Sat, 25 Jun 2022 23:39:54Office Staff
ಕಾರವಾರ : ನಗರದಲ್ಲಿ ಹಿಂದಿ ಭಾಷೆ ಹೇರುತ್ತಿರುವುದನ್ನ ಖಂಡಿಸಿ ಕನ್ನಡ ರಕ್ಷಣಾ ವೇದಿಕೆ ಕಾರ್ಯಕರ್ತರು ಶನಿವಾರ ಕಾರವಾರದಲ್ಲಿ ಪ್ರತಿಭಟನೆ ನಡೆಸಿದರು.
ನಗರಸಭೆ ಅಧಿಕಾರಿಗಳು ಮತ್ತು ಕನ್ನಡ ವಿರೋಧಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ನಗರದಲ್ಲಿ ಮೆರವಣೆಗೆ ನಡೆಸಿದರು.
ಕರವೇ ರಾಜ್ಯಾಧ್ಯಕ್ಷ ಪ್ರವೀಣಕುಮಾರ ಶೆಟ್ಟಿ ನೇತೃತ್ವದಲ್ಲಿ ಮೆರವಣಿಗೆಯಲ್ಲಿ ಸಾಗಿದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಕೆಲ ಹೊತ್ತು ಪ್ರತಿಭಟಿಸಿ ಕನ್ನಡ ಪರ ಘೋಷಣೆ ಕೂಗಿದರು. .
View more
Sat, 25 Jun 2022 23:30:20Office Staff
ಕುಮಟಾ : ಪ್ರವಾಸಕ್ಕೆ ಬಂದಿದ್ದ ನಾಲ್ವರು ವಿದ್ಯಾರ್ಥಿಗಳು ನೀರು ಪಾಲಾಗಿರುವ ಘಟನೆ ಕುಮಟಾ ತಾಲೂಕಿನ ಬಾಡದಲ್ಲಿ ಶನಿವಾರ ನಡೆದಿದೆ.
ಘಟನೆಯಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಇನ್ನಿಬ್ಬರು ನೀರುಪಾಲಾಗಿದ್ದಾರೆ.
ಬೆಂಗಳೂರಿನಿಂದ 87 ಮಂದಿ ವಿದ್ಯಾರ್ಥಿಗಳ ತಂಡ ಕುಮಟಾ ಪ್ರವಾಸಕ್ಕೆ ಬಂದಿದ್ದರು. ಕುಮಟಾದ ಬಾಡದಲ್ಲಿರುವ ಸಿಲ್ವರ್ ಸ್ಯಾಂಡ್ ರೆಸಾರ್ಟ್ ಗೆ ಬಂದಿದ್ದ ವಿದ್ಯಾರ್ಥಿಗಳಲ್ಲಿ ಕೆಲವರು ಸಮುದ್ರಕ್ಕಿಳಿದು ಆಟವಾಡುತ್ತಿದ್ದರು. ಈ ವೇಳೆ ನಾಲ್ವರು ನೀರು ಪಾಲಾಗಿದ್ದಾರೆ
View more
Sat, 25 Jun 2022 23:26:39Office Staff
ಭಾರತ ಇಂದು ಬಲಿಷ್ಟವಾಗಿ, ಶಕ್ತಿಶಾಲಿಯಾಗಿ, ಸಮೃದ್ಧವಾಗಿ, ಸ್ವಾಭಿಮಾನಿ ರಾಷ್ಟ್ರವಾಗಿ ನಿರ್ಮಾಣವಾಗುತ್ತಿದ್ದು ಪ್ರಸ್ತುತವಾಗಿ ದೇಶದಲ್ಲಿ ಆಗುತ್ತಿರುವಂತಹ ಬದಲಾವಣೆ, ಹಾಗೂ ಅಭಿವೃದ್ಧಿ ಕಾರ್ಯಗಳಿಂದ ಇಡೀ ಪ್ರಪಂಚವೇ ಭಾರತದೆಡೆಗೆ ಗಮನ ಹರಿಸುವಂತಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
View more
Sat, 25 Jun 2022 20:54:53Office Staff
'ಪಠ್ಯ ಪುಸ್ತಕ ಪರಿಷ್ಕರಣೆ ಬಗ್ಗೆ ಉದ್ಭವಿಸಿರುವ ಎಲ್ಲ ಅಂಶಗಳ ಕುರಿತು ಸರಕಾರ ನಿಖರ ಮಾಹಿತಿ ಜನರ ಮುಂದೆ ಮಂಡಿಸಬೇಕು. 'ಸುಳ್ಳು ಹೇಳುವುದಿಲ್ಲ' ಎಂದು ಅಧಿಕಾರ ಸ್ವೀಕರಿಸಿ ನಾಡಿನ ಜನರಿಗೆ ಸುಳ್ಳು ಹೇಳಿರುವ ಸಚಿವರನ್ನು ಸಂಪುಟದಿಂದ ವಜಾ ಮಾಡಬೇಕು. ಮಾಧ್ಯಮಗಳಿಗೆ ಸುಳ್ಳು ಮಾಹಿತಿ ಬಿಡುಗಡೆ ಮಾಡಿರುವ ಸಚಿವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಸರಕಾರ ಬೇಷರತ್ತಾಗಿ ನಾಡಿನ ಜನರ ಕ್ಷಮೆ ಕೇಳಬೇಕು' ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
View more
Sat, 25 Jun 2022 20:24:47Office Staff
ಮಹಾರಾಷ್ಟ್ರದಲ್ಲಿ ರಾಜಕೀಯ ಬಿನ ನಡುವೆ ಕೇಂದ್ರ ಸರಕಾರದ ಸಚಿವರೊಬ್ಬರು ಎನ್ ಸಿಪಿ ವರಿಷ್ಠ ಶರದ್ ಪವಾರ್ ಅವರಿಗೆ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಶಿವಸೇನೆಯ ಸಂಸದ ಸಂಜಯ್ ರಾವುತ್ ಶುಕ್ರವಾರ ಆರೋಪಿಸಿದ್ದಾರೆ.
View more
Sat, 25 Jun 2022 20:15:47Office Staff
ಅಸ್ಸಾಮಿನಲ್ಲಿರುವ ಸಚಿವ ಏಕನಾಥ ಶಿಂದೆ ನೇತೃತ್ವದ ಬಂಡಾಯ ಶಾಸಕರ ಬಣಕ್ಕೆ ಶಿವಸೇನೆಯ ಇನ್ನೋರ್ವ ಶಾಸಕ ಸೇರಿದ್ದಾರೆ. ಇದರಿಂದ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಗೆ ಮತ್ತೊಂದು ಹಿನ್ನಡೆ ಉಂಟಾಗಿದೆ.
View more
Sat, 25 Jun 2022 16:17:02Office Staff
ಕಾರವಾರದ ಗಿರಿಜಾ ಬಾಯಿ ಸೈಲ್ ಮೆಮೋರಿಯಲ್ ಎಜ್ಯುಕೇಷನ್ ಟ್ರಸ್ಟ ಮತ್ತು ಇಂಡಿಯಾನಾ ಆಸ್ಪತ್ರೆ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಜೂನ್ 25 ಹಾಗೂ 26 ರಂದು ಕಾರವಾರದ ಹಿಂದು ಹೈಸ್ಕೂಲ್ ನಲ್ಲಿ ಕ್ಯಾನ್ಸರ್ ತಪಾಸಣಾ ಮತ್ತು ಬೃಹತ್ ವೈದ್ಯಕೀಯ ಶಿಬಿರ ನಡೆಯಲಿದೆ ಎಂದು ಜಿ ಎಸ್ ಐ ಟಿ ಚೇರ್ಮನ್ ಮಾಜಿ ಶಾಸಕ ಸತೀಶ್ ಸೈಲ್ ಮತ್ತು ಇಂಡಿಯಾನಾ ಆಸ್ಪತ್ರೆ ಅಧ್ಯಕ್ಷ ಡಾ. ಆಲಿ ಕುಂಬ್ಳೆ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
View more