Thu, 15 Jun 2023 04:50:25Office Staff
ಮುಂಡಗೋಡ: ಸರಕಾರಿ ಮರಮಟ್ಟು ಸಂಗ್ರಹಾಲಯದಿಂದ ಲಾರಿಯಲ್ಲಿ ಸಾಗವಾನಿ ನಾಟಾ ತುಂಬಿಸಿ ಸಾಗಾಟಿಸುತ್ತಿರುವಾಗ ಶಿರಸಿ ಎಕ್ಕಂಬಿ ತನಿಖಾ ಗೇಟ್ ಬಳಿ ಸಿಕ್ಕಿ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಉಪವಲಯ ಅರಣ್ಯಾಧಿಕಾರಿ ಹಾಗೂ ಮೋಜಣಿದಾರರನ್ನು ಸೇವೆಯಿಂದ ಅಮಾನತ್ ಮಾಡಲಾಗಿದೆ.
ಅಕ್ರಮವಾಗಿ ಸಾಗವಾನಿ ನಾಟಾ ಸಾಗಿಸುತ್ತಿದ್ದ ಪ್ರಕರಣ ದಲ್ಲಿ ಸಾಮಗ್ರಿಗಳ ಪರಿಶೀಲನೆ ಮತ್ತು ಆರೋಪದ ಸಮರ್ಥನೆಗೆ ಮೇಲ್ನೋಟದ ಸಾಕ್ಷ್ಯವಿದೆ ಎಂಬುದು ಪರಾಮರ್ಶೆಯಿಂದ ಮನದಟ್ಟಾಗಿರುವುದರಿಂದ ಮುಂಡಗೋಡ ಸರಕಾರಿ ಮರಮಟ್ಟ
View more
Thu, 15 Jun 2023 04:43:19Office Staff
ಉಡುಪಿ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಜೂನ್ 15 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
View more
Thu, 15 Jun 2023 04:39:21Office Staff
ಉಡುಪಿ : ಜಿಲ್ಲೆಯಾದ್ಯಂತ ಖಾಸಗಿ ಬಸ್ಸುಗಳಲ್ಲಿ ಅಳವಡಿಸಿರುವ ಕರ್ಕಶ ಹಾರ್ನ್ನಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ ದೂರು ಕೇಳಿಬಂದಿದೆ.
ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಗೆ ಸಾಕಷ್ಟು ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಪ್ರಕಟಣೆಯ ಏಳು ದಿನಗಳ ಒಳಗೆ ಬಸ್ಸುಗಳಲ್ಲಿನ ಕರ್ಕಶ ಹಾರ್ನ್ಗಳನ್ನು ತೆರವುಗೊಳಿಸಬೇಕು.
View more
Wed, 14 Jun 2023 03:55:35Office Staff
ಕಾರವಾರ : ಜುಲೈ 8ರಂದು ರಾಜ್ಯದ ಎಲ್ಲಾ ಜಿಲ್ಲಾದ್ಯಂತ ರಾಷ್ಟ್ರೀಯ ಬೃಹತ್ ಲೋಕ ಅದಾಲತ್ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಉದ್ದೇಶವನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರು ಜಿಲ್ಲೆ ಕಾನೂನು ಸೇವೆಗಳ ಪ್ರಾಧಿಕಾರ ಡಿ.ಎಸ್ ವಿಜಯ ಕುಮಾರ ರವರು ಹೇಳಿದರು.
View more
Wed, 14 Jun 2023 03:48:38Office Staff
ಕಾರವಾರ : ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ದಾಂಡೇಲಿಯಲ್ಲಿ ಒಂದು ವರ್ಷದ ಅವಧಿಯ ಪೋಸ್ಟ್ ಡಿಪ್ಲೋಮಾ ಇನ್ ಮೆಕಾಟ್ರಾನಿಕ್ಸ್ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
View more
Wed, 14 Jun 2023 03:39:24Office Staff
ಹುಬ್ಬಳ್ಳಿ: 2023-24ನೇ ಶೈಕ್ಷಣಿಕ ವರ್ಷಕ್ಕೆ ರಿಯಾಯಿತಿ ಬಸ್ ಪಾಸ್ ಗಾಗಿ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಸಲ್ಲಿಸಲು ಸೇವಾಸಿಂಧು ಪೋರ್ಟಲ್ ನಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್. ತಿಳಿಸಿದ್ದಾರೆ.
View more
Wed, 14 Jun 2023 03:33:06Office Staff
ಕಾರವಾರ : ಮಕ್ಕಳು ಕಲಿಯುವ ವಯಸ್ಸಿನಲ್ಲಿ ದುಡಿಮೆ ಮಾಡುತ್ತಿದ್ದರೆ ಅವರು ವಿದ್ಯಾಭ್ಯಾಸದಿಂದ ವಂಚಿತರಾಗುತ್ತಾರೆ. ಅಂತಹ ಮಕ್ಕಳನ್ನು ಗುರುತಿಸಿ ಪಾಲಕರಿಗೆ ತಿಳಿ ಹೇಳಿ ಶಾಲೆಗೆ ಕರೆ ತರುವ ಕೆಲಸವಾಗಬೇಕು ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಡಿ. ಎಸ್. ವಿಜಯಕುಮಾರ ಹೇಳಿದರು.
View more
Wed, 14 Jun 2023 01:57:42Office Staff
ಅರಣ್ಯವಾಸಿಗಳ ಸಮಸ್ಯೆ ಬಗೆಹರಿಸುವಲ್ಲಿ ಕಾಂಗ್ರೇಸ್ ಸರಕಾರ ಬದ್ಧವಾಗಿದೆ ಅಲ್ಲದೇ, ಅರಣ್ಯ ಭೂಮಿ ಹಕ್ಕು ನೀಡುವಲ್ಲಿ ಸರಕಾರ ಗಂಭೀರವಾಗಿ ಪರಿಗಣಿಸುತ್ತದೆ ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ ವೈದ್ಯ ಆಶ್ವಾಸನೆ ನೀಡಿದ್ದಾಗಿ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
View more
Wed, 14 Jun 2023 00:38:02Office Staff
ಭಟ್ಕಳ : ಮುರುಡೇಶ್ವರಕ್ಕೆ ಪ್ರವಾಸಕ್ಕೆಂದು ಬಂದಿದ್ದ ಬೆಂಗಳೂರು ಮೂಲದ ವಿದ್ಯಾರ್ಥಿಗಳ ಪೈಕಿ ಓರ್ವ ವಿದ್ಯಾರ್ಥಿ ಸಮುದ್ರದಲೆಗೆ ಸಿಲುಕಿ ಸಾವನ್ನಪ್ಪಿದ್ದು ಇಬ್ಬರನ್ನು ಸ್ಥಳಿಯ ಲೈಫ್ ಗಾರ್ಡ್ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ಮಂಗಳವಾರ ಮುರುಡೇಶ್ವರದಲ್ಲಿ ಜರಗಿದೆ.
View more