Sat, 30 Jul 2022 04:44:55Office Staff
ಧಾರವಾಡ : ಜಿಲ್ಲೆಯಲ್ಲಿ ಕೋಟ್ಪಾ-2003 ಕಾಯ್ದೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಆದರೂ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ನಿಷೇಧಿತ ಪ್ರದೇಶಗಳಲ್ಲಿ ಧೂಮಪಾನ ಮಾಡುತ್ತಿರುವುದು ಕಂಡು ಬರುತ್ತಿದೆ. ಆರೋಗ್ಯ ಮತ್ತು ಪೊಲೀಸ್ ಹಾಗೂ ಪಾಲಿಕೆಯ ಸಿಬ್ಬಂದಿಗಳ ಮೂಲಕ ಕಾಯ್ದೆ ಉಲ್ಲಂಘಿಸುವವರ ವಿರುದ್ಧ ಕೋಟ್ಪಾ-2003 ಕಾಯ್ದೆಯಡಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.
ಅವರು ಜಿಲ
View more
Sat, 30 Jul 2022 04:37:41Office Staff
ಉಡುಪಿ : ಆಗಸ್ಟ್ 10 ರಂದು ಜಿಲ್ಲೆಯ 1 ರಿಂದ 19 ವರ್ಷದೊಳಗಿನವರಿಗೆ ಜಂತುಹುಳು ನಿವಾರಣಾ ಮಾತ್ರೆಯನ್ನು ವಿತರಿಸಲು ಅಗತ್ಯ ಸಿದತೆಗಳನ್ನು ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ ನಡೆದ, ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಕುರಿತು ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಾಮಾನ್ಯವಾಗಿ ಜಂತುಹುಳುಗಳು ಮಣ್ಣಿನ ಮೂಲಕ ಜನರಿಗೆ ಹ
View more
Sat, 30 Jul 2022 04:30:17Office Staff
ಉಡುಪಿ : ತಾಲೂಕಿನ ಕುದಿ ಗ್ರಾಮದ ಜನತೆಗೆ ಇಂದು ಬೆಳಗ್ಗೆ ಇದ್ದಕ್ಕಿದ್ದಂತೆ ತೀವ್ರ ಉಸಿರಾಟದ ತೊಂದರೆ ಹಾಗೂ ಅಸ್ವಸ್ಥತೆ ಕಾಣಿಸಿಕೊಂಡಿದ್ದರಿಂದ ತೀವ್ರ ಆತಂಕದಲ್ಲಿದ್ದರು. ಗ್ರಾಮದಲ್ಲಿದ್ದ ಎ.ಜಿ.ಎಸ್. ಎಲ್ಪಿಜಿ ಇಂಡಸ್ಟ್ರೀಯಲ್ಲಿ ಸಂಭವಿಸಿದ ಅನಿಲ ಸೋರಿಕೆಯಿಂದಾಗಿ ಈ ಘಟನೆ ಸಂಭವಿಸಿತ್ತು.
View more
Sat, 30 Jul 2022 04:23:04Office Staff
ಮಂಗಳೂರು : ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಾಗೂ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಬಂಟ್ವಾಳ, ಪುತ್ತೂರು, ಕಡಬ, ಬೆಳ್ತಂಗಡಿ ಮತ್ತು ಸುಳ್ಯ ತಾಲೂಕುಗಳಲ್ಲಿ ಕರ್ನಾಟಕ ಅಬಕಾರಿ ಕಾಯಿದೆ 1965 ಸೆಕ್ಷನ್ 21(1)ರಡಿ ಜು.29 ರಿಂದ ಆಗಸ್ಟ್ 01ರ ಬೆಳಿಗ್ಗೆ 8 ಗಂಟೆಯವರೆಗೆ ಯಾವುದೇ ರೀತಿಯ ಮದ್ಯ ಮಾರಾಟ, ದಾಸ್ತಾನು ಹಾಗೂ ಸಾಗಾಣಿಕೆಯನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಆದೇಶ ಹೊರಡಿಸಿದ್ದಾರೆ.
View more
Sat, 30 Jul 2022 04:14:25Office Staff
ಮಂಗಳೂರು : ಕಾನೂನು ಸುವ್ಯವಸ್ಥೆ ಹಾಗೂ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕುಗಳಲ್ಲಿ ಜು.29 ರಿಂದ ಆಗಸ್ಟ್ 06ರ ಮಧ್ಯರಾತ್ರಿ 12 ಗಂಟೆಯವರೆಗೆ ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
View more
Sat, 30 Jul 2022 04:08:03Office Staff
ಮಂಗಳೂರು : ಜಿಲ್ಲೆಯಲ್ಲಿ ಸಂಭವಿಸಿದ ಅಹಿತಕರ ಘಟನೆಗಳಿಂದಾಗಿ ಪರಿಸ್ಥಿತಿ ಬೂದಿ ಮುಟ್ಟಿದ ಕೆಂಡದಂತಿದ್ದು, ಉದ್ವಿಗ್ನತೆಯಿಂದ ಕೂಡಿದೆ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಮುಂದೆ ಅಹಿತಕರ ಘಟನೆ ನಡೆದು ಶಾಂತಿ ಸುವ್ಯವಸ್ಥೆಗೆ ತೊಂದರೆಯುಂಟಾಗುವ ಸಾಧ್ಯತೆಗಳಿರುವುದರಿಂದ ಈಗಾಗಲೇ ಮಂಗಳೂರು ನಗರ ಪೊಲೀಸ್ ಆಯುಕ್ತರ ವ್ಯಾಪ್ತಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
View more