Fri, 05 Aug 2022 02:51:59Office Staff
ಬಳ್ಳಾರಿ : ಶಾಸಕರ ಅನುದಾನದ ಕಾಮಗಾರಿಗಳು, ಎಚ್ಎಸ್ಡಿಪಿ, ಎಸ್ಸಿಪಿ-ಟಿಎಸ್ಪಿ ಸೇರಿದಂತೆ ಇಲಾಖೆಗೆ ನಿಗದಿಯಾಗಿರುವ ಎಲ್ಲಾ ಬಾಕಿ ಕಾಮಗಾರಿಗಳು ಆಗಸ್ಟ್ ಅಂತ್ಯಕ್ಕೆ ಪೂರ್ಣಗೊಳ್ಳಬೇಕು ಮತ್ತು ಟೆಂಡರ್ ಪ್ರಕ್ರಿಯೆಯಲ್ಲಿರುವ ಕಾಮಗಾರಿಗಳನ್ನು ಆಯಾ ಕ್ಷೇತ್ರದ ಶಾಸಕರ ಸಮ್ಮುಖದಲ್ಲಿ ಶೀಘ್ರ ಕಾರ್ಯಾರಂಭಗೊಳಿಸುವಂತೆ ಲೋಕೋಪಯೋಗಿ ಇಲಾಖೆಯ ಸಚಿವರಾದ ಸಿ. ಸಿ. ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರದಂದು ಲೋಕೋಪಯೋಗಿ ಇಲಾಖೆಗಳ ಅಧಿಕಾರಿಗ
View more
Fri, 05 Aug 2022 01:02:30Office Staff
ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿಧಿಸಲಾಗಿರುವ ನಿಷೇಧಾಜ್ಞೆಯನ್ನು (ಸೆಕ್ಷನ್ 144) ಆಗಸ್ಟ್ 8ರ ಬೆಳಗ್ಗೆ 6 ಗಂಟೆಯವರೆಗೆ ವಿಸ್ತರಿಸಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಆದೇಶಿಸಿದ್ದಾರೆ.
View more
Fri, 05 Aug 2022 00:58:35Office Staff
ನೆರೆಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಒಂದಷ್ಟು ಮಂದಿ ಪ್ರಚೋದನಕಾರಿ ಹೇಳಿಕೆಗಳನ್ನು ಹಾಕುತ್ತಿರುವ ಕುರಿತು ಉಡುಪಿ ಜಿಲ್ಲಾ ಪೊಲೀಸ್ ಗಂಭೀರವಾಗಿ ಪರಿಗಣಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರೀತಿಯ ಪ್ರಚೋದನಾಕಾರಿ ಸಂದೇಶ ಅಥವಾ ಹೇಳಿಕೆಗಳನ್ನು ಹಾಕಿದಲ್ಲಿ ಅಂತವರ ವಿರುದ್ದ ಕಾನೂನು ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ ಅವರು ಎಚ್ಚರಿಕೆ ನೀಡಿದ್ದಾರೆ.
View more