Sun, 18 Sep 2022 04:33:14Office Staff
ಯಲ್ಲಾಪುರ : ಗ್ರ್ಯಾನೆಟ್ ಸಾಗಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ನೂರು ಮೀಟರ್ ಆಳದ ಪ್ರಪಾತಕ್ಕೆ ಬಿದ್ದ ಘಟನೆ ಶನಿವಾರ ನಡೆದಿದೆ.
View more
Fri, 16 Sep 2022 13:57:20Office Staff
ಬೆಂಗಳೂರು ಗ್ರಾಮಾಂತರ : ಜಿಲ್ಲೆಯ ಪುರಸಭೆ, ನಗರಸಭೆಗಳ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ, ವೈಜ್ಞಾನಿಕ ಘನತ್ಯಾಜ್ಯ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವುದರೊಂದಿಗೆ, ಸಾರ್ವಜನಿಕರಲ್ಲಿ ತ್ಯಾಜ್ಯ ನಿರ್ವಹಣೆಯ ಬಗ್ಗೆ ಅರಿವು ಮೂಡಿಸಬೇಕು. ತ್ಯಾಜ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಆರ್.ಲತಾ ಅವರು ಸೂಚಿಸಿದರು.
ದೇವನಹಳ್ಳಿ ತಾಲ್ಲೂಕಿನ ಬೀರಸ
View more
Fri, 16 Sep 2022 13:50:39Office Staff
ಧಾರವಾಡ : ನಗರದ ಜವಾಹರ ನವೋದಯ ವಿದ್ಯಾಲಯ ಶಾಲೆ, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಧಾರವಾಡದ ಸಿಬಿಟಿ, ಆರ್.ಎನ್.ಶೆಟ್ಟಿ ಪ್ರೌಢಶಾಲೆ ಹಾಗೂ ರಾಧಾಕೃಷ್ಣ ನಗರದಲ್ಲಿ ಪ್ರಧಾನಮಂತ್ರಿ ರಾಷ್ಟ್ರೀಯ ಪೋಷಣ ಅಭಿಯಾನದ ಅಂಗವಾಗಿ ಜವಾಹರ ನವೋದಯ ಶಾಲೆಯ ವಿದ್ಯಾರ್ಥಿಗಳು ಬುಧವಾರ ಪೋಷಣಾ ಶಿಕ್ಷಣ ಬೀದಿ ನಾಟಕ ಪ್ರದರ್ಶಿಸಿದರು.
View more
Fri, 16 Sep 2022 13:46:15Office Staff
ಉಡುಪಿ : ಜಿಲ್ಲೆಯಲ್ಲಿ ಸಾರ್ವಜನಿಕರ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕೆ ಅಗತ್ಯವಿರುವ ರಸ್ತೆ ಸುಧಾರಣಾ ಮೂಲಭೂತ ಕಾಮಗಾರಿಗಳನ್ನು ಕೈಗೊಂಡು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟು ಅಪಘಾತ ಪ್ರಮಾಣವನ್ನು ಅತ್ಯಂತ ಕಡಿಮೆಗೊಳಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು.
ಅವರು ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
View more
Thu, 15 Sep 2022 04:35:10Office Staff
ಕಾರವಾರ : ಔಪಚಾರಿಕ ಶಿಕ್ಷಣವನ್ನು ಪಡೆಯದೇ ಇರುವಂತಹ 15 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳನ್ನು ಗುರುತಿಸಿ ಅವರಿಗೆ ಅಕ್ಷರ ಜ್ಞಾನವನ್ನು ನೀಡಿ ನವಸಾಕ್ಷರರನ್ನಾಗಿ ಮಾಡವುದೆ ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆಯ ಹಾಗೂ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯ ಉದ್ದೇಶವಾಗಿದೆ ಎಂದು ಜಿಲ್ಲಾ ವಯಸ್ಕರ ಶಿಕ್ಷಣ ಅಧಿಕಾರಿ ಶ್ರೀಕಾಂತ ಹೆಗಡೆ ಹೇಳಿದರು.
View more
Thu, 15 Sep 2022 04:28:10Office Staff
ಬೆಂಗಳೂರು - ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರವೇಶ ಒದಗಿಸುವ ಉದ್ದೇಶದಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಶೇ.25 ರಷ್ಟು ಪ್ರವೇಶಾವಕಾಶ ಹೆಚ್ಚಿಸಲಾಗುತ್ತಿದೆ. ಇದರಿಂದ ಈವರೆಗೆ ವಿದ್ಯಾರ್ಥಿ ನಿಲಯ ಸಿಗದೆ ಸಂಕಷ್ಟ ಎದುರಿಸುತ್ತಿದ್ದ ರಾಜ್ಯದ ಸುಮಾರು 25 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಇದೀಗ ಅನುಕೂಲವಾಗಲಿದೆ ಎಂದು ಅವರು ತಿಳಿಸಿದ್ದಾರೆ.
View more
Thu, 15 Sep 2022 04:02:28Office Staff
ಉಡುಪಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟವು ಸೆಪ್ಟಂಬರ್ 18 ರಿಂದ 21 ರ ವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ನಡೆಯಲಿದೆ.
ಸ್ಪರ್ಧೆ ನಡೆಯುವ ದಿನಾಂಕ, ಸ್ಥಳದ ವಿವರ: ಸೆಪ್ಟಂಬರ್ 18 ಮತ್ತು 19 ರಂದು ಉಡುಪಿ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಫುಟ್ಬಾಲ್, ಈಜು, ಟೆನ್ನಿಸ್, ಬಾಕ್ಸಿಂಗ್ ಮತ್ತು ವುಷು ಸ್ಪರ್ಧೆಗಳು ಹಾಗೂ ಮಂಗಳೂರು ಮಂಗಳಾ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಬಾಸ್ಕೆಟ್ಬಾಲ್, ಕುಸ್ತಿ,
View more
Thu, 15 Sep 2022 03:57:16Office Staff
ಬೆಂಗಳೂರು : ಆರ್ಥಿಕವಾಗಿ ತೀರಾ ಹಿಂದುಳಿದ ಪರಿಶಿಷ್ಟ ಪಂಗಡ, ಆದಿವಾಸಿ ಬುಡಕಟ್ಟು ಸಮುದಾಯ, ಕೊರಗ ಜನಾಂಗದವರು ತೀವ್ರ ತರಹದ ಖಾಯಿಲೆಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಲ್ಲಿ ಅವರ ವೈದ್ಯಕೀಯ ವೆಚ್ಚವನ್ನು ಈ ಹಿಂದಿನಂತೆಯೇ ಸರ್ಕಾರದ ವತಿಯಿಂದ ಮರುಪಾವತಿಸುವಂತೆ ಕರಾವಳಿ ಜಿಲ್ಲೆಗಳ ಶಾಸಕರ ನಿಯೋಗ ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಪರಿಶಿಷ್ಟ ಪಂಗಡ, ಆದಿವಾಸಿ ಬುಡಕಟ್ಟು ಸಮು
View more