Tue, 16 Jan 2024 08:43:20Office Staff
ಪ್ರಧಾನಿ ನರೇಂದ್ರ ಮೋದಿಯವರು ಏಕೆ ಮಣಿಪುರಕ್ಕೆ ಭೇಟಿ ನೀಡಿಲ್ಲ ಎಂದು ಜನರು ನಮ್ಮನ್ನು ಕೇಳುತ್ತಿದ್ದಾರೆ. ರಾಹುಲ್ ಗಾಂಧಿಯವರು ಸಂಸತ್ತಿನಲ್ಲಿ ಈ ವಿಷಯವನ್ನು ಎತ್ತಬೇಕು ಮತ್ತು ಮಣಿಪುರಕ್ಕೆ ಬಂದು ಜನರನ್ನು ಭೇಟಿಯಾಗುವಂತೆ ಪ್ರಧಾನಿಯವರನ್ನು ಆಗ್ರಹಿಸಬೇಕು ಎಂದು ಪ್ರತಿಯೊಬ್ಬರೂ ಬಯಸಿದ್ದಾರೆ.
View more
Tue, 16 Jan 2024 08:37:31Office Staff
ಕಾಂಗ್ರೆಸ್ ಮಣಿಪುರದ ಜನರೊಂದಿಗೆ ನಿಂತಿದೆ ಮತ್ತು ರಾಜ್ಯವನ್ನು ಮತ್ತೆ ಶಾಂತಿಯುತ ಹಾಗೂ ಸೌಹಾರ್ದಯುತವಾಗಿಸಲು ಬಯಸಿದೆ ಎಂದು ಪಕ್ಷದ ನಾಯಕ ರಾಹುಲ್ ಗಾಂಧಿ ಸೋಮವಾರ ಹೇಳಿದರು. ತನ್ನ ಭಾರತ ಜೋಡೊ ನ್ಯಾಯ ಯಾತ್ರೆಯ ಎರಡನೇ ದಿನ ಅವರು ಸ್ಥಳೀಯರೊಂದಿಗೆ ಸಂವಾದವನ್ನು ನಡೆಸಿದರು.
View more
Tue, 16 Jan 2024 06:42:21Office Staff
ಜನಾಂಗೀಯ ಹಿಂಸಾಚಾರದಿಂದ ತತ್ತರಿಸಿರುವ ಮಣಿಪುರದಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ಮರುಸ್ಥಾಪಿಸುವ ಭರವಸೆಯೊಂದಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ರವಿವಾರ ರಾಜ್ಯದ ಥ್ಬಾಲ್ನಿಂದ ತನ್ನ 'ಭಾರತ ಜೋಡೊ ನ್ಯಾಯ ಯಾತ್ರೆ 'ಯನ್ನು ಆರಂಭಿಸಿದರು.
View more
Tue, 16 Jan 2024 06:32:32Office Staff
ಹಿಟ್-ಆ್ಯಂಡ್-ರನ್ ಅಪಘಾತಗಳಲ್ಲಿ ಮೃತ ಪಟ್ಟವರಿಗೆ ಮತ್ತು ಗಂಭೀರ ಗಾಯಾಳುಗಳಿಗೆ ಪರಿಹಾರ ಮೊತ್ತವನ್ನು ವಾರ್ಷಿಕವಾಗಿ ಹೆಚ್ಚಿಸಬಹುದೇ ಎನ್ನುವುದನ್ನು ಪರಿಗಣಿಸುವಂತೆ ಸರ್ವೋಚ್ಚ ನ್ಯಾಯಾಲಯವು ಕೇಂದ್ರಕ್ಕೆ ನಿರ್ದೇಶ ನೀಡಿದೆ. ಎಂಟು ವಾರಗಳಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳುವಂತೆ ಸರಕಾರಕ್ಕೆ ಸೂಚಿಸಿದ ನ್ಯಾಯಾಲಯವು ವಿಚಾರಣೆಯನ್ನು ಎ.22ಕ್ಕೆ ಮುಂದೂಡಿದೆ.
View more
Tue, 16 Jan 2024 06:15:10Office Staff
ದೇವರು ಮತ್ತು ಸಾವಿನ ವಿಚಾರದಲ್ಲಿ ರಾಜಕೀಯ ಮಾಡುವುದು ಬಿಜೆಪಿಗರ ಕೆಟ್ಟ ಚಾಳಿಯಾಗಿದೆ. ಈಗ ರಾಮನನ್ನು ತಗೊಂಡಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಆರೋಪಿಸಿದ್ದಾರೆ.
View more
Tue, 16 Jan 2024 06:06:25Office Staff
14 ಪ್ರತಿಪಕ್ಷಗಳ ನಾಯಕರು ಭಾಗವಹಿಸಿದ್ದ ವರ್ಚುವಲ್ ಸಭೆಯಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆಯವರನ್ನು ಇಂಡಿಯಾ ಮೈತ್ರಿಕೂಟದ ಅಧ್ಯಕ್ಷರನ್ನಾಗಿ ನೇಮಕಗೊಳಿಸಲಾಗಿದೆ.
View more
Tue, 16 Jan 2024 05:34:23Office Staff
ಅಯೋಧ್ಯೆಯಲ್ಲಿ ಜ.22ರಂದು ನಡೆಯಲಿರುವ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ತಾನು ಭಾಗವಹಿಸುವುದಿಲ್ಲ ಎಂಬ ನಿಲುವನ್ನು ಪುನರುಚ್ಚರಿಸಿರುವ ಪುರಿ ಶಂಕರಾಚಾರ್ಯ ಶ್ರೀ ನಿಶ್ಚಲಾನಂದ ಸರಸ್ವತಿ ಅವರು ಧಾರ್ಮಿಕ ಮತ್ತು ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ರಾಜಕೀಯ ಹಸ್ತಕ್ಷೇಪ ಅಪೇಕ್ಷಣೀಯವಲ್ಲ ಮತ್ತು ಸಂವಿಧಾನವೂ ಅದಕ್ಕೆ ಅವಕಾಶವನ್ನು ನೀಡುವುದಿಲ್ಲ ಎಂದು ಪುರಿ ಶಂಕರಾಚಾರ್ಯ ಶ್ರೀ ನಿಶ್ಚಲಾನಂದ ಸರಸ್ವತಿ ಅವರು ಹೇಳಿದ್ದಾರೆ.
View more
Tue, 16 Jan 2024 05:27:29Office Staff
ಉತ್ತರ ಕನ್ನಡ ಜಿಲ್ಲೆಯಲ್ಲಿ ಅಶಾಂತಿ ಸೃಷ್ಟಿಸಲು ಹಾಗೂ ಭಾಷಣ ಹಿನ್ನೆಲೆಯಲ್ಲಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ದ ಕುಮಟಾ ಠಾಣೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
View more
Tue, 16 Jan 2024 05:20:22Office Staff
ಗಾಝಾ ಯುದ್ಧವು ರವಿವಾರ ನೂರನೇ ದಿನಕ್ಕೆ ಕಾಲಿರಿಸಿದೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಶನಿವಾರ ಹಮಾಸ್ನ್ನು ದಮನಿಸುವ ತನ್ನ ಪ್ರತಿಜ್ಞೆಯನ್ನು ಪುನರುಚ್ಚರಿಸಿರುವ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆಯು ಗಾಝಾ ಯುದ್ಧವು ಮಾನವೀಯತೆಯನ್ನು ಕಳಂಕಿತಗೊಳಿಸುತ್ತಿದೆ ಎಂದು ಕಳವಳವನ್ನು ವ್ಯಕ್ತಪಡಿಸಿದೆ.
View more