Sun, 31 Jul 2022 01:40:22Office Staff
ಧಾರವಾಡ : ಕನ್ನಡ ಅಭಿವೃದ್ಧಿ ಪ್ರಾಧಿಕಾರವು ರಾಜ್ಯಾಡಳಿತದಲ್ಲಿ ಸಂಪೂರ್ಣ ಕನ್ನಡ ಬಳಕೆಗೆ ಆದ್ಯತೆ ನೀಡಿ, ಕೇಂದ್ರ ಹಾಗೂ ಹೊರ ರಾಜ್ಯಗಳಿಂದ ಬರುವ ಪತ್ರ, ಸುತ್ತೋಲೆಗಳನ್ನು ಕನ್ನಡಿಕರಿಸಿ, ಆಡಳಿತ ನಿರ್ವಹಿಸಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ. ಎಸ್. ನಾಗಾಭರಣ ಹೇಳಿದರು.
ಅವರು ಶನಿವಾರ ಬೆಳಿಗ್ಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಕನ್ನಡ ಭಾಷಾ ಅನುಷ್ಠಾನ ಕುರಿತು ಪ್ರಗತಿ ಪರುಶೀಲನಾ ಸಭೆ ಜರುಗಿಸಿ, ಮಾತನಾಡಿದರು.
View more
Sun, 31 Jul 2022 01:33:17Office Staff
ಚಿಕ್ಕಬಳ್ಳಾಪುರ : ವಿಶ್ವೇಶ್ವರಯ್ಯ ಜಲ ಭಾಗ್ಯ ನಿಗಮದಿಂದ ಸುಮಾರು 52 ಕೋಟಿ ರೂ ವೆಚ್ಚದಲ್ಲಿ ತಾಲ್ಲೂಕಿನ ಮಂಡಿಕಲ್ಲು ಹೋಬಳಿಯ ದೊಡ್ಡಪೈಲಗುರ್ಕಿ ಭಾಗದಲ್ಲಿ ಬೂದಗುಂಡ್ಲ ಡ್ಯಾಮ್ ಅನ್ನು ನಿರ್ಮಿಸಿ ಪ್ರತಿ ಮನೆ ಮನೆಗೆ ನಲ್ಲಿ ಮೂಲಕ ಕುಡಿಯುವ ನೀರನ್ನು ಪೂರೈಸುವ ಕಾರ್ಯ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ತಿಳಿಸಿದರು.
View more
Sun, 31 Jul 2022 01:28:04Office Staff
ಚಿಕ್ಕಬಳ್ಳಾಪುರ : ಮಾನವ ಕಳ್ಳಸಾಗಾಣಿಕೆಯು ಸಮಾಜದ ಒಂದು ಪಿಡುಗಾಗಿದ್ದು, ಸಮಾಜದಲ್ಲಿರುವ ನಾಗರೀಕರು ತಮ್ಮ ಕರ್ತವ್ಯವನ್ನು ನಿಭಾಯಿಸಿದಾಗ ಮಾನವ ಕಳ್ಳ ಸಾಗಾಣಿಕೆಯನ್ನು ತಡೆಗಟ್ಟಲು ಸಾಧ್ಯ ಎಂದು ಗೌರವಾನ್ವಿತ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಮುಖ್ಯನ್ಯಾಯಿಕ ದಂಡಾಧಿಕಾರಿಗಳಾದ ಬಾಳಪ್ಪ ಅಪ್ಪಣ್ಣ ಜರಗು ಅವರು ತಿಳಿಸಿದರು.
ಶನಿವಾರ ಜಿಲ್ಲಾ ಪಂಚಾಯತ್ ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೋ
View more
Sun, 31 Jul 2022 00:30:35Office Staff
ಬೆಳ್ಳಾರೆಯಲ್ಲಿ ಇತ್ತೀಚೆಗೆ ಹತ್ಯೆಯಾದ ಪ್ರವೀಣ್ ನೆಟ್ಟಾರು ಅವರ ಮನೆಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರು ಅದಕ್ಕಿಂದ ಕೆಲ ದಿನಗಳ ಹಿಂದೆ ಕೊಲೆಯಾದ ಮಸೂದ್ ಮಾತ್ರವಲ್ಲದೆ, ಸಿಎಂ ನಗರದಲ್ಲಿರುವಾಗಲೇ ಹತ್ಯೆಯಾದ ಫಾಝಿಲ್ ಮನೆಗೂ ಭೇಟಿ ನೀಡಿ ಸಾಂತ್ವಾನ ಹೇಳಬೇಕಾಗಿತ್ತು ಎಂಬ ಅಭಿಪ್ರಾಯ ಇಂದು ನಡೆದ ದ.ಕ. ಜಿಲ್ಲಾ ಶಾಂತಿ ಸಭೆಯಲ್ಲಿ ವ್ಯಕ್ತವಾಗಿದೆ.
ಕಳೆದ ಸುಮಾರು ಎರಡು ವಾರದಿಂಚೆಗೆ ಜಿಲ್ಲೆಯಲ್ಲಿ ನಡೆದ ಅಹಿತಕರ ಘಟನೆಯಲ್ಲಿ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆಯನ್ನು
View more
Sat, 30 Jul 2022 20:15:36Office Staff
ಮಂಗಳೂರು : ಸುರತ್ಕಲ್ ನಲ್ಲಿ ನಡೆದ ಫಾಝಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಈಗಾಗಲೇ 21ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದು, ನಮ್ಮ ತನಿಖೆಯಲ್ಲಿ ಅವರೆಲ್ಲರೂ ಶಂಕಿತರು. ಅವರ ಸಂಘಟನೆ ಅಥವಾ ಇತರ ಯಾವುದೇ ಲಿಂಕ್ ಮುಖ್ಯವಲ್ಲ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.
ವೆಬ್ ಸೈಟ್ ಒಂದರಲ್ಲಿ ಫಾಝಿಲ್ ಕೊಲೆ ಪ್ರಕರಣದಲ್ಲಿ 4 ಮಂದಿ ಬಜರಂಗದಳ ಕಾರ್ಯಕರ್ತರು ವಶಕ್ಕೆ ಎಂಬ ವರದಿ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ ಈ ಪ್ರತಿಕ್ರಿಯೆ ನೀಡಿದ್ದಾರೆ.
View more
Sat, 30 Jul 2022 20:13:28Office Staff
ಬಿಗಿ ಪೊಲೀಸ್ ಕಾವಲಿನಲ್ಲಿರುವ ಸುರತ್ಕಲ್ನಲ್ಲಿ ಶುಕ್ರವಾರ ಸಂಜೆ ಪೊಲೀಸರು ಪಥ ಸಂಚಲನ ನಡೆಸಿ, ಜನರಲ್ಲಿ ಧೈರ್ಯ ತುಂಬಿದರು. ಸುರತ್ಕಲ್, ಚೊಕ್ಕಬೆಟ್ಟು, ಕಾಟಿಪಳ್ಳ ಮಾರ್ಗವಾಗಿ ಗಣೇಶಪುರ ದೇಗುಲದ ತನಕ ಪಥ ಸಂಚಲನ ನಡೆಯಿತು.
ಸಂಜೆ 6 ಗಂಟೆಯ ನಂತರ ಎಲ್ಲ ಅಂಗಡಿ ಮುಂಗಟ್ಟುಗಳು ಬಂದಾದವು. ಬಸ್ ಸಂಚಾರ ಕೂಡ ಸ್ಥಗಿತಗೊಂಡಿತ್ತು.
View more
Sat, 30 Jul 2022 20:11:25Office Staff
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆಗಳು ನಡೆದಿದ್ದು, ದ್ವೇಷದ ವಾತಾವರಣ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ’30 ವರ್ಷಗಳ ಹಿಂದೆ ಕರಾವಳಿಯನ್ನು ರಾಜ್ಯ- ದೇಶಗಳ ಜನರು ಪ್ರೀತಿ, ಗೌರವ ಮತ್ತು ಹೆಮ್ಮೆಯ ಭಾವನೆಗಳಿಂದ ನೋಡುತ್ತಿದ್ದರಲ್ಲ, ಅಂಥ ಕರಾವಳಿಯನ್ನು ದಯಮಾಡಿ ನಿರ್ಮಾಣ ಮಾಡಿ’ ಎಂದು ಯುವಕರಿಗೆ ಬಹಿರಂಗ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ.
View more