Fri, 03 May 2024 23:52:13Office Staff
ಕುಮಟಾ: ಜೆ.ಡಿ.ಎಸ್. ಮುಖಂಡ ಹಾಗೂ ಭಟ್ಕಳದ ತಂಝೀಮ್ ಸಂಸ್ಥೆಯ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ ಜೆ.ಡಿ.ಎಸ್ ಪಕ್ಷ ತ್ಯಜಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯರ ಉಪಸ್ಥಿತಿಯಲ್ಲಿ ಕಾಂಗ್ರೇಸ್ ಪಕ್ಷ ಸೇರ್ಪಡೆಗೊಂಡರು.
View more
Fri, 03 May 2024 23:48:16Office Staff
ಕುಮಟಾ: ಸಚಿವ ಮಂಕಾಳ ವೈದ್ಯರು, ನಮ್ಮ ಅಭ್ಯರ್ಥಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಲೇಬೇಕೆಂಬ ಸಂಕಲ್ಪ ಮಾಡಿದ್ದಾರೆ. ಪ್ರಣಾಳಿಕೆಯಲ್ಲೂ ಹೇಳಿದ್ದೇವೆ, ಕುಮಟಾದಲ್ಲಿ ಆಸ್ಪತ್ರೆ ಮಾಡೇ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಘೋಷಿಸಿದರು.
View more
Fri, 03 May 2024 23:45:53Office Staff
ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವ ಪ್ರಧಾನಿಯವರ ರೀತಿ? ಮೋದಿ ಒಬ್ಬ ಒಳ್ಳೆ ನಾಟಕಕಾರ; ಇವೆಂಟ್ ಮ್ಯಾನೇಜರ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
View more
Fri, 03 May 2024 20:19:40Office Staff
ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ಮೋದಿ ಮೋದಿ ಎಂದು ಜೈಕಾರ ಹಾಕಿದ ಯುವಕರಿಗೆ ಅವರು ತಿರುಪತಿ ತಿಮ್ಮಪ್ಪನ ನಾಮ ಹಾಕಿದರು. ನರೇಂದ್ರ ಮೋದಿ ಸುಳ್ಳಿನ ಸರದಾರ, ಬಿಜೆಪಿ ಸುಳ್ಳು ಉತ್ಪಾದನಾ ಕೇಂದ್ರ; ಸುಳ್ಳೇ ಅವರ ಮನೆ ದೇವ್ರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.
View more
Fri, 03 May 2024 19:53:03Office Staff
ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ವಿಚಾರದಲ್ಲಿಯೂ ರಾಜಕೀಯ ಮಾಡಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು.
View more
Fri, 03 May 2024 17:23:35Office Staff
ಶಿರಸಿ: ೨೦೨೪ ರ ಲೋಕಸಭಾ ಚುನಾಚಣೆ ಇನ್ನೇನು ಕೆಲ ದಿನಗಳು ಬಾಕಿ ಇದ್ದಾಗಲೇ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಕಾಂಗ್ರೆಸ್ ಮುಖಂಡ ಸೇರಿದಂತೆ ಆರು ಉದ್ಯಮಿಗಳ ಮನೆಗಳ ಮೇಲೆ ಮೇಲೆ ಶುಕ್ರವಾರ ಬೆಳಗ್ಗೆ ಎಕಾಏಕಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾಗಿ ವರದಿಯಾಗಿದೆ.
View more
Fri, 03 May 2024 04:54:32Office Staff
ಮತದಾರರಿಗೆ ಹಣ, ಉಡುಗೊರೆ ಮತ್ತಿತರ ಆಮಿಷಗಳನ್ನು ಒಡ್ಡುವುದರ ಕುರಿತಂತೆ ತೀವ್ರ ನಿಗಾ ವಹಿಸಬೇಕು, ಈ ಕುರಿತಂತೆ ದೂರುಗಳು ಬಂದ ತಕ್ಷಣವೇ , ಸ್ಥಳಕ್ಕೆ ತೆರಳಿ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲೆಗೆ ವಿಶೇಷ ವೆಚ್ಚ ವೀಕ್ಷಕರಾಗಿ ನೇಮಕಗೊಂಡಿರುವ ಬಿ.ಮುರಳಿ ಕುಮಾರ್ ಸೂಚನೆ ನೀಡಿದರು.
View more
Fri, 03 May 2024 04:36:39Office Staff
ಮತಗಟ್ಟೆಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು, ತರಬೇತಿಯ ಅವಧಿಯಲ್ಲಿ ತಮ್ಮಲ್ಲಿರುವ ಎಲ್ಲಾ ಗೊಂದಲಗಳನ್ನು ಬಗೆಹರಿಸಿಕೊಂಡು, ಮತದಾನದ ಯಾವುದೇ ಗೊಂದಲಗಳಿಗೆ ಒಳಗಾಗದೇ ಅತ್ಯಂತ ಯಶಸ್ವಿಯಾಗಿ ಚುನಾವಣೆ ನಡೆಯುವಂತೆ ಕಾರ್ಯನಿರ್ವಹಿಸಿ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಹೇಳಿದರು
View more
Fri, 03 May 2024 04:30:15Office Staff
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸದಂತೆ, ಮೇ 7ರಂದು ನಡೆಯಲಿರುವ ಹಿನ್ನಲೆ ಜಿಲ್ಲೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಕಾರವಾರ ತಾಲೂಕು ಪಂಚಾಯತ್ ವತಿಯಿಂದ ಮತದಾನ ಜಾಗೃತಿ ನಿಮಿತ್ತ ಬುಧವಾರ ಮಾಜಾಳಿ ಕಡಲತೀರ ಪ್ರದೇಶದಲ್ಲಿ ಟ್ರೆಕ್ಕಿಂಗ್ ನಡೆಸಲಾಯಿತು.
View more