆ ಶನಿವಾರ ಮಂಗಳೂರಿನಲ್ಲಿ ನೀಡಲಾಯಿತು.
ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ದ.ಕ.ಜಿಲ್ಲಾ ಪಂಚಾಯತ್ ಅಧ್ಯಕ್ಷ ಸಂತೋಷ್ ಕುಮಾರ್ ಭಂಡಾರಿ, ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಎಮ್. ಶಂಕರ್ ಭಟ್, ನೆಹರು ಯುವ ಕೇಂದ್ರದ ಸಮನ್ವಯಾಧಿಕಾರಿ ಅನಂತಪ್ಪ ಬಿ., ಮತ್ತಿತರರು ಉಪಸ್ಥಿತರಿದ್ದರು.