Wed, 21 Jun 2023 17:23:29Office Staff
ಗ್ಯಾರಂಟಿ ಯೋಜ ನೆಗಳ ಜಾರಿಗೆ ಪ್ಲಾನ್ ಮಾಡಿದ್ದೇವೆ. ಆದರೆ, ಕೇಂದ್ರ ಸರಕಾರವು ನಮ್ಮ ಸರ್ವರ್ ಅನ್ನು ಹ್ಯಾಕ್ ಮಾಡಿದ್ದರಿಂದ ಸೇವಾ ಸಿಂಧು ವೆಬ್ಸೈಟ್ ಕಾರ್ಯ ನಿರ್ವಹಿಸ ದಂತಾಗಿತ್ತು ಎಂದು ಲೋಕೋಪ ಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಆರೋಪ ಮಾಡಿದ್ದಾರೆ.
View more
Wed, 21 Jun 2023 16:52:58Office Staff
ರಾಜ್ಯ ಸರಕಾರವು ಪೊಲೀಸ್ ಇಲಾಖೆಗೆ ಸರ್ಜರಿ ಮಾಡಿದ್ದು, 15 ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಸಿ.ಬಿ.ರಿಷ್ಯಂತ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ನಿಯುಕ್ತಿಗೊಳಿಸಲಾಗಿದೆ
View more
Wed, 21 Jun 2023 16:26:05Office Staff
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ(ಫೇಕ್ ನ್ಯೂಸ್) ಹಾವಳಿ ಮಿತಿ ಮೀರಿದೆ.
View more
Wed, 21 Jun 2023 15:21:39Office Staff
ರಾಜ್ಯ ಸರಕಾರದ ನೀತಿಗಳನ್ನು ಖಂಡಿಸಿ ಮತ್ತು ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ವಿತರಿಸಬೇಕು ಎಂದು ಆಗ್ರಹಿಸಿ ಬೃಹತ್ ಧರಣಿ ನಡೆಸಲು ಮುಂದಾದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಆರ್.ಅಶೋಕ್ ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು
View more
Wed, 21 Jun 2023 14:50:47Office Staff
ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರಕಾರ ಅಕ್ಕಿ ಕೊಡಲು ನಿರಾಕರಣೆ ಮಾಡುತ್ತಿದೆ ಎಂದು ಆರೋಪಿಸಿ ರಾಜ್ಯಾದ್ಯಂತ ಕಾಂಗ್ರೆಸ್ ನಾಯಕರು ಅನ್ನ ತಯಾರಿಸುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು
View more
Wed, 21 Jun 2023 07:05:43Office Staff
ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ರವಿವಾರ ಮಿಜೋರಾಮ್ ಮುಖ್ಯಮಂತ್ರಿ ರೋರಮ್ ತಂಗಾ ಜೊತೆಗೆ ಮಾತನಾಡಿ, ಮಿಜೋರಾಮ್;ನಲ್ಲಿ ವಾಸಿಸುತ್ತಿರುವ ಮೈತೈ ಸಮುದಾಯದ ಜನರಿಗೆ ರಕ್ಷಣೆ ನೀಡುವಂತೆ ಕೋರಿದ್ದಾರೆ
View more
Wed, 21 Jun 2023 06:46:29Office Staff
ವಿಧಾನಸಭೆಯಿಂದ ವಿಧಾನ ಪರಿಷತ್ತಿನ ಮೂರು ಸ್ಥಾನಗಳಿಗೆ ನಡೆಯಲಿರುವ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವ ಎನ್.ಎಸ್. ಬೋಸರಾಜು ಹಾಗೂ ತಿಪ್ಪಣ್ಣಪ್ಪ ಕಮಕನೂರು ಅವರಿಗೆ ಅವಕಾಶ ಕಲ್ಪಿಸಲಾಗಿದೆ.
View more
Wed, 21 Jun 2023 06:27:46Office Staff
ಬಿಜೆಪಿ ಸರಕಾರದ ಅವಧಿಯಲ್ಲಿ ಕೋಮು ದ್ವೇಷಕ್ಕೆ ಬಲಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಮಸೂದ್, ಮುಹಮ್ಮದ್ ಫಾಝಿಲ್, ಅಬ್ದುಲ್ ಜಲೀಲ್, ದೀಪಕ್ ರಾವ್, ಮಂಡ್ಯ ಜಿಲ್ಲೆಯ ಇದ್ರೀಸ್ ಪಾಶಾ ಹಾಗೂ ಗದಗ ಜಿಲ್ಲೆಯ ಶಮೀರ್ ಸೇರಿದಂತೆ ಆರು ಮಂದಿಯ ಕುಟುಂಬದ ಸದಸ್ಯರಿಗೆ ತಲಾ 25 ಲಕ್ಷ ರೂ.ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಸ್ತಾಂತರಿಸಿದರು
View more
Wed, 21 Jun 2023 01:09:24Office Staff
ಭಟ್ಕಳ: ಭಟ್ಕಳದಲ್ಲಿ ಮಂಗಳವಾರದಂದು ಬೀದಿ ನಾಯಿಗಳು ಕಂಡ ಕಂಡ ಕಡೆಗಳಲ್ಲಿ ದಾರಿಹೋಕರ ಮೇಲೆ ದಾಳಿ ನಡೆಸಿದ್ದು ಒಂದೇ ದಿನದಲ್ಲಿ ಹತ್ತಕ್ಕೂ ಹೆಚ್ಚು ಜನರ ಮೇಲೆ ದಾಳಿ ಮಾಡಿದ ಘಟನೆ ವರದಿಯಾಗಿದೆ.
View more