Tue, 29 Nov 2022 04:57:51Office Staff
ಬೆಂಗಳೂರು ಗ್ರಾಮಾಂತರ ಜಿಲ್ಲೆ : ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ನಗರದ ಒಳಚರಂಡಿ ನೀರು, ಬಾಶೆಟ್ಟಿಹಳ್ಳಿ ಕೈಗಾರಿಕೆಗಳ ವಿಷಯುಕ್ತ ತ್ಯಾಜ್ಯ ಬಿಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಬಂದ ದೂರು ಆಧರಿಸಿ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ದೊಡ್ಡಬಳ್ಳಾಪುರ ನಗರದ ನಾಗರಕೆರೆ ಹಾಗೂ ತಾಲೂಕಿನ ಚಿಕ್ಕತುಮಕೂರು ಎಸ್ಟಿಪಿ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ನಾಗರಕೆರೆಗೆ ಏಳೆಂಟು ಕಡೆ ಮನೆಗಳ ಯುಜಿಡಿ ನೀರು, ಮಗ್ಗಗಳ ಡೈಯಿಂಗ್ ನೀರು ಬಂದು ಸೇರುತ್ತಿದೆ. 2
View more
Tue, 29 Nov 2022 04:52:02Office Staff
ಬಳ್ಳಾರಿ : ಕರ್ನಾಟಕ ರಾಜ್ಯ ರಸ್ತೆ ಪ್ರಾಧಿಕಾರದ ವತಿಯಿಂದ ವಾಹನಗಳನ್ನು ಚಾಲನೆ ಮಾಡುವ ವೇಳೆ ಸಂಭವಿಸಬಹುದಾದ ಅವಘಡಗಳನ್ನು ತಪ್ಪಿಸಲು ರಸ್ತೆ ಬಳಕೆದಾರರಲ್ಲಿ ರಸ್ತೆ ಸುರಕ್ಷತೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಎಲ್ಇಡಿ ವಾಹನಕ್ಕೆ ಸಾರಿಗೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಸೋಮವಾರ ತಮ್ಮ ನಿವಾಸದ ಗೃಹ ಕಚೇರಿಯಿಂದ ಚಾಲನೆ ನೀಡಿದರು.
View more
Tue, 29 Nov 2022 04:17:52Office Staff
ಧಾರವಾಡ : ದೇಶದ ಆರ್ಥಿಕತೆಯ ಅಭಿವೃದ್ಧಿಗೆ ಕೃಷಿಯ ಕೊಡುಗೆ ಅಮೂಲಾಗ್ರವಾಗಿದ್ದು, ಆಧುನಿಕ ವಿಜ್ಞಾನ ತಂತ್ರಜ್ಞಾನಗಳ ಇಂದಿನ ದಿನಮಾನಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗತ್ಯ ಬದಲಾವಣೆಗಳು ಆಗಬೇಕಿವೆಯೆಂದು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ ಜೋಶಿ ಅಭಿಪ್ರಾಯಪಟ್ಟರು.
ಸೋಮವಾರ ಕೃಷಿ ವಿಶ್ವವಿದ್ಯಾಲಯ ಸಭಾಂಗಣದಲ್ಲಿ ಜರುಗಿದ 36ನೇ ಸಂಸ್ಥಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಾ, ಭಾರತವು ಯುವಜನಾಂಗದ ದೇಶವಾಗಿದೆ. ಈ ಯುವ ಜನಾಂಗವೇ ಈ ದೇಶದ
View more
Tue, 29 Nov 2022 04:12:01Office Staff
ಮಡಿಕೇರಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ, ಯುವಜನ ಸೇವಾ ಮತ್ತು ಕ್ರೀಡೆ, ಶಿಶು ಅಭಿವೃದ್ಧಿ ಯೋಜನೆ ಹಾಗೂ ಸ್ವಾಮಿ ವಿವೇಕಾನಂದ ಯುವ ಸಂಘಟನೆ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ವಿಶ್ವ ವಿಕಲಚೇತನರ ದಿನಾಚರಣೆಯ ಪ್ರಯುಕ್ತ ಸಾಂಸ್ಕೃತಿಕ ಮತ್ತು ಆಟೋಟ ಸ್ಪರ್ಧಾ ಕಾರ್ಯಕ್ರಮ ಸೋಮವಾರ ನಡೆಯಿತು.
ನಗರಸಭೆ ಅಧ್ಯಕ್ಷ ಅನಿತಾ ಪೂವಯ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರೆಡ್ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ರವೀಂದ್ರ
View more
Tue, 29 Nov 2022 01:03:19Office Staff
ಭಟ್ಕಳದ ವಿದ್ಯಾರ್ಥಿ ಮುಹಮ್ಮದ್ ಅಮೀನ್ ಬೆಳಕೆ ಲಂಡನ್ ವಿಶ್ವವಿದ್ಯಾನಿಲಯದಲ್ಲಿ ಮಾಸ್ಟರ್ ಆಫ್ ಸೈನ್ಸ್ (ಎಂಎಸ್ಸಿ) ನಲ್ಲಿ ಉನ್ನತ ಸ್ಥಾನದೊಂದಿಗೆ ಯಶಸ್ವಿಯಾಗಿದ್ದಾರೆ ಮತ್ತು ಅವರ ಅತ್ಯುತ್ತಮ ಸಾಧನೆಗಾಗಿ ವೆಸ್ಟ್ ಸ್ಕಾಟ್ಲೆಂಡ್ ವಿಶ್ವವಿದ್ಯಾಲಯವು ಪದವಿ ಪ್ರಮಾಣ ಪತ್ರದೊಂದಿಗೆ ಚಿನ್ನದ ಪದಕ ನೀಡಿ ಗೌರವಿಸಿದೆ
View more
Mon, 28 Nov 2022 23:34:19Office Staff
ಅಂಜುಮನ್ ಹಾಮಿ ಎ ಮುಸ್ಲಿಮೀನ್ ಸಂಸ್ಥೆಯ ಹಳೆ ವಿದ್ಯಾರ್ಥಿಗಳ ನೋಂದಣಿ ಅಭಿಯಾನ ನಡೆಯುತ್ತಿದೆ.
ಅಂಜುಮನ್ ಸಂಸ್ಥೆಯ ಯಾವುದೇ ಶಾಲೆ ಅಥವಾ ಕಾಲೇಜುಗಳಲ್ಲಿ ಕನಿಷ್ಠ ಒಂದು ವರ್ಷ ಅಧ್ಯಯನ ಮಾಡಿದವರನ್ನು ಅಂಜುಮನ್ ಅಲುಮ್ನಿ ಎಂದು ಕರೆಯಲಾಗುತ್ತದೆ. ಪ್ರಸ್ತುತ ಅಂಜುಮನ್ ಹಳೆಯ ವಿದ್ಯಾರ್ಥಿಗಳ ಸದಸ್ಯತ್ವ ನೋಂದಣಿ ಅಭಿಯಾನವು ದೇಶದ ವಿವಿಧ ನಗರಗಳಲ್ಲಿ ಹಾಗೂ ಗಲ್ಫ್ ರಾಷ್ಟ್ರಗಳ ನಗರಗಳಲ್ಲಿ ವೇಗವಾಗಿ ನಡೆಯುತ್ತಿದೆ. ಅಂಜುಮನ್ನಿಂದ ಪದವಿ ಪಡೆದವರನ್ನು ಸದಸ್ಯತ್ವ ನಮೂನೆಯ ಮೂಲಕ ನೋಂದಾಯಿತ ಸದಸ್ಯರನ
View more