Mon, 20 Jun 2022 16:08:25Office Staff
ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಭಟ್ಕಳ ತಾಲೂಕಿನಲ್ಲಿ ವಿಜ್ಞಾನ ವಿಭಾಗದಲ್ಲಿ ಸಿದ್ಧಾರ್ಥ ಪಿಯು ಕಾಲೇಜಿನ ಹರೀಶ ಹೆಬ್ಬಾರ್ 98.S (591), ವಾಣಿಜ್ಯ ವಿಭಾಗದಲ್ಲಿ ದಿ ನ್ಯೂ ಇಂಗ್ಲೀಷ್ ಪಿಯು ಕಾಲೇಜಿನ ಶ್ರೀನಿಧಿ ಪೈ 97.83% (587) ಕಲಾ ವಿಭಾಗದಲ್ಲಿ ಹಾಗೂ ಭಟ್ಕಳ, ಅಂಜುಮನ್ ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿನಿ ಮುಸ್ಕಾನ್ ಖಾನ್ 96.16% (580) ಅಂಕಗಳೊಂದಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.
View more
Sun, 19 Jun 2022 13:36:29Office Staff
ಉಡುಪಿ : ಹಲಸು ಬೆಳೆಗಾರರು ಗ್ರಾಹಕರಿಗೆ ನೇರವಾಗಿ ತಾವು ಬೆಳೆದ ಉತ್ಪನ್ನಗಳನ್ನು ಮಾರಾಟ ಮಾಡಿ ಲಾಭ ಪಡೆಯಲು ಹಲಸು ಮೇಳ ಕಾರ್ಯಕ್ರಮವು ಹೆಚ್ಚಿನ ಪ್ರಯೋಜನಕಾರಿಯಾಗಲಿದೆ ಎಂದು ನಗರಸಭೆ ಅಧ್ಯಕ್ಷೆ ಸುಮಿತ್ರ ಎಸ್. ನಾಯಕ್ ಹೇಳಿದರು
ಅವರು ದೊಡ್ಡಣ ಗುಡ್ಡೆ ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರದ ರೈತ ಸೇವಾ ಕೇಂದ್ರದದಲ್ಲಿ ನಡೆದ ಹಲಸು ಮತ್ತು ಜೇನು ಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟಿಸಿ ಮಾತನಾಡಿದರು.
ರೈತರು ತಾವು ಬೆಳದಂತಹ ಹಲಸನ್ನು ಸಗಟು ಮಾರಾಟಗಾರರಿಗೆ ಅಲ್ಪ ಮೊತ್ತಕ್ಕೆ
View more
Sun, 19 Jun 2022 13:30:52Office Staff
ಉಡುಪಿ : ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಒಂದು ತಂಡದ ರೀತಿಯಲ್ಲಿ ಕೆಲಸ ನಿರ್ವಹಿಸಿದರೆ ಸಾರ್ವಜನಿಕರ ಎಲ್ಲಾ ಸಮಸ್ಯೆಗಳಿಗೆ ಶೀಘ್ರದಲ್ಲಿ ನ್ಯಾಯಯುತ ಪರಿಹಾರ ಒದಗಿಸಲು ಸಾಧ್ಯವಾಗಲಿದೆ ಎಂದು ಶಾಸಕ ಕೆ. ರಘುಪತಿ ಭಟ್ ಹೇಳಿದರು.
View more
Sun, 19 Jun 2022 04:59:27Office Staff
ಕುಮಟಾ : ಪಿಯುಸಿ ಫಲಿತಾಂಶದಲ್ಲಿ ಅನುತ್ತೀರ್ಣನಾದ ಹಿನ್ನಲೆಯಲ್ಲಿ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ್ದಾನೆ.
ಪ್ರಣಮ್ ಈಶ್ವರ್ ನಾಯ್ಕ(18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.
ಎ.ವಿ ಬಾಳಿಗಾ ಕಾಲೇಜಿನಲ್ಲಿ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಪ್ರಣಮ್, ವಿಜ್ಞಾನ ವಿಭಾಗದಲ್ಲಿ ಪರೀಕ್ಷೆ ಬರೆದಿದ್ದನು.
View more
Sun, 19 Jun 2022 02:42:53Office Staff
ಭಟ್ಕಳ : ಪ್ರವಾದಿ ಮಹಮ್ಮದ್ ಪೈಗಂಬರ್ ಅವರನ್ನು ನಿಂದಿಸಿರುವ ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ರನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ಭಟ್ಕಳದ ಸಮಾಜ ಸೇವಾ ಸಂಘಟನೆ ಮಜ್ಲಿಸ್-ಎ-ಇಸ್ಲಾ-ಒ-ತಂಝೀಮ್ ಸರ್ಕಾರವನ್ನು ಒತ್ತಾಯಿಸಿದೆ. ಇದೇ ವೇಳೆ ಭಟ್ಕಳ ಮಾತ್ರವಲ್ಲದೆ ಜಿಲ್ಲಾ ಮಟ್ಟದಲ್ಲೂ ಬೃಹತ್ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದೆ.
ಈ ಸಂಬಂಧ ಭಟ್ಕಳ ಸಹಾಯಕ ಆಯುಕ್ತೆ ಮಮತಾದೇವಿ ಅವರ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಿದ್ದಾರೆ.
View more
Sat, 18 Jun 2022 03:11:27Office Staff
ಕಾರವಾರ : ಪಿಡಬ್ಲೂಡಿ ಸಹಾಯಕ ಇಂಜಿನಿಯರ್ ಮೇಲೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ನಗದು ಹಾಗೂ ಬೆಳ್ಳಿ ಮತ್ತು ಬಂಗಾರವನ್ನ ವಶಪಡಿಸಿಕೊಂಡಿದ್ದಾರೆ.
View more