Wed, 16 Aug 2023 02:11:26Office Staff
ಕಾರವಾರ: ಜಿಲ್ಲಾಡಳಿತದಿಂದ ನಗರದ ಜಿಲ್ಲಾ ಪೊಲೀಸ್ ಕ್ರಿಡಾಂಗಣದಲ್ಲಿ ಜರುಗಿದ 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಮಹಾತ್ಮ ಗಾಂದಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ಅಭಿವೃದ್ಧಿಪಡಿಸಲಾದ ನಾಲ್ಕು ಅಮೃತ ಸರೋವರಗಳಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಅಮೃತ ಸರೋವರ ಅಭಿನಂದನಾ ಪ್ರಶಸ್ತಿ ವಿತರಿಸಿ ಗೌರವಿಸಿದರು.
View more
Wed, 16 Aug 2023 02:05:27Office Staff
ಕಾರವಾರ : ಜಿಲ್ಲಾಡಳಿತ ವತಿಯಿಂದ ನಗರದ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಏರ್ಪಡಿಸಲಾಗಿದ್ದ 77ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ ಎಸ್ ವೈದ್ಯ ಅವರು ಧ್ವಜಾರೋಹಣ ನೆರವೇರಿಸಿದರು.
View more
Wed, 16 Aug 2023 00:17:51Office Staff
ಭಟ್ಕಳ: ಇಲ್ಲಿನ ತಾಲೂಕು ಕ್ರಿಡಾಂಗಣದಲ್ಲಿ ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನದ ಮೂಲಕ ರಾಷ್ಟ್ರ ದ್ವಜಾರೋಹಣದೊಂದಿಗೆ ತಾಲೂಕಾಡಳಿತ ಮತ್ತು ಸಾರ್ವಜನಿಕರು ದೇಶದ ೭೭ನೇ ಸ್ವಾತಂತ್ರ್ಯ ಸಂಭ್ರವನ್ನು ಆಚರಿಸಿಕೊಂಡರು.
View more
Tue, 15 Aug 2023 01:35:25Office Staff
ಧಾರವಾಡ : ಜಿಲ್ಲಾಡಳಿತದಿಂದ ಆ.15 ರಂದು ಆರ್ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಚರಿಸಲಿರುವ 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಸಿದ್ಧತೆಗಳನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹಾಗೂ ಮಹಾನಗರ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ಅವರು ಇಂದು (ಆ.14) ಮಧ್ಯಾಹ್ನ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
View more
Tue, 15 Aug 2023 01:29:13Office Staff
ಉಡುಪಿ: ಸರ್ಕಾರದ ಸೂಚನೆಯಂತೆ ನನ್ನ ಮಣ್ಣು- ನನ್ನ ದೇಶ ಕಾರ್ಯಕ್ರಮದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಅಂಗವಾಗಿ ಆ. 15 ರವರೆಗೆ ಜಿಲ್ಲೆಯ ಮನೆ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ ಪ್ರತಿಯೊಬ್ಬರಲ್ಲೂ ದೇಶಪ್ರೇಮ ಮೂಡಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರು ಹೇಳಿದ್ದಾರೆ.
View more
Mon, 14 Aug 2023 13:02:12Office Staff
ಕ್ರಿಮಿನಲ್ ಪ್ರಕರಣಗಳ ಆರೋಪಿಗಳು ತಮ್ಮ ಪರ ವಾದಿಸಲು ವಕೀಲರನ್ನು ನೇಮಿಸಿಕೊಳ್ಳುವ ಸಲುವಾಗಿ 'ಲೀಗಲ್ ಏಡ್ ಡಿಫೆನ್ಸ್ ಕೌನ್ಸಿಲ್'ನ ನೆರವು ಪಡೆಯಬಹುದಾಗಿದ್ದು, ದ.ಕ. ಜಿಲ್ಲೆಯಲ್ಲಿ ಈ ಕೌನ್ಸಿಲ್ ಆರಂಭಗೊಂಡಿವೆ
View more
Mon, 14 Aug 2023 12:44:13Office Staff
ರಾಜ್ಯದಲ್ಲಿ ಮಂಗಾರು ಮಳೆ ಕೊರತೆ ಉಂಟಾಗಿರುವ ಕಾರಣ ಬರಗಾಲ ಘೋಷಣೆ ಷರತ್ತುಗಳನ್ನು ಸಡಿಲಿಕೆ ಮಾಡಬೇಕೆಂದು ಆಗ್ರಹಿಸಿ ಕೇಂದ್ರದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ; ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ
View more
Mon, 14 Aug 2023 10:04:07Office Staff
ಭಾರತದ ಕ್ರಿಮಿನಲ್ ನ್ಯಾಯ ವ್ಯವಸ್ಥೆಯ ಪುನರ್ ರಚನೆಯ ಉದ್ದೇಶದ ಮೂರು ಮಸೂದೆಗಳ ಬಗ್ಗೆ ವ್ಯಾಪಕ ಸಮಾಲೋಚನೆಗಳು ನಡೆಯಬೇಕು ಹಾಗೂ ಇದರಲ್ಲಿ ಪರಿಣತರು ಮತ್ತು ಸಾರ್ವಜನಿಕರು ಭಾಗವಹಿಸಬೇಕು ಎಂದು ಕಾಂಗ್ರೆಸ್ ರವಿವಾರ ಕರೆ ನೀಡಿದೆ
View more
Mon, 14 Aug 2023 09:42:44Office Staff
ತಾಲೂಕಿನ ಮಲ್ಲಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟ ಘಟನೆ ರವಿವಾರ ವರದಿಯಾಗಿದೆ
View more