ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / 19 ವರ್ಷದೂಳಗಿನ ಖೇಲೋ ಇಂಡಿಯಾ ಮಹಿಳಾ ವಾಲಿಬಾಲ್ ಲೀಗ್ ಪಂದ್ಯಾವಳಿಗೆ ಅ. 27 ರಂದು ರಾಜ್ಯದ ಮಹಿಳಾ ತಂಡದ ಆಯ್ಕೆ

19 ವರ್ಷದೂಳಗಿನ ಖೇಲೋ ಇಂಡಿಯಾ ಮಹಿಳಾ ವಾಲಿಬಾಲ್ ಲೀಗ್ ಪಂದ್ಯಾವಳಿಗೆ ಅ. 27 ರಂದು ರಾಜ್ಯದ ಮಹಿಳಾ ತಂಡದ ಆಯ್ಕೆ

Mon, 24 Oct 2022 03:39:36  Office Staff   SO News


ಧಾರವಾಡ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಶಾಖೆಯಾದ ಕ್ರೀಡಾ ಕಲ್ಯಾಣದ ವತಿಯಿಂದ ನವೆಂಬರ್ 02, 2022 ರಿಂದ 06 ರವರೆಗೆ ಹಿಮಾಚಲ ಪ್ರದೇಶ ಸಿಮ್ಲಾದಲ್ಲಿ  19 ವರ್ಷದೊಳಗಿನ ಖೇಲೋ ಇಂಡಿಯಾ ಮಹಿಳಾ ವಾಲಿಬಾಲ್ ಲೀಗ್ ಪಂದ್ಯಾವಳಿ ನಡೆಯಲಿದೆ. ಈ ಹಿನ್ಬಲೆಯಲ್ಲಿ ಕರ್ನಾಟಕ ರಾಜ್ಯದಿಂದ ಮಹಿಳಾ ವಾಲಿಬಾಲ್ ತಂಡದ ಆಯ್ಕೆ ಪ್ರಕ್ರಿಯೆಯನ್ನು ಅಕ್ಟೊಬರ್ 27 ರಂದು ಬೆಳಿಗ್ಗೆ 09 ಗಂಟೆಗೆ ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದ ವಾಲಿಬಾಲ್ ಅಂಕಣದಲ್ಲಿ ಆಯೋಜಿಸಲಾಗಿದೆ.

ಆಯ್ಕೆ ಪ್ರಕ್ರೀಯೆಯಲ್ಲಿ ವಿವಿಧ ಜಿಲ್ಲೆಯ ಮಹಿಳಾ ವಾಲಿಬಾಲ್ ಕ್ರೀಡಾಪಟುಗಳು ಹಾಗೂ ಸ್ಥಳೀಯ ವಾಲಿಬಾಲ್ ಕ್ರೀಡಾಪಟುಗಳು ಭಾಗವಹಿಸಬಹುದಾಗಿದೆ. ಜನೆವರಿ 01, 2004 ಅಥವಾ ನಂತರ ಜನಿಸಿದ ಕ್ರೀಡಾಪಟುಗಳು ಆಯ್ಕೆ ಪ್ರಕ್ರೀಯೆಯಲ್ಲಿ  ಭಾಗವಹಿಸಬಹುದು. ಈ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಊಟೋಪಹಾರ, ಪ್ರಯಾಣ ಭತ್ಯೆ ಹಾಗೂ ದಿನಭತ್ಯೆಯನ್ನು ಇಲಾಖೆಯಿಂದ ಭರಿಸಲಾಗುವುದಿಲ್ಲ. ಆಯ್ಕೆಯಾದ ಕ್ರೀಡಾಪಟುಗಳು ತರಬೇತಿ ಶಿಬಿರ ಹಾಗೂ ಪಂದ್ಯಾವಳಿಗೆ ತೆರಳಲು ಪೂರ್ವ ಸಿದ್ದತೆಯೊಂದಿಗೆ ಹಾಗೂ ಆಧಾರ ಕಾರ್ಡ್ ಮತ್ತು ಎಸ್‍ಎಸ್‍ಎಲ್‍ಸಿ ಅಂಕಪಟ್ಟಿಯೊಂದಿಗೆ ಬರಬೇಕು. 

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು  ಕ್ರೀಡಾ ಇಲಾಖೆ, ಧಾರವಾಡ. ದೂರವಾಣಿ 0836-2447424 ಸಂಪರ್ಕಿಸಬಹುದು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.


Share: