Sun, 19 May 2024 00:06:17Office Staff
ಮಳೆಗಾಲದಲ್ಲಿ ಕಂಡು ಬರಬಹುದಾದ ಡೆಂಗಿ, ಚಿಕುನ್ ಗುನ್ಯಾ, ಮಲೇರಿಯಾ, ಮಿದುಳು ಜ್ವರ ಮತ್ತಿತರ ರೋಗಗಳ ಲಕ್ಷಣಗಳು, ಅವುಗಳ ಹರಡುವಿಕೆ ಹಾಗೂ ನಿಯಂತ್ರಣ ಕುರಿತಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತಂತೆ ಸಾರ್ವಜನಿಕರಿಗೆ ಹೆಚ್ಚಿನ ಜಾಗೃತಿ ಮೂಡಿಸಿ, ಜಿಲ್ಲೆಯಾದ್ಯಂತ ವ್ಯಾಪಕ ಅರಿವು ಕಾರ್ಯಕ್ರಗಳನ್ನು ಆಯೋಜಿಸಿ ಎಂದ ಅವರು, ಎಲ್ಲಾ ಸಾಂಕ್ರಾಮಿಕ ರೋಗಗಳಿಗೆ ಅಗತ್ಯವಿರುವ ಚುಚ್ಚುಮದ್ದು ಮತ್ತು ಔಷಧಿಗಳನ್ನು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಇಟ್ಟುಕೊಳ್ಳುವಂತೆ ನಿರ್ದೇಶನ ನೀಡಿದರು.
View more
Sun, 19 May 2024 00:01:39Office Staff
ನೀರಿನ ಸಮಸ್ಯೆಯಿಂದಾಗಿ ಭಟ್ಕಳದ ನಗರ ಮತ್ತು ಗ್ರಾಮೀಣ ಪ್ರದೇಶಗಳ ನಿವಾಸಿಗಳು ಟ್ಯಾಂಕರ್ ಮೂಲಕ ಸರಬರಾಜು ಮಾಡುವ ನೀರಿಗಾಗಿ ಸರತಿ ಸಾಲಿನಲ್ಲಿ ನಿಲ್ಲುವಂತೆ ಮಾಡಿದೆ. ಅಲ್ಲದೆ ಹಲವು ಗ್ರಾಮೀಣ ಪ್ರದೇಶದಲ್ಲಿ ಶುದ್ಧ ಕುಡಿಯುವ ನೀರಿನ ಬದಲು ಆರೋಗ್ಯಕ್ಕೆ ಹಾನಿಯುಂಟು ಮಾಡುವ ಅಶುದ್ಧ ನೀರು ಸೇವಿಸುವ ಆಪಾಯವನ್ನು ಎದುರಿಸುತ್ತಿದ್ದಾರೆ.
View more
Sat, 18 May 2024 13:35:24Office Staff
ಹುಬ್ಬಳ್ಳಿ-ಧಾರವಾಡ ನಗರದಲ್ಲಿ ಪದೇ ಪದೇ ಸಂಭವಿಸುತ್ತಿರುವ ಕೊಲೆ ಪ್ರಕರಣಗಳ ಕುರಿತು ಪರಿಶೀಲನೆ ನಡೆಸಿ ಕೂಡಲೇ ವರದಿ ಸಲ್ಲಿಸುವಂತೆ ಎಡಿಜಿಪಿ ಅವರಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್
ತಿಳಿಸಿದ್ದಾರೆ.
View more
Sat, 18 May 2024 01:10:38Office Staff
ಏಪ್ರಿಲ್ 21ರಂದು ಸೂಡಿಗದ್ದೆಬಳಿಯ ಹಡಿನ ಮುಳ್ಳಿ ಹಿತ್ಲು ಸಮುದ್ರದಲ್ಲಿ ಇಬ್ಬರು, ಮೇ 5 ರಂದು ಮುರ್ಡೇಶ್ವರ ಸಮುದ್ರದಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿದ್ದರು. ಪಾರ್ವತಿ ಹಾಗು ಸೂರಜ್ ಸೇರಿದಂತೆ ಕಳೆದ 30 ದಿನಗಳಲ್ಲಿ ಇದು ಮೂರನೆಯ ಘಟನೆಯಾಗಿದ್ದು ಇಲ್ಲಿಯ ತನಕ ಒಟ್ಟು 6 ಜನ ನೀರಿನಲ್ಲಿ ಮುಳುಗಿ ತಮ್ಮ ಪ್ರಾಣ ಕಳೆದುಕೊಂಡಂತಾಗಿದೆ.
View more
Fri, 17 May 2024 03:40:30Office Staff
ಕಾರವಾರ : ಜಿಲ್ಲೆಯಲ್ಲಿ ಹಾದು ಹೋಗಿರುವ ಚತುಷ್ಪತ ರಾಷ್ಟಿಯ ಹೆದ್ದಾರಿಯ ಕಾಮಗಾರಿಯಲ್ಲಿ , ಉದ್ದೇಶಿತ ಯೋಜನೆಯಲ್ಲಿ ತಿಳಿಸಿರುವ ಎಲ್ಲಾ ಕಾಮಗಾರಿಗಳನ್ನು ಸಂಪೂರ್ಣವಾಗಿ ಮುಕ್ತಾಯಗೊಳಿಸುವಂತೆ, ಕಾಮಗಾರಿಯ ನೇತೃತ್ವ ವಹಿಸಿಕೊಂಡಿರುವ ರಾಷ್ಟಿಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದರು.
View more
Thu, 16 May 2024 21:38:10Office Staff
ಭಯೋತ್ಪಾದನೆ ನಿಗ್ರಹ ಕಾನೂನಿನಡಿ ಸುದ್ದಿ ವೆಬ್ಸೈಟ್ ನ್ಯೂಸ್ಕ್ಲಿಕ್'ನ ಪ್ರಧಾನ ಸಂಪಾದಕ ಪ್ರಬೀರ್ ಪುರಕಾಯಸ್ಥರ ಬಂಧನವು ಕಾನೂನುಬಾಹಿರವಾಗಿದೆ ಎಂದು ಮಹತ್ವದ ತೀರ್ಪೊಂದರಲ್ಲಿ ಸುಪ್ರೀಂ ಕೋರ್ಟ್ ಬುಧವಾರ ಘೋಷಿಸಿದೆ ಹಾಗೂ ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಆದೇಶಿಸಿದೆ.
View more
Thu, 16 May 2024 19:43:54Office Staff
ಗೌರವಾನ್ವಿತ ಪ್ರಧಾನ ಕಾರ್ಯದರ್ಶಿಯವರಿಗೆ ಸಮಗ್ರ ಮನವಿಯನ್ನು ಸಲ್ಲಿಸಿದ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಬೆಂಗಳೂರು ಅವರಿಗೆ AIITA ಕರ್ನಾಟಕ ದ ರಾಜ್ಯಾಧ್ಯಕ್ಷ ಎಂ.ಆರ್.ಮಾನ್ವಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿ ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಿದ್ದು, ರಜಾದಿನಗಳಲ್ಲಿ ತರಗತಿಗಳನ್ನು ನಡೆಸಬೇಕೆಂಬ ಆದೇಶವನ್ನು ಹಿಂಪಡೆಯಲು ಮತ್ತು ಕಾರ್ಯಸಾಧ್ಯವಾದರೆ ಮೇ 29 ರ ನಂತರ ಅವುಗಳನ್ನು ಮರುಹೊಂದಿಸಲು ಪರಿಗಣಿಸುವಂತೆ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.
View more
Thu, 16 May 2024 14:30:51Office Staff
ಹುಬ್ಬಳ್ಳಿಯ ನೇಹಾ ಹಿರೇಮಠ, ಕೊಡಗು ಜಿಲ್ಲೆಯ ಸೋಮವಾರಪೇಟೆಯ ಮೀನಾ ಹತ್ಯೆ ಪ್ರಕರಣ ಮಾಸುವ ಮುನ್ನವೇ ಪ್ರೀತಿ ನಿರಾಕರಿಸಿದ ಕಾರಣಕ್ಕೆ ಯುವತಿಯೊಬ್ಬಳನ್ನು ಚಾಕುವಿನಿಂದ ಇರಿದು ಹತ್ಯೆಗೈದ ಇನ್ನೊಂದು ಘಟನೆ ಹುಬ್ಬಳ್ಳಿ ತಾಲೂಕಿನ ವೀರಾಪುರದಲ್ಲಿ ಬುಧವಾರ ಬೆಳಗ್ಗೆ ನಡೆದಿರುವುದು ವರದಿಯಾಗಿದೆ.
View more
Thu, 16 May 2024 02:33:47Office Staff
ಪ್ರಸಕ್ತ ಶೈಕ್ಷಣಿಕ ಸಾಲಿಗೆ ಉತ್ತರಕನ್ನಡ ಜಿಲ್ಲೆಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ ಮುಂಡಗೋಡ ತಾಲ್ಲೂಕಿನ ಕರಗಿನಕೊಪ್ಪದ ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜು, ಶಿರಸಿ ತಾಲ್ಲೂಕಿನ ಕಲ್ಲಿ ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜು, ಹಳಿಯಾಳದ ಮದನ್ನಳ್ಳಿಯ ಅಟಲ್ ಬಿಹಾರಿ ವಾಜಪೇಯಿ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗ (PCMB &PCMC) ತರಗತಿಗೆ ದಾಖಲಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
View more