ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
ಕರಾವಳಿ ಸುದ್ದಿ
    ಕಾಪುವಿನಲ್ಲಿ ಮನೆಮನೆಗೆ ತೆರಳಿ ಅನಧಿಕೃತ ಮಾಹಿತಿ ಸಂಗ್ರಹ! !  ವಿವಾದದ ಬೆನ್ನಲ್ಲೇ ಅಭಿಯಾನ ನಿಲ್ಲಿಸಿದ ಪೊಲೀಸರು

    ಕಾಪುವಿನಲ್ಲಿ ಮನೆಮನೆಗೆ ತೆರಳಿ ಅನಧಿಕೃತ ಮಾಹಿತಿ ಸಂಗ್ರಹ! ! ವಿವಾದದ ಬೆನ್ನಲ್ಲೇ ಅಭಿಯಾನ ನಿಲ್ಲಿಸಿದ ಪೊಲೀಸರು

    Sun, 04 Dec 2022 19:35:02  Office Staff
    ಕಾಪು ತಾಲೂಕು ವ್ಯಾಪ್ತಿಯಲ್ಲಿ ಆಶಾ ಕಾರ್ಯಕರ್ತರು ಅನಧಿಕೃತವಾಗಿ ಮನೆಮನೆಗೆ ತೆರಳಿ ಮನೆಮಂದಿಯ ಸಂಪೂರ್ಣ ವಿವರಗಳನ್ನು ಒಳಗೊಂಡ ಮಾಹಿತಿಯನ್ನು ಸಂಗ್ರಹಿಸಿರುವ ವಿಚಾರ ಬೆಳಕಿಗೆ ಬಂದಿದ್ದು, ಇದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಈ ಕುರಿತ ವೀಡಿಯೊವೊಂದು ವೈರಲ್ ಆಗಿ ವಿವಾದದ ರೂಪ ಪಡೆಯುತ್ತಲೇ ಸ್ಥಳೀಯ ಪೊಲೀಸರ ಮೂಲಕವೇ ನಡೆದಿದ್ದ ಈ ಮಾಹಿತಿ ಸಂಗ್ರಹ ಚಟುವಟಿಕೆಯನ್ನು ನಿಲ್ಲಿಸಿದ್ದಾರೆಂದು ಅಧಿಕೃತ ಮೂಲಗಳು ತಿಳಿಸಿವೆ
    ನಾಲ್ಕು ಕಳ್ಳತನ ಪ್ರಕರಣಗಳಲ್ಲಿ ಪಾಲ್ಗೊಂಡಿದ್ದ ಆರೋಪಿಗಳಿಗೆ 3 ವರ್ಷ ಶಿಕ್ಷೆ

    ನಾಲ್ಕು ಕಳ್ಳತನ ಪ್ರಕರಣಗಳಲ್ಲಿ ಪಾಲ್ಗೊಂಡಿದ್ದ ಆರೋಪಿಗಳಿಗೆ 3 ವರ್ಷ ಶಿಕ್ಷೆ

    Sun, 04 Dec 2022 05:35:26  Office Staff
    ಧಾರವಾಡ : ಧಾರವಾಡ ನಗರದ ವಿವಿದೆಡೆ 4 ಪ್ರಕರಣಗಳಲ್ಲಿ ಬಂಗಾರ ಹಾಗೂ ನಗದು ಕಳ್ಳತನಗಳಲ್ಲಿ ಪಾಲ್ಗೊಂಡಿದ್ದ ಆರೋಪಿಗಳಿಗೆ ಮೂರು ವರ್ಷ ಜೈಲು ಶಿಕ್ಷೆ ಹಾಗೂ 1 ಸಾವಿರ ರೂ. ದಂಡ ವಿಧಿಸಿ 3ನೇ ಹೆಚ್ಚುವರಿ ಪ್ರಧಾನ ನ್ಯಾಯಿಕ ದಂಡಾಧಿಕಾರಿಯವರ ನ್ಯಾಯಾಲಯದ ನ್ಯಾಯಾಧೀಶರಾದ ಮಹೇಶ. ಚಂದ್ರಕಾಂತ ಶಿಕ್ಷೆ ಪ್ರಕಟಿಸಿದ್ದಾರೆ. ಧಾರವಾಡ ನಗರದ ವಿದ್ಯಾಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ನವಲೂರಿನ ಎಲ್.ಎಮ್.ಸಿ ಚಾಳಿನಲ್ಲಿ ವಾಸವಾಗಿರುವ ಮಹೇಶ ರಘು ನಾಯ್ಕ ಇವರ ಮನೆಯ ಕೀಲಿಯನ್ನು ಹಗಲು ಹೊತ್ತಿನಲ್ಲ
    ಅಂತರಾಷ್ಟ್ರೀಯ ದತ್ತು ಮಾಸಾಚರಣೆ ಹಾಗೂ ಸಂವಿಧಾನ ದಿನಾಚರಣೆ

    ಅಂತರಾಷ್ಟ್ರೀಯ ದತ್ತು ಮಾಸಾಚರಣೆ ಹಾಗೂ ಸಂವಿಧಾನ ದಿನಾಚರಣೆ

    Sun, 04 Dec 2022 05:26:47  Office Staff
    ಧಾರವಾಡ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ. ಮಕ್ಕಳ ರಕ್ಷಣಾ ನಿರ್ದೆಶನಾಲಯ, ಬೆಂಗಳೂರು. ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಧಾರವಾಡ. ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನರ್ಸಿಂಗ ಕಾಲೇಜು, ಧಾರವಾಡ ಇವರ ಸಹಯೋಗದಲ್ಲಿ ಅಂತರಾಷ್ಟ್ರೀಯ ದತ್ತು ಮಾಸಾಚರಣೆ, ಹಾಗೂ ಸಂವಿಧಾನ ದಿನಾಚರಣೆಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಧಾರವಾಡದಲ್ಲಿ ನಿನ್ನೆ ಆಯೋಜಿಸಲಾಗಿತ್ತು.
    ವಿದ್ಯಾರ್ಥಿಗಳು ಮತದಾರರ ಪಟ್ಟಿಯಲ್ಲಿ ಹೆಸರನ್ನು ನೊಂದಾಯಿಸಿಕೊಳ್ಳಿ: ಡಿಸಿ ಪವನ್‍ಕುಮಾರ್ ಮಾಲಪಾಟಿ

    ವಿದ್ಯಾರ್ಥಿಗಳು ಮತದಾರರ ಪಟ್ಟಿಯಲ್ಲಿ ಹೆಸರನ್ನು ನೊಂದಾಯಿಸಿಕೊಳ್ಳಿ: ಡಿಸಿ ಪವನ್‍ಕುಮಾರ್ ಮಾಲಪಾಟಿ

    Sun, 04 Dec 2022 05:16:53  Office Staff
    ಬಳ್ಳಾರಿ : 18 ವರ್ಷ ತುಂಬಿದ ಎಲ್ಲಾ ವಿದ್ಯಾರ್ಥಿಗಳು ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಹೇಳಿದರು.
    ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: ಜಿಲ್ಲೆಯಾದ್ಯಂತ ಮನೆ ಮನೆ ಸಮೀಕ್ಷೆ

    ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: ಜಿಲ್ಲೆಯಾದ್ಯಂತ ಮನೆ ಮನೆ ಸಮೀಕ್ಷೆ

    Sun, 04 Dec 2022 05:11:34  Office Staff
    ಬೆಂಗಳೂರು ಗ್ರಾಮಾಂತರ : ಭಾರತ ಚುನಾವಣಾ ಆಯೋಗದ ನಿರ್ದೇಶನಗಳನ್ವಯ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆ ಕಾರ್ಯವು ನಡೆಯುತ್ತಿದೆ, 2023ರ ಜನವರಿ 1 ರ ಅರ್ಹತಾ ದಿನಾಂಕಕ್ಕೆ ಅನ್ವಯಿಸಿ ಮತದಾರರ ಪಟ್ಟಿಯನ್ನು ಪರಿಷ್ಕರಿಸಲಾಗುತ್ತಿದೆ. ಡಿಸೆಂಬರ್ 03 ಹಾಗೂ ಡಿಸೆಂಬರ್ 04 ರಂದು ಜಿಲ್ಲೆಯಾದ್ಯಂತ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಅಂಗವಾಗಿ ಮನೆ ಮನೆ ಸಮೀಕ್ಷೆ ಕಾರ್ಯ ನಡೆಯುತ್ತಿದೆ ಜಿಲ್ಲೆಯ ಮತದಾರರು ಇದರ ಪ್ರಯೋಜನ ಪಡೆಯಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ
    ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಕ್ಕೆ ಧಾರವಾಡ ಜಿಲ್ಲಾಡಳಿತ, ಕನ್ನಡ ಸಂಘಟನೆಗಳಿಂದ ಅದ್ದೂರಿ ಸ್ವಾಗತ

    ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಕ್ಕೆ ಧಾರವಾಡ ಜಿಲ್ಲಾಡಳಿತ, ಕನ್ನಡ ಸಂಘಟನೆಗಳಿಂದ ಅದ್ದೂರಿ ಸ್ವಾಗತ

    Sun, 04 Dec 2022 05:06:04  Office Staff
    ಧಾರವಾಡ : ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತು ಬರುವ ಜನವರಿ 6, 7 ಮತ್ತು 8 ರಂದು ಹಾವೇರಿಯಲ್ಲಿ ಆಯೋಜಿಸಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನಿಮಿತ್ತ ಕನ್ನಡದ ಕಂಪಿನ ಕನ್ನಡ ಜ್ಯೋತಿಯ ಹೊತ್ತ ಕನ್ನಡ ರಥವು ಧಾರವಾಡ ನಗರಕ್ಕೆ ಆಗಮಿಸಿತ್ತು. ನಗರದ ಟೋಲ್ ನಾಕಾ ಹತ್ತಿರ ಧಾರವಾಡ ಜಿಲ್ಲಾ ಆಡಳಿತದಿಂದ ತಹಸಿಲ್ದಾರ ಸಂತೋಷ ಹಿರೇಮಠ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ. ಲಿಂಗರಾಜ ಅಂಗಡಿ, ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಅವರ ನೇ
    ಹೆಜಮಾಡಿಯಲ್ಲಿ ಟೋಲ್ ದರ ಯಥಾಸ್ಥಿತಿ ಕಾಪಾಡಿ : ಉಸ್ತುವಾರಿ ಸಚಿವ ಎಸ್.ಅಂಗಾರ

    ಹೆಜಮಾಡಿಯಲ್ಲಿ ಟೋಲ್ ದರ ಯಥಾಸ್ಥಿತಿ ಕಾಪಾಡಿ : ಉಸ್ತುವಾರಿ ಸಚಿವ ಎಸ್.ಅಂಗಾರ

    Sun, 04 Dec 2022 04:59:42  Office Staff
    ಉಡುಪಿ : ಜಿಲ್ಲೆಯ ಹೆಜಮಾಡಿ ಟೋಲ್ಗೇಟ್ನಲ್ಲಿ ಈ ಹಿಂದೆ ಪಡೆಯುತ್ತಿರುವ ದರಗಳನ್ನು ಮಾತ್ರ ಪಡೆಯುವಂತೆ ಹಾಗೂ ಯಾವುದೇ ಕಾರಣಕ್ಕೂ ಸುರತ್ಕಲ್ ಟೋಲ್ ಪ್ಲಾಜಾ ವಿಲೀನದ ಪರಿಷ್ಕೃತ ದರಗಳನ್ನು ಪಡೆಯದಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಸೂಚನೆ ನೀಡಿದರು
    ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೊಸ ದಿಕ್ಸೂಚಿ : ಸಚಿವ ವಿ ಸುನೀಲ್ ಕುಮಾರ್

    ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೊಸ ದಿಕ್ಸೂಚಿ : ಸಚಿವ ವಿ ಸುನೀಲ್ ಕುಮಾರ್

    Sun, 04 Dec 2022 04:54:20  Office Staff
    ಉಡುಪಿ : ಉಡುಪಿ ಜಿಲ್ಲೆ ರಚನೆಯಾಗಿ 25 ವರ್ಷಗಳಾಗಿದ್ದು, ಮುಂದಿನ 25 ವರ್ಷಗಳಲ್ಲಿ, ಜಿಲ್ಲೆಯನ್ನು ಎಲ್ಲಾ ಆಯಾಮಗಳಲ್ಲಿ ಅಭಿವೃದ್ಧಿಪಡಿಸುವ ಯೋಜನೆಗಳ ಕುರಿತಂತೆ ದಿಕ್ಸೂಚಿಯನ್ನು ರಚಿಸಿ, ಅದರಂತೆ ಕಾರ್ಯನಿರ್ವಹಿಸುವ ಮೂಲಕ ಬಲಿಷ್ಠ ಮತ್ತು ಸಮೃದ್ಧ ಉಡುಪಿ ಜಿಲ್ಲೆಯನ್ನಾಗಿಸಲು ಪ್ರತಿಯೊಬ್ಬರೂ ಕಾರ್ಯನಿರ್ವಹಿಸಬೇಕಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ಹೇಳಿದರು. ಅವರು ಪುರಭವನದಲ್ಲಿ, ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ವತಿಯಿಂದ ನಡೆದ ಉಡುಪ
    ವಿಕಲಚೇತನರಿಗೆ ಸವಲತ್ತು ನೀಡಲು ಸಮೀಕ್ಷೆ : ಜಿಲ್ಲಾಧಿಕಾರಿ ಕೂರ್ಮ ರಾವ್ ಎಂ.

    ವಿಕಲಚೇತನರಿಗೆ ಸವಲತ್ತು ನೀಡಲು ಸಮೀಕ್ಷೆ : ಜಿಲ್ಲಾಧಿಕಾರಿ ಕೂರ್ಮ ರಾವ್ ಎಂ.

    Sun, 04 Dec 2022 04:49:13  Office Staff
    ಉಡುಪಿ : ಜಿಲ್ಲೆಯಲ್ಲಿ ವಿಕಲಚೇತನರು ಬಳಸುವ ಸಾಧನ, ಸಲಕರಣೆಗಳನ್ನು ನೀಡಲು ಮತ್ತು ಸರಕಾರದ ಸವಲತ್ತುಗಳನ್ನು ವ್ಯವಸ್ಥಿತವಾಗಿ ವಿಕಲಚೇತನರಿಗೆ ದೊರಕಿಸುವ ಉದ್ದೇಶದಿಂದ ಸಮೀಕ್ಷೆ ನಡೆಸಲಾಗಿದ್ದು, 3 ಸಾವಿರ ಮಂದಿ ವಿಕಲಚೇತನರು ಸಮೀಕ್ಷೆಯಲ್ಲಿ ನೋಂದಾಯಿಸಲ್ಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ತಿಳಿಸಿದರು. ಅವರು ನಗರದ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರ