Thu, 27 Jul 2023 03:37:20Office Staff
ಶಿವಮೊಗ್ಗ : ಶಿವಮೊಗ್ಗದ ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.
View more
Thu, 27 Jul 2023 03:32:28Office Staff
ಶಿವಮೊಗ್ಗ : ಪ್ರಸಕ್ತ ವಾರದಲ್ಲಿ ಜಿಲ್ಲೆಯಲ್ಲಿ ಮಳೆ ತೀವ್ರತೆ ಹೆಚ್ಚಿದ್ದು, ಅಧಿಕಾರಿಗಳು ಮಳೆ ಹಾನಿಗೊಳಗಾದ ಸಂತ್ರಸ್ತರಿಗೆ ಶೀಘ್ರವಾಗಿ ಮತ್ತು ಉದಾರವಾಗಿ ಸ್ಪಂದಿಸಿ ನಿಯಮಾನುಸಾರ ಪರಿಹಾರಗಳನ್ನು ಒದಗಿಸಬೇಕೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧು ಬಂಗಾರಪ್ಪ ಸೂಚಿಸಿದರು.
View more
Thu, 27 Jul 2023 01:32:12Office Staff
ಬೆಂಗಳೂರು : ಹಿಂದಿನ ಪ್ರವಾಹದ ಅನುಭವದಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೆ ಜೀವಹಾನಿ ತಪ್ಪಿಸಬಹುದು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು
View more
Wed, 26 Jul 2023 22:12:01Office Staff
ಬೆಂಗಳೂರು: ಹವಾಮಾನ ಇಲಾಖೆಯು ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಠಾತ್ ಪ್ರವಾಹ (ಫ್ಲ್ಯಾಷ್ ಫ್ಲಡ್) ಮುನ್ಸೂಚನೆ ನೀಡಿರುವುದರಿಂದ ಜಿಲ್ಲಾಡಳಿತ ಎಚ್ಚರಿಕೆಯಿಂದಿರಬೇಕು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.
View more
Wed, 26 Jul 2023 21:55:52Office Staff
ಉಡುಪಿ : ಮಹಿಳೆಯರು ಸ್ವಂತ ಉದ್ಯೋಗ ಕೈಗೊಳ್ಳುವಂತಹ ತರಬೇತಿಯನ್ನು ನೀಡುವುದರೊಂದಿಗೆ ಅವರುಗಳು ಸ್ವಂತ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸ್ವಾವಲಂಭಿಗಳಾಗುವಂತೆ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಕರೆ ನೀಡಿದರು.
View more
Wed, 26 Jul 2023 21:10:58Office Staff
ತಮ್ಮನ್ನು ಭೇಟಿಯಾದ ನಿಯೋಗದ ಸದಸ್ಯರನ್ನುದ್ದೇಶಿ ಮಾತನಾಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ, ರಾಜ್ಯ ಸರ್ಕಾರ ಸಂವಿಧಾನದ ಆಶಯಗಳಿಗೆ ತಕ್ಕಂತೆ ಆದಿವಾಸಿ, ಬುಡಕಟ್ಟು ಮತ್ತು ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸುವ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ಈ ಕುರಿತು ಯಾವುದೇ ಆತಂಕ ಬೇಡ ಎಂದು ಭರವಸೆಯನ್ನು ನೀಡಿದರು ಎನ್ನಲಾಗಿದೆ.
View more
Wed, 26 Jul 2023 20:15:33Office Staff
ಉಡುಪಿ : ಜನ ಸಾಮಾನ್ಯರಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಕಾಮಗಾರಿಗಳು ಸೇರಿದಂತೆ ಸರ್ಕಾರದ ಅಭಿವೃದ್ಧಿ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಆದ್ಯತೆ ಮೇಲೆ ಅನುಷ್ಠಾನಗೊಳಿಸಿ ಜನೋಪಯೋಗಿಯನ್ನಾಗಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಂ.ಟಿ ರೇಜು ಹೇಳಿದರು.
ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
View more
Wed, 26 Jul 2023 19:11:39Office Staff
ರಾಜ್ಯದಲ್ಲಿ ಎರಡು ವಿಧದ ಪಡಿತರ ಚೀಟಿಗಳನ್ನು ಜಾರಿಗೊಳಿಸುವ ಚಿಂತನೆ ಇದ್ದು, ಇದರ ಮೂಲಕ ವೈದ್ಯಕೀಯ ಸೌಲಭ್ಯ ಪಡೆದುಕೊಳ್ಳುವುದು ಸುಲಭವಾಗಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದ್ದಾರೆ
View more
Wed, 26 Jul 2023 17:38:50Office Staff
ಭಟ್ಕಳ: ಮಣಿಪುರದಲ್ಲಿ ಕುಕಿ ಬುಡಕಟ್ಟು ಸಮುದಾಯದ ಮೂವರು ಮಹಿಳೆಯರನ್ನು ಬೆತ್ತಲೆಗೊಳಿಸಿ, ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ಹಾಗೂ ಯುವತಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಅಮಾನವೀಯ, ಇಡೀ ಮನುಕುಲವೇ ತಲೆ ತಗ್ಗಿಸುವಂತಹ ಕೃತ್ಯ ಎಂದು ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಶನ್ ಆಫ್ ಇಂಡಿಯಾ ಭಟ್ಕಳ ಶಾಖೆ ಕಾರ್ಯದರ್ಶಿ ಮಷಾಯಿಕ್ ತಾಲಿಶ್ ಪತ್ರಿಕಾ ಪಕ್ರಟಣೆಯಲ್ಲಿ ತಿಳಿಸಿದ್ದಾರೆ.
View more