ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / 6 ಐಪಿಎಸ್ ಅಧಿಕಾರಿಗಳ ವರ್ಗಾವರ್ಗಿ

6 ಐಪಿಎಸ್ ಅಧಿಕಾರಿಗಳ ವರ್ಗಾವರ್ಗಿ

Sat, 25 Feb 2023 00:17:44  Office Staff   Vb

ಬೆಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರನ್ನು ಸರಕಾರ ವರ್ಗಾಯಿಸಿದ್ದು, ಐಪಿಎಸ್ ಅಧಿಕಾರಿ ಕುಲದೀಪ್ ಕುಮಾರ್ ಆರ್. ಜೈನ್ ಅವರನ್ನು ಮಂಗಳೂರು ನೂತನ ಪೊಲೀಸ್‌ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.

ಗುರುವಾರ ರಾಜ್ಯ ಸರಕಾರ ಈ ಆದೇಶ ಹೊರಡಿಸಿದ್ದು, ಎನ್. ಶಶಿಕುಮಾರ್ ಅವರನ್ನು ರೈಲ್ವೆ ಪೊಲೀಸ್ ವಿಭಾಗದ ಡಿಐಜಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಎರಡು ವರ್ಷಗಳ ಹಿಂದೆ ಶಶಿಕುಮಾರ್ ಅವರನ್ನು ಸರಕಾರ ಮಂಗಳೂರಿನ ಪೊಲೀಸ್ ಆಯುಕ್ತರಾಗಿ ನೇಮಿಸಿತ್ತು. ಕುಲದೀಪ್ ಅವರು ಬೆಂಗಳೂರು ಸಂಚಾರ ಪಶ್ಚಿಮದ ಡಿಸಿಪಿಯಾಗಿದ್ದರು.

ಅದೇ ರೀತಿ, ಗುಪ್ತಚರ ಇಲಾಖೆಯ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ಡೆಕ್ಕ ಕಿಶೋರ್ ಬಾಬು ಅವರನ್ನು ಗುಪ್ತದಳ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ, ಬೆಂಗಳೂರು ದಕ್ಷಿಣ ವಿಭಾಗದ ಸಂಚಾರ ಡಿಸಿಪಿಯಾಗಿ ಮುಹಮ್ಮದ್ ಸುಜೀತಾ, ಬೆಂಗಳೂರು ನಗರ ಸಿಎಆರ್‌ನ ಡಿಸಿಪಿಯಾಗಿ ಅರುಣಾಂಗ್ಲು ಗಿರಿ ಅವರನ್ನು ನೇಮಕಮಾಡಲಾಗಿದೆ.

ಕೊಪ್ಪಳ ಪೊಲೀಸ್ ವರಿಷ್ಠಾಧಿಕಾರಿ(ಎಸ್ಪಿ)ಯಾಗಿ ಯಶೋದಾವಂಟ ಗೋಡಿ ಅವರನ್ನು ನೇಮಕ ಮಾಡಲಾಗಿದೆ. ಡಾ.ಕೋನ ವಂಶಿಕೃಷ್ಣ ಅವರಿಗೆ ವಯರ್‌ಸ್‌ ಎಸ್ಪಿ ಹುದ್ದೆ ಹೆಚ್ಚುವರಿ ಹೊಣೆಯಾಗಿ ನೀಡಲಾಗಿದೆ.


Share: