ಕಾರವಾರ: ಪ್ರಸುತ್ತ ಸಾಲಿಗೆ ರಾಷ್ಟಿçಯ ಆರೋಗ್ಯ ಅಭಿಯಾನ ಅಡಿಯಲ್ಲಿ ವಿವಿಧ ಕಾರ್ಯಕ್ರಮಗಳಿಗಾಗಿ ವೈದ್ಯಾಧಿಕಾರಿಗಳ ಹುದ್ದೆಗಳು (ಎಂ.ಬಿ.ಬಿ.ಎಸ್. ವಿದ್ಯಾರ್ಹತೆ) ಜಿಲ್ಲೆಯ ವಿವಿಧ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇದ್ದು, ಹಾಗೂ ಮುಂದಿನ ದಿನಗಳಲ್ಲಿ ಖಾಲಿಯಾಗುವ ಹುದ್ದೆಗಳಿಗೆ ಮಾಸಿಕ ರೂ. 75,000/- ವೇತನ ನೀಡಲಾಗುವುದು.
ಆಸಕ್ತ ಎಂ.ಬಿ.ಬಿ.ಎಸ್. ವಿದ್ಯಾರ್ಹತೆ ಹೊಂದಿ ಕರ್ನಾಟಕ ಮೆಡಿಕಲ್ ಕೌನ್ಸಿಲ್‌ನಲ್ಲಿ ನೊಂದಣಿ ಹೊಂದಿದ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಪ್ರತಿ ದಿನ ಕಛೇರಿ ವೇಳೆಯಲ್ಲಿ ರಜಾ ದಿನಗಳನ್ನು ಹೊರತುಪಡಿಸಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿಗಳ ಕಛೇರಿಯಲ್ಲಿ ಮೂಲ ದಾಖಲಾತಿಯೊಂದಿಗೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.