Sat, 30 Jul 2022 02:06:49Office Staff
ರಾಜ್ಯದಲ್ಲಿ ಇಷ್ಟೋಂದು ಅಮಾಯಕ ಯುವಕರು ಕೊಲೆಯಾಗುತ್ತಿದ್ದು ಇದಕ್ಕೆಲ್ಲಾ ಅಧಿಕಾರದಲ್ಲಿರುವ ಸರಕಾರದ ವೈಫಲ್ಯಗಳೇ ಕಾರಣವಾಗಿದ್ದು ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹ ಮಂತ್ರಿ ಅರಗ ಜ್ಞಾನೇಂದ್ರ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕರ್ನೆಲಿಯೋ ಆಗ್ರಹಿಸಿದ್ದಾರೆ.
View more
Sat, 30 Jul 2022 01:55:33Office Staff
ಮಂಗಳೂರು : ಸುರತ್ಕಲ್ ನಲ್ಲಿ ನಡೆದ ಫಾಝಿಲ್ನ ಹತ್ಯೆಯೂ ಸಂಘಪರಿವಾರ ಮತ್ತು ಬಿಜೆಪಿ ಸರ್ಕಾರದ ಜನಪ್ರತಿನಿಧಿಗಳ ಪ್ರಚೋದನಕಾರಿ ಹೇಳಿಕೆಗಳು ಹಾಗೂ ಕನ್ನಡ ಮಾಧ್ಯಮಗಳ ಕೋಮು ವೈಷಮ್ಯ ತುಂಬಿದ ವರದಿಗಳೇ ಈ ಹತ್ಯೆಗೆ ಕಾರಣವಾಗಿದೆಯೆಂದು ಎಸ್ಡಿಪಿಐ ಆರೋಪಿಸಿದೆ.
View more
Sat, 30 Jul 2022 01:53:35Office Staff
ಕಳೆದೆರಡು ದಿನಗಳಿಂದ ಮುಖ್ಯಮಂತ್ರಿ, ಗೃಹ ಸಚಿವ ಮತ್ತು ರಾಜಕೀಯ ನೇತಾರರ ಉದ್ರೇಕಕಾರಿ ಹೇಳಿಕೆಗಳು ಮತ್ತು ಸಾಮಾಜಿಕ ಜಾಲತಾಣದಲ್ಲಿ ಅತಿಯಾದ ದ್ವೇಷ ಪ್ರಸರಣವೇ ಈ ಹತ್ಯೆಗೆ ಮೂಲ ಕಾರಣ ಎಂದು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ್ ಆರೋಪಿಸಿದ್ದಾರೆ.
View more
Sat, 30 Jul 2022 01:50:18Office Staff
ಮಂಗಳೂರು: ಬೆಳ್ಳಾರೆಯಲ್ಲಿ ದುಷ್ಕರ್ಮಿಗಳ ಕೃತ್ಯಕ್ಕೆ ಬಲಿಯಾದ ಪ್ರವೀಣ್ ನೆಟ್ಟಾರು ಮನೆಗೆ ಇಂದು ಮಾಜಿ ಶಾಸಕ ಐವನ್ ಡಿ ಸೋಜರವರ ನೇತೃತ್ವದ ಕಾಂಗ್ರೆಸ್ ನಿಯೋಗ ಭೇಟಿ ಮಾಡಿ, ಮೃತರ ಪತ್ನಿ ಹಾಗೂ ಕುಟುಂಬದ ಸದಸ್ಯರಿಗೆ ಸಾಂತ್ವನ ನೀಡಿದರು.
View more
Sat, 30 Jul 2022 01:47:33Office Staff
ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜು.29ರಂದು ಸುರತ್ಕಲ್, ಬಜ್ಪೆ, ಮುಲ್ಕಿ ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ರಜೆ ಘೋಷಿಸಿದ್ದಾರೆ.
ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜು.29ರಂದು (ಇಂದು) ಬೆಳಗ್ಗೆ 10ರಿಂದ ರಾತ್ರಿ 11ರವರೆಗೆ ಮದ್ಯ ಮಾರಾಟ ನಿಷೇಧಿಸಲು ಪೊಲೀಸ್ ಕಮಿಷನರ್ ಸೂಚನೆ ನೀಡಿದ್ದಾರೆ.
View more
Sat, 30 Jul 2022 01:45:51Office Staff
ಮಂಗಳೂರು: ಸುರತ್ಕಲ್ ಮಂಗಳಪೇಟೆ ನಿವಾಸಿ ಪಾಝಿಲ್ ಎಂಬ ಯುವಕನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದು ಮಾಜಿ ಸಚಿವ ಶಾಸಕ ಯು.ಟಿ.ಖಾದರ್ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.ಅರೋಪಿಗಳು ಯಾರೇ ಆಗಲಿ ಶೀಘ್ರ ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಯು.ಟಿ.ಖಾದರ್ ಒತ್ತಾಯಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಕೊಲೆಗಳು ಸಂಭವಿಸುತ್ತಿದ್ದು, ಕೋಮು ಸೌಹಾರ್ದತೆ ಹಾಳಾಗುವ ಸೂಚನೆ ದಟ್ಟವಾಗಿದೆ.ಆದುದರಿಂದ ಇದನ್ನು ಸರಕಾರ ಹಾಗೂ ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಿ ಜಿಲ್ಲೆಯಲ್ಲಿ ಶ
View more
Sat, 30 Jul 2022 01:43:38Office Staff
ಮಂಗಳೂರು: ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ರೂ ಪರಿಹಾರದ ಚೆಕ್ ಹಸ್ತಾಂತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊಲೆಪ್ರಕರಣವನ್ನು ಬೇಧಿಸುವವರೆಗೆ ಅಕ್ಷರಶ: ದಣಿವಿಲ್ಲದೇ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
View more