ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಅಗ್ನಿವೀರ್ ನೇಮಕಾತಿಗೆ ಸಾರಿಗೆ ಸಂಪರ್ಕದ ವ್ಯವಸ್ಥೆ

ಅಗ್ನಿವೀರ್ ನೇಮಕಾತಿಗೆ ಸಾರಿಗೆ ಸಂಪರ್ಕದ ವ್ಯವಸ್ಥೆ

Sat, 03 Sep 2022 04:00:16  Office Staff   SO News

ಕಾರವಾರ  : ರಾಜ್ಯದ ವಿವಿಧ ಜಿಲ್ಲಾ ಹಾಗೂ ತಾಲೂಕಾ ಕೇಂದ್ರಗಳಲ್ಲಿ ಸೆ.1 ರಿಂದ ಸೆ.17 ರವರೆಗೆ ದಿನಾಂಕವಾರು ಅಗ್ನಿವೀರ ನೇಮಕಾತಿ ರ್ಯಾಲಿ ಜರುಗಲಿರುವುದರಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ಗದಗ, ಹಾವೇರಿ ಮತ್ತು ಉತ್ತರ ಕನ್ನಡ ವಿಭಾಗಗಳಿಂದ ರ್ಯಾಲಿಯಲ್ಲಿ ಭಾಗವಹಿಸಲು ಇಚ್ಛಿಸುವ ಅಭ್ಯರ್ಥಿಗಳಿಗಾಗಿ ಸಾರಿಗೆ ಸಂಪರ್ಕ ಕಲ್ಪಿಸಲಾಗಿದೆ.

ಹೆಚ್ಚುವರಿ ಸಾರಿಗೆ ಸೌಲಭ್ಯದ ಅವಶ್ಯಕತೆ ಇದ್ದಲ್ಲಿ ಸ್ಥಳೀಯ ಘಟಕ ವ್ಯವಸ್ಥಾಪಕರನ್ನು ಸಂಪರ್ಕಿಸಿ ಸಾರಿಗೆ ಸೌಲಭ್ಯದ ಪ್ರಯೋಜನ ಪಡೆದುಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂರವಾಣಿ ಸಂಖ್ಯೆ 7760991867 ಗೆ ಸಂಪರ್ಕಿಸಿ ಎಂದು ಹುಬ್ಬಳ್ಳಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕೇಂದ್ರ ಕಚೇರಿ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share: