ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಅಂಗನವಾಡಿ ಕಾರ್ಯಕರ್ತೆಯರ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ

ಅಂಗನವಾಡಿ ಕಾರ್ಯಕರ್ತೆಯರ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ

Sun, 20 Aug 2023 01:28:44  Office Staff   S O News

ಕಾರವಾರ: ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ವಿವಿಧ ಕಾರಣಗಳಿಂದಾಗಿ ಖಾಲಿಯಾಗಿರುವ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಯ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡು ತಾತ್ಕಾಲಿಕ ಪಟ್ಟಿ ಪ್ರಕಟ ಮಾಡಲಾಗಿದೆ.

ಕಾರವಾರ-04, ಅಂಕೋಲಾ-02, ಕುಮಟಾ-02, ಹೊನ್ನಾವರ-03, ಭಟ್ಕಳ-01, ಶಿರಸಿ-02, ಸಿದ್ದಾಪುರ-01, ಯಲ್ಲಾಪುರ-07, ಮುಂಡಗೋಡ-02, ಹಳಿಯಾಳ-01 ಹಾಗೂ ಜೋಯಿಡಾ-01 ಆಯ್ಕೆಯಾಗಿರುವ ಅಂಗನವಾಡಿ ಕಾರ್ಯಕರ್ತೆಯರ ತಾತ್ಕಾಲಿಕ ಪಟ್ಟಿಯನ್ನು ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಹಾಗೂ ಸಂಬಂಧಪಟ್ಟ ಗ್ರಾಮ ಪಂಚಾಯತ್ ಮತ್ತು ಅಂಗನವಾಡಿ ಕೇಂದ್ರಗಳ ನಾಮಫಲಕಗಳಲ್ಲಿ ಪ್ರದರ್ಶಿಸಲಾಗಿದೆ. 

ಅರ್ಜಿ ಸಲ್ಲಿಸಿದವರಲ್ಲಿ ಯಾರಾದರೂ ಆಕ್ಷೇಪಿಸುವವರಿದ್ದಲ್ಲಿ ತಮ್ಮ ಆಕ್ಷೇಪಣೆಯನ್ನು ಸಮರ್ಪಕ ದಾಖಲೆಗಳೊಂದಿಗೆ ಆ.25 ಸಂಜೆ 5.30 ಗಂಟೆಯ ಒಳಗೆ ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಸಲ್ಲಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share: