ಅಂಕೋಲಾ : ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಟ್ರಾನ್ಸಪಾರ್ಮರ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ಅಂಕೋಲಾದಲ್ಲಿ ಸೋಮವಾರ ನಡೆದಿದೆ.
ತಾಲೂಕಿನ ಹಾರವಾಡದ ಬಳಿ ಈ ಘಟನೆ ನಡೆದಿದ್ದು, ಢಿಕ್ಕಿಯಾದ ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮವಾಗಿ ಕಾರಿನಲ್ಲಿದ್ದ ಓರ್ವ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ
ನಾಲ್ವರು ಗಾಯಗೊಂಡಿದ್ದಾರೆ.
ಆಂದ್ರಪ್ರದೇಶ ಮೂಲದ ರವಿತೇಜ ಉಪ್ಪಾರ (21) ಮೃತ ದುರ್ದೈವಿ. ಕಾರು ಚಾಲಕ ಪವನ , ಬಾಲಚಂದ್ರ ಕೈತಾವರ, ಮೋಹನ ಸಾಯಿ ಹಾಗೂ ಬೊಯೆಜಕುಮಾರ ಗಾಯಗೊಂಡವರಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಮುರ್ಡೇಶ್ವರ ದಿಂದ ಗೋವಾ ಕಡೆ ಐವರು ಕಾರಿನಲ್ಲಿ ತೆರಳುತ್ತಿದ್ದರು. ಅತೀ ವೇಗದ ಚಾಲನೆಯಿಂದ ಅಪಘಾತ ಸಂಭವಿಸಲು ಕಾರಣ ಎನ್ನಲಾಗಿದೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.